DAKSHINA KANNADA
ಮಂಗಳೂರು ಇಂಡಿಯಾನ ಆಸ್ಪತ್ರೆಯಿಂದ ಹೊಸ ಸಾಧನೆ – ಒಂದೇ ದಿನ 2 ಅತ್ಯಾಧುನಿಕ ಹೃದ್ರೋಗ ಚಿಕಿತ್ಸೆ ನೀಡಿದ ಗರಿ.!
Published
2 years agoon
By
Adminದಕ್ಷಿಣ ಭಾರತದ ಹೆಸರಾಂತ ಹೃದ್ರೋಗ ಚಿಕಿತ್ಸಾ ಸಂಸ್ಥೆಯಾದ ಇಂಡಿಯಾನಾ ಆಸ್ಪತ್ರೆಯು ಒಂದೇ ದಿನದಲ್ಲಿ 2 ಅತ್ಯಾಧುನಿಕ ಹೃದ್ರೋಗ ಚಿಕಿತ್ಸೆ ನೀಡಿದ ಖ್ಯಾತಿಗೆ ಪಾತ್ರವಾಗಿದೆ.
ಮಂಗಳೂರು : ದಕ್ಷಿಣ ಭಾರತದ ಹೆಸರಾಂತ ಹೃದ್ರೋಗ ಚಿಕಿತ್ಸಾ ಸಂಸ್ಥೆಯಾದ ಇಂಡಿಯಾನಾ ಆಸ್ಪತ್ರೆಯು ಒಂದೇ ದಿನದಲ್ಲಿ 2 ಅತ್ಯಾಧುನಿಕ ಹೃದ್ರೋಗ ಚಿಕಿತ್ಸೆ ನೀಡಿದ ಖ್ಯಾತಿಗೆ ಪಾತ್ರವಾಗಿದೆ.
ಟ್ರಾನ್ಸ್ಕ್ಯಾತಿಟರ್ ಮಹಾಪಧಮನಿಯ ಕವಾಟದ ಅಳವಡಿಕೆ ಹಾಗೂ ಟ್ರಾನ್ಸ್ಕ್ಯಾತಿಟರ್ ಹೃದಯ ಕವಟು ಬದಲಿ (TAVITAVR) ಇವೆರಡೂ ಅತ್ಯಾಧುನಿಕ ಚಿಕಿತ್ಸೆಯನ್ನು ಒಂದೇ ದಿನದಲ್ಲಿ ಯಶಸ್ವಿಯಾಗಿ ಮುಗಿಸಿದ ಯಶಸ್ಸಿನ ಗರಿಯನ್ನು ತನ್ನ ಮುಡಿಗೆ ಸೇರಿಸಿಕೊಂಡಿದೆ.
ಈ ಎರಡು ಅತ್ಯಾಧುನಿಕ ಚಿಕಿತ್ಸೆಗಳನ್ನು ಆರಂಭಿಸಿ ಚತುರ್ವರ್ಷ ಪೂರ್ಣಗೊಂಡ ಸಂಕೇತವಾಗಿ ಒಂದೇ ದಿನದಲ್ಲಿ ಇವರಡೂ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿ ಮುಗಿಸಿದ್ದು ವಿಶೇಷವಾಗಿದೆ.
ಇವೆರಡೂ ಚಿಕಿತ್ಸೆಗಳು ಹೃದ್ರೋಗದ ಶಸ್ತ್ರಚಿಕಿತ್ಸೆಗೆ ಪರ್ಯಾಯ ಚಿಕಿತ್ಸೆಗಳಾಗಿ ಇಂಡಿಯಾನ ಆಸ್ಪತ್ರೆಯಲ್ಲಿ ನಾಲ್ಕು ವರ್ಷಗಳ ಹಿಂದೆ ಆರಂಭವಾಗಿದ್ದವು.
ಇವು ಹೆಚ್ಚು ಸರಳ ಮತ್ತು ಕಡಿಮೆ ನೋವಿನಿಂದ ಕೂಡಿದ ಚಿಕಿತ್ಸೆಯಾಗಿದ್ದು, ಹೃದಯ ಶಸ್ತ್ರಚಿಕಿತ್ಸೆ (ಓಪನ್ ಹಾರ್ಟ್ ಸರ್ಜರಿ)ಗೆ ಹೋಲಿಸಿದರೆ ತೀರಾ ಕಡಿಮೆ ಖರ್ಚಿನದ್ದಾಗಿದೆ.
ಇದೀಗ ಇಂಡಿಯಾನ ಆಸ್ಪತ್ರೆಯು, ಈ ಚಿಕಿತ್ಸೆಯನ್ನು ಆರಂಭಿಸಿದ ನಾಲ್ಕು ವರ್ಷಗಳಲ್ಲಿಯೂ 100 ಪ್ರತಿಶತ ಫಲಿತಾಂಶದೊಂದಿಗೆ ಯಶಸ್ಸನ್ನು ಕಂಡಿದ್ದು, ಶಸ್ತ್ರಚಿಕಿತ್ಸೆಯಿಲ್ಲದೆ ಹೃದ್ರೋಗಕ್ಕೆ ಚಿಕಿತ್ಸೆ ನೀಡುವ ಅತ್ಯುತ್ತಮ ಹೃದ್ರೋಗ ಚಿಕಿತ್ಸಾ ಸಂಸ್ಥೆ ಎಂಬುದು ಇನ್ನೊಮ್ಮೆ ಸಾಬೀತಾಗಿದೆ.
TAVI/TAVR ಹೃದಯ ಶಸ್ತ್ರಚಿಕಿತ್ಸೆಗೆ ಪರ್ಯಾಯ ಚಿಕಿತ್ಸೆಯಾಗಿ 2019ರಲ್ಲಿ ಮಂಗಳೂರಿನಲ್ಲೇ ಪ್ರಥಮ ಬಾರಿಗೆ ಇಂಡಿಯಾನ ಆಸ್ಪತ್ರೆಯಲ್ಲಿ ಆರಂಭವಾಯಿತು.
ಆ ಬಳಿಕ, 2020ರಲ್ಲಿ ಕರ್ನಾಟಕದಲ್ಲೇ ಮೊಟ್ಟ ಮೊದಲ ಬಾರಿಗೆ ಮಿಟ್ರಲ್ ರಿಪ್ಲೇಸ್ ಮೆಂಟ್ ಅನ್ನು ಯಶಸ್ವಿಯಾಗಿ ಮಾಡಿ ಮುಗಿಸಿದ ಶ್ರೇಯಸ್ಸನ್ನು ಇಂಡಿಯಾನಾ ಆಸ್ಪತ್ರೆ ತನ್ನದಾಗಿಸಿಕೊಂಡಿತು.
ಕಳೆದ ನಾಲ್ಕು ವರ್ಷಗಳಲ್ಲಿ, ಇಂಡಿಯಾನಾ ಆಸ್ಪತ್ರೆಯು ನಿರಂತರವಾಗಿ ಹೃದ್ರೋಗದ ಚಿಕಿತ್ಸೆಯನ್ನು ಸಂಪೂರ್ಣ ಯಶಸ್ಸು ಮತ್ತು ಆಶ್ಚರ್ಯಕರ ಫಲಿತಾಂಶದೊಂದಿಗೆ ನೀಡುತ್ತಿದೆ.
ಈ ಯಶಸ್ಸಿಗೆ ಇನ್ನೊಂದು ಗರಿ ಎನ್ನುವಂತೆ ಈಗ TAVI/TAVR ನ ಆಧುನಿಕ ಚಿಕಿತ್ಸೆಯನ್ನು ಒಂದೇ ದಿನದಲ್ಲಿ ಸಂಪೂರ್ಣ ಯಶಸ್ಸಿನೊಂದಿಗೆ ಮಾಡಿ ಮುಗಿಸಿದೆ.
ಭಾರತದಲ್ಲಿ ಹೃದ್ರೋಗದ ಹೆಚ್ಚಳವು ಮೊದ ಮೊದಲು ಜನರನ್ನು ಹೆಚ್ಚು ಆತಂಕಕ್ಕೀಡುಮಾಡಿತ್ತು. ಆದರೀಗ ಅತ್ಯಾಧುನಿಕ ಚಿಕಿತ್ಸೆಯಿಂದಾಗಿ ಸನ್ನಿವೇಶ ಬದಲಾಗಿದೆ.
ಜನರು ಮೊದಲಿನಂತೆ ಆತಂಕ ಪಡುತ್ತಿಲ್ಲ. ಹೃದ್ರೋಗಕ್ಕೆ ಶಸ್ತ್ರಚಿಕಿತ್ಸೆಗೆ ಪರ್ಯಾಯವಾಗಿ ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಅತ್ಯಾಧುನಿಕ ಚಿಕಿತ್ಸೆ ನೀಡುವಲ್ಲಿ ಇಂಡಿಯಾನ ಆಸ್ಪತ್ರೆಯು ಸದಾ ಮುಂದಿದೆ.
ನಮ್ಮಲ್ಲಿ ಈವರೆಗೆ, ಶಸ್ತ್ರ TAVI/TAVR, ಹೃದಯದ ಅಪಧಮನಿ, ಕವಾಟು ಬದಲಿ ಮಿಟ್ರಲ್ ವಾಲ್ಟ್ ರಿಪ್ಲೇಸ್ಮಂಟ್ ಮುಂತಾದ ಹೃದಯ ಶಸ್ತ್ರಚಿಕಿತ್ಸೆಯ ಬದಲಿಗೆ ಈ ಎಲ್ಲ ಪರ್ಯಾಯ ಚಿಕಿತ್ಸೆಗಳಲ್ಲವೂ 100 ಪ್ರತಿಶತ ಯಶಸ್ಸಿನೊಂದಿಗೆ ಕಾರ್ಯಾಚರಿಸಲಾಗಿದೆ” ಎಂದು ಆಸ್ಪತ್ರೆಯ ನಿರ್ದೇಶಕರಾದ ಡಾ. ಯೂಸುಫ್ ಕುಂಬ್ಳೆ ಅಭಿಪ್ರಾಯಿಸಿದ್ದಾರೆ.
“ಇಂಡಿಯಾನಾ ಹೃದ್ರೋಗ ಪರಿಣಿತ ವೈದ್ಯರ ತಂಡವು ಅತ್ಯಾಧುನಿಕ ಚಿಕಿತ್ಸೆಗಳ ತಂತ್ರಗಳೊಂದಿಗೆ ಸಂಪೂರ್ಣವಾಗಿ ಸಜ್ಜುಗೊಂಡಿದೆ.
ಮೆಟ್ರೋ ನಗರಗಳಿಗೆ ಹೋಲಿಸಿದರೆ ತೀರಾ ಕಡಿಮೆ ವೆಚ್ಚದಲ್ಲಿ ಈ ಪ್ರದೇಶದಲ್ಲಿ ರೋಗಿಗಳು ಶಸ್ತ್ರಚಿಕಿತ್ಸೆಯಿಲ್ಲದ ಉತ್ತಮ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಿದೆ. ಹೀಗಾಗಿಯೇ, ಇಂಡಿಯಾನಾ ಆಸ್ಪತ್ರೆಯು TAVI/TAVR ನಂತಹ ಅತ್ಯಾಧುನಿಕ ಕಾರ್ಯವಿಧಾನಗಳಿಗೆ ಹೆಚ್ಚು ಬೇಡಿಕೆಯಿರುವ ಆಸ್ಪತ್ರೆಯಾಗಿ ಪ್ರಸಿದ್ಧಿ ಪಡೆದಿದೆ”ಎಂದು ಡಾ. ಯೂಸುಫ್ ಕುಂಬ್ಳೆ ಹೇಳಿದ್ದಾರೆ.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ