Connect with us

    LATEST NEWS

    ಅಪಘಾತದಿಂದ ಕೋಮಾ ಸ್ಥಿತಿಯಲ್ಲಿರುವ ಬಡ ಮಹಿಳೆ; ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ಸಹಾಯಹಸ್ತ

    Published

    on

    ಅಪಘಾತದಿಂದ ಕೋಮಾ ಸ್ಥಿತಿಯಲ್ಲಿರುವ ಬಡ ಮಹಿಳೆ; ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ಸಹಾಯಹಸ್ತ..!

    A poor woman in a coma by accident; Donor’s Help for Treatment ..

    ಪುತ್ತೂರು: ಪುತ್ತೂರು ತಾಲೂಕಿನ ಕಸಬ ಪಡ್ಡಾಯೂರು ನಿವಾಸಿ ಸಚಿನಾ ಪಿ.ಜಿ ಯವರು ಕಳೆದ ತಿಂಗಳು ಅಂದ್ರೆ ಜನವರಿ 7 ರಂದು ಬಿ.ಸಿ ರೋಡು- ಬಂಟ್ವಾಳ ಸರ್ಕಲ್ ಸಮೀಪ ನಡೆದ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಗಾಯಗೊಂಡು ಇದೀಗ ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಾಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪೊಳಲಿ ನಿವಾಸಿಯಾಗಿರುವ ಖಾಸಗಿ ಬಸ್ಸು ಚಾಲಕರಾದ ದಯಾನಂದರವರ ಪತ್ನಿ ಸಚಿನಾ. ತೀರಾ ಬಡ ಕುಟುಂಬದವರಾದ ಇವರಿಗೆ ದೈನಂದಿನ ದುಡಿಮೆಯೆ ವರಮಾನ.

    ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಗೆ ಒಳಪಟ್ಟು ಒಂದು ತಿಂಗಳು ಕಳೆದರೂ ಕೋಮಾವಸ್ಥೆಯಲ್ಲೇ ಇದ್ದಾರೆ. ಈಗಾಗಲೇ ಆಸ್ಪತ್ರೆ ಶುಲ್ಕ 10,00,000 (ಹತ್ತು ಲಕ್ಷ) ರೂಪಾಯಿ ದಾಟಿದ್ದು,ತನ್ನಲ್ಲಿದ್ದದ್ದೆಲ್ಲವನ್ನೂ ವ್ಯಯಿಸಿಯಾಯಿತು.

    ಇದೀಗ ಈ ಕುಟುಂಬವು ಆಸ್ಪತ್ರೆಯ ಖರ್ಚನ್ನು ಭರಿಸಲು ಅಶಕ್ತವಾಗಿ ಕಣ್ಣೀರಿಡುತ್ತಿದೆ.ಬಡವರಾದ ಪತಿ ದಯಾನಂದ ಮತ್ತು ಅಣ್ಣ ಪ್ರದೀಪ್ ರವರು ತಿಂಗಳುಗಟ್ಟಲೆಯಿಂದ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದುದರಿಂದ ಇದ್ದ ಸಣ್ಣ ಖಾಸಗಿ ಕೆಲಸವನ್ನೂ ಮಾಡಲಾಗದೆ ವರಮಾನವೇ ಇಲ್ಲದಾಗಿದೆ.

    ಒಂದೂವರೆ ವರ್ಷದ ಹೆಣ್ಣು ಮಗವನ್ನೂ ಹೊಂದಿರುವ ಇವರು ಆಸ್ಪತ್ರೆ ಶುಲ್ಕವನ್ನು ಭರಿಸಲು ಸಾದ್ಯವಾಗದೆ ಪರದಾಡುತ್ತಿದ್ದಾರೆ. ಸಹೃದಯಿ ದಾನಿಗಳ ಸಹಾಯಕ್ಕಾಗಿ ಕಣ್ಣೀರಿನ ಬೇಡಿಕೆಯಿಟ್ಟು ಅಂಗಲಾಚುತ್ತಿದೆ..

    ದಯವಿಟ್ಟು ಈ ಬಡ ಕುಟುಂಬದ ಕಣ್ಣೀರೊರೆಸುವಲ್ಲಿ ತಾವುಗಳು ತಮ್ಮ ಕೈಲಾಗುವ ಸಹಾಯ ಮಾಡಬೇಕಾಗಿ ವಿನಂತಿ……

    PRADEEP P
    A/c 520101009871515
    IFSC code- CORP0000224
    CORPORATION BANK
    BOLWAR PUTTUR.
    Mbl no 8722454455

    Click to comment

    Leave a Reply

    Your email address will not be published. Required fields are marked *

    Baindooru

    ಬಿಗ್ ಬಾಸ್ ಗೆ ಮೂರನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ಹಿಂದೂ ಫೈರ್ ಬ್ರಾಂಡ್ ಚೈತ್ರಾ

    Published

    on

    ಮಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರೋ ಈ ಶೋಗೆ ಸ್ಪರ್ಧಿಗಳು ಯಾರಾಗ್ತಾರೆ ಅನ್ನೋದು ಕುತೂಹಲವೇ ಹೆಚ್ಚು. ಈ ಬಾರಿ ಅಂದ್ರೆ ಸೀಸನ್ 11 ರ ಸ್ಪರ್ಧಿಗಳು ಯಾರು ಅನ್ನೋ ‘ರಾಜ ರಾಣಿ’ ರಿಯಾಲಿಟಿ ಶೋ ನ ಗ್ರ್ಯಾಂಡ್ ಫಿನಾಲೇಲಿ ರಿವೀಲ್ ಆಗುತ್ತಿದೆ.

    ಎಂಟ್ರಿ ಕೊಟ್ಟ ಚೈತ್ರಾ!

    ಮೊದಲ ಸ್ಪರ್ಧಿಯಾಗಿ ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, 2ನೇ ಸ್ಪರ್ಧಿಯಾಗಿ ಲಾಯರ್ ಜಗದೀಶ್‌ ಬಿಗ್ ಬಾಸ್ ಮನೆ ಸೇರುತ್ತಿದ್ದು, ಇನ್ನೂ 3ನೇ ಸ್ಪರ್ಧಿಯಾಗಿ ‘ಬಿಗ್ ಬಾಸ್‌’ ಮನೆಯೊಳಗೆ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಎಂಟ್ರಿ ಕೊಟ್ಟಿದ್ದಾರೆ.
    ಖಡಕ್‌ ಮಾತುಗಳಿಂದಲೇ, ಹಿಂದುತ್ವದ ಹೆಸರಿನಲ್ಲಿ ಭಾಷಣ ಮಾಡಿ, ತಮ್ಮದೇ ಆದ ಅಪಾರ ಹಿಂಬಾಲಕರನ್ನು ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಚೈತ್ರಾ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
    ಅಲ್ಲದೇ, ಖಾಸಗಿ ವಾಹಿನಿ, ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ಇದೆ.

    ಇದನ್ನು ಓದಿ: ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!

    ವಂಚನೆ ಪ್ರಕರಣ:
    ಪ್ರಖರ ಭಾಷಣಗಳ ಮೂಲಕ ಗಮನ ಸೆಳೆದಿದ್ದ ಚೈತ್ರಾ ಕಾಂಟ್ರವರ್ಸಿಗಳ ಮೂಲಕವೂ ಸದ್ದು ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಟಿಕೆಟ್ ಕೊಡುವ ವಿಚಾರದಲ್ಲಿ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದಡಿ ಜೈಲು ಪಾಲಾಗಿದ್ದರು.
    ಸದ್ಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿರುವ ಚೈತ್ರಾ ಅಲ್ಲಿ ಹೇಗಿರ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.

    Continue Reading

    DAKSHINA KANNADA

    ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್

    Published

    on

    ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.

    ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.

    ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.

    ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್

    ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    Continue Reading

    LATEST NEWS

    ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 3 ಮೃ*ತ್ಯು, 7 ಗಾ*ಯ

    Published

    on

    ಮಂಗಳೂರು/ಹರಿಯಾಣ: ಹರಿಯಾಣದ ಸೋನಿಪತ್‌ನಲ್ಲಿ ಇಂದು (ಸೆ.28) ಬೆಳಿಗ್ಗೆ ಅಕ್ರಮವಾಗಿ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋ*ಟವು ಸಂಭವಿಸಿದ್ದು, 3 ಜನರ ಮೃ*ತ್ಯು ಹಾಗೂ 7 ಮಂದಿಗೆ ಗಂ*ಭೀರ ಗಾಯವಾಗಿದೆ.


    ವೇದ್ ಎಂಬುವವರ ಮನೆಯಲ್ಲಿ ಪಟಾಕಿಗಳನ್ನು ತಯಾರಿಸುತ್ತಿದ್ದು, ಮನೆಯಲ್ಲಿ ಸಂಗ್ರಹಿಸಿದ ರಾಸಾಯನಿಕಗಳಿಂದ ಬೆಂ*ಕಿ ಅವ*ಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
    ಮೂವರ ದೇಹವು ಛಿಧ್ರ*ವಾಗಿದ್ದು, ಗಾ*ಯಾಳುಗಳನ್ನು ಆಸ್ಪತ್ರೆಗೆ ಚಿಕಿ*ತ್ಸೆಗಾಗಿ ಕಳುಹಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಪಟಾಕಿ ಕಾರ್ಖಾನೆ ನಡೆಸುತ್ತಿದ್ದ ವೇದ್ ಪರಾರಿಯಾಗಿದ್ದಾನೆ. ಈ ಕುರಿತು ಸೋನಿಪತ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending