Connect with us

    DAKSHINA KANNADA

    ತೊಕ್ಕೊಟ್ಟಿನ ಸೆಕ್ಯೂರಿಟಿ ಗಾರ್ಡ್ ಮೊಯ್ದಿನ್ ಕುಟ್ಟಿಗೆ ರಾತ್ರಿ ಬೆಳಗಾಗುವುದರೊಳಗೆ ಒಲಿದಳಾ ಲಕ್ಷ್ಮೀ ..!

    Published

    on

    ಮಂಗಳೂರು: ಮಂಗಳೂರಿನ ಹೊರವಲಯದ ಉಳ್ಳಾಲ ತೊಕ್ಕೊಟ್ಟಿನ ಸ್ಮಾರ್ಟ್ ಪ್ಲಾನೆಟ್ ವಸತಿ ಮತ್ತು ವಾಣಿಜ್ಯ ಸಂಕೀರ್ಣದ ಸೆಕ್ಯುರಿಟಿ ಗಾರ್ಡ್ ಓರ್ವರಿಗೆ ಕೇರಳ ರಾಜ್ಯದ ಭಾಗ್ಯಮಿತ್ರ ಲಾಟರಿಯ ಒಂದು ಕೋಟಿ ರೂಪಾಯಿ ಬಂಪರ್ ಹೊಡೆದಿದೆ.  ಮೂಲತಃ ಕೇರಳ ರಾಜ್ಯದ  ಕ್ಯಾಲಿಕಟ್ ನಿವಾಸಿಯಾಗಿರುವ ಮೊಯ್ದಿನ್ ಕುಟ್ಟಿ (65) ಅವರಿಗೆ ಒಂದು ಕೋಟಿ ಬಂಪರ್ ಬಹುಮಾನ ಲಭಿಸಿದೆ.

    ಮೊಯ್ದಿನ್ ಕುಟ್ಟಿ ಅವರು ಕಳೆದ ಮೂರು ವರ್ಷಗಳಿಂದ ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿ ಸೆಕ್ಯುರಿಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ  ಕೇರಳದ ಲಾಟರಿ ತೆಗೆಯುವ ಹವ್ಯಾಸವಿದ್ದು ಸ್ನೇಹಿತರೊಬ್ಬರಿಂದ 500 ರೂಪಾಯಿ ಸಾಲ ಪಡೆದುಕೊಂಡು ಈ ಅದೃಷ್ಟಲಕ್ಷ್ಮೀ ಟಿಕೆಟ್ ಖರೀದಿಸಿದ್ದರು.

    ಕಳೆದ ವಾರ ಎಪ್ರಿಲ್ 4 ರಂದು ಡ್ರಾಗೊಳ್ಳುವ 100 ರೂಪಾಯಿ ಬೆಲೆಯ ಭಾಗ್ಯ ಮಿತ್ರ ಟಿಕೇಟನ್ನು ಉಪ್ಪಳದಲ್ಲಿ ಖರೀದಿಸಿದ್ದು ಒಂದು ಕೋಟಿ ರೂಪಾಯಿ ಬಂಪರ್ ಬಹುಮಾನ‌ ಗಿಟ್ಟಿಸಿ ಕೋಟ್ಯಾಧೀಶರಾಗಿದ್ದಾರೆ.

     

    news updates:

    ಲಾಟರಿ ಟಿಕೆಟ್ ಎಡಿಟ್ ಮಾಡಿಸಿ ಎಲ್ಲರ ಕಿವಿಗೆ ಹೂವಿಟ್ಟನಾ ಸೆಕ್ಯೂರಿಟಿ ಗಾರ್ಡ್  ಮೊಯ್ದೀನ್ ಕುಟ್ಟಿ ..

    ಕೇರಳ ರಾಜ್ಯದ ಭಾಗ್ಯಮಿತ್ರ ತಿಂಗಳ ಬಂಪರ್ ಒಂದು ಕೋಟಿ ರೂಪಾಯಿ ಬಹುಮಾನ ಗಿಟ್ಟಿಸಿಕೊಂಡಿರುವುದಾಗಿ ಎಲ್ಲರನ್ನು ನಂಬಿಸಿ ಮಾಧ್ಯಮಗಳಲ್ಲಿ ಪುಕ್ಕಟೆ ಪ್ರಚಾರ ಪಡೆದ ವಾಚ್ ಮನ್ ಮೊಯ್ದಿನ್ ಕುಟ್ಟಿ ದಿಢೀರ್ ನಾಪತ್ತೆಯಾಗಿದ್ದಾನೆ.

    ಮೂಲತಃ ಕೇರಳದ ಕ್ಯಾಲಿಕಟ್ ನಿವಾಸಿ(65) ಮೊಯ್ದಿನ್ ಕುಟ್ಟಿ ಕೋಟಿ ಲಾಟರಿಯ ಸುಳ್ಳು ಕತೆ ಕಟ್ಟಿ ಸಾಲದಾತರ ಹಿಡಿಶಾಪಕ್ಕೆ ಗುರಿಯಾಗಿದ್ದಾರೆ‌.

    ತೊಕ್ಕೊಟ್ಟಿನ ಸ್ಮಾರ್ಟ್ ಪ್ಲಾನೆಟ್ ಸಂಕೀರ್ಣದ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಟ್ಟಿ ಕಳೆದ ಎಪ್ರಿಲ್ 4 ರಂದು ಡ್ರಾಗೊಳ್ಳುವ ಭಾಗ್ಯಮಿತ್ರ ಲಾಟರಿಯನ್ನು 100 ರೂಪಾಯಿ ಕೊಟ್ಟು ಖರೀದಿಸಿದ್ದರು.

    ಎ.4 ರಂದು ಡ್ರಾ ಆದ ಭಾಗ್ಯಮಿತ್ರ ಲಾಟರಿಯ ವಿಜೇತ ನಂಬರನ್ನು  ಆನ್ ಲೈನ್ ನಲ್ಲಿ ತಿಳಿದ ಕುಟ್ಟಿ, ಆ ನಂಬರಿನ ಪ್ರಿಂಟ್ ಔಟ್ ತೆಗೆದು ತಾನು ಖರೀದಿಸಿದ ಲಾಟರಿಗೆ ಅಂಟಿಸಿ ಪೊಟೋ ಪ್ರಿಂಟ್ ಮಾಡಿಸಿ ತನಗೆ ಕೋಟಿ ಬಹುಮಾನ ಬಂದಿರುವುದಾಗಿ ತನ್ನ ಆಪ್ತರನ್ನು ನಂಬಿಸಿದ್ದಾರೆ.

    ಲಾಟರಿಯ ಅಸಲಿ ಪ್ರತಿಯನ್ನು ಲಾಟರಿ ಏಜೆನ್ಸಿಗೆ ಸರೆಂಡರ್ ಮಾಡಿದ್ದು ಮೂರು ತಿಂಗಳ ಒಳಗೆ ತನ್ನ ಖಾತೆಗೆ ಹಣ ಬರುವುದಾಗಿ ಎಲ್ಲರನ್ನೂ ಕುಟ್ಟಿ ನಂಬಿಸಿದ್ದಾರೆ.

    ವಾಚ್ ಮೆನ್ ಕುಟ್ಟಿ ಟಿಕೇಟ್ ಖರೀದಿಸಲೆಂದು ತಾನು ಕೆಲಸ ನಿರ್ವಹಿಸುತ್ತಿದ್ದ ಕಟ್ಟಡದಲ್ಲಿರುವ ಟೈಲರ್ ಓರ್ವರಲ್ಲಿ 500 ರೂಪಾಯಿ ಸಾಲ ಪಡೆದಿದ್ದರು.

    ಕುಟ್ಟಿಗೆ ಲಾಟರಿ ಹೊಡೆದಿರುವ ವಿಷಯ ತಿಳಿದು ಟೈಲರ್ ಸೇರಿ ಕಟ್ಟಡದ ವರ್ತಕರೆಲ್ಲರೂ ಸಂಭ್ರಮಿಸಿದ್ದರು.ಸ್ಮಾರ್ಟ್ ಪ್ಲಾನೆಟ್ ಕಟ್ಟಡದಲ್ಲಿ ಕೆಲಸ ನಿರ್ವಹಿಸಿ ಅಲ್ಲೇ ತಂಗಿರುವ ಕುಟ್ಟಿ ಸ್ಥಳೀಯ ಹಲವರಲ್ಲಿ ಕೈ ಸಾಲ ಮಾಡಿದ್ದು ಅದನ್ನು ಮರೆ ಮಾಚಲು ಲಾಟರಿ ಹೊಡೆದಿರುವ ಬಗ್ಗೆ ಸುಳ್ಳು ಕಥೆ ಸೃಷ್ಟಿಸಿದ್ದಾರೆಂದು ತಿಳಿದು ಬಂದಿದೆ.

    ಲಾಟರಿ ಹೊಡೆದಿದನ್ನ ನಂಬಿ ಇನ್ನಷ್ಟು ಮಂದಿ ಈತನಿಗೆ ಹಣ ಸಾಲ ನೀಡಿದ್ದಾರಂತೆ. ಇಂದು ಬೆಳಗ್ಗೆ ಕಟ್ಟಡ ನಿವಾಸಿಗಳಿಗೆ ಲಾಟರಿ ವಿಷಯ ಸುಳ್ಳೆಂದು ತಿಳಿಯುತ್ತಿದ್ದಂತೆ ಕುಟ್ಟಿ ಬಳಿ ವಿಚಾರಿಸಲು ತೆರಳಿದಾಗ ಆತ ಪರಾರಿಯಾಗಿದ್ದಾನೆ.

    ಸಾಲ ಕೊಟ್ಟವರು, ಕೋಟಿ ಸಿಕ್ಕಿದೆಯೆಂದು ಸಂಭ್ರಮಿಸಿದವರು ಬೇಸ್ತು ಬಿದ್ದಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು : ಕೂಟ ಮಹಾ ಜಗತ್ತಿನಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವೇತನ ವಿತರಣೆ

    Published

    on

    ಮಂಗಳೂರು : ಕೂಟ ಮಹಾ ಜಗತ್ತು ಮಂಗಳೂರು ಅಂಗ ಸಂಸ್ಥೆಯ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಣಾ ಕಾರ್ಯಕ್ರಮವು ಜರುಗಿತು.

    ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿಘ್ನೇಶ್ ಕಾರಂತ್, ಮೈಟ್‌ನ ಬಿ.ಇ ಹಾಗೂ ಸಂಜನಾ ಹೇರ್ಳೆ ಕೆ. ಅವರಿಗೆ ತಲಾ ೨೫ ಸಾವಿರ ಸ್ಕಾಲರ್‌ಶಿಪ್ ನೀಡಲಾಯಿತು.

    “ಭವಿಷ್ಯದ ದಿನಗಳಲ್ಲಿ ಮತ್ತೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಈ ನಿಟ್ಟಿನಲ್ಲಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುವುದು” ಎಂದು ಕೂಟ ಜಗತ್ತು ಮಂಗಳೂರು ಅಂಗ ಸಂಸ್ಥೆಯ ಅಧ್ಯಕ್ಷ ಶ್ರೀಧರ ಹೊಳ್ಳ ಹೇಳಿದರು.

    “ಕೂಟ ಜಗತ್ತು ಮಂಗಳೂರು ಅಂಗ ಸಂಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಸದಸ್ಯತ್ವ ಅಭಿಮಾನ ಆಗಬೇಕಿದೆ. ವ್ಯಾಪ್ತಿಯ ಎಲ್ಲರೂ ಸದಸ್ಯರಾಗುವ ಮೂಲಕ ಸಂಘಟನೆಯನ್ನು ಬಲಪಡಿಸುವ ಕೆಲಸ ಆಗಬೇಕು” ಎಂದು ಕಾರ್ಯದರ್ಶಿ ಗೋಪಾಲಕೃಷ್ಣ ಮಯ್ಯ ಹೇಳಿದರು.

    ಸಂಘಟನಾ ಕಾರ್ಯದರ್ಶಿ ಕೃಷ್ಣಮಯ್ಯ, ಶಿವರಾಮಯ್ಯ, ಪದ್ಮನಾಭ ಮಯ್ಯ, ಮಹಿಳಾ ವೇದಿಕೆಯ ಪ್ರಭಾರಾವ್, ಲಲಿತಾ ಆರ್.ಉಪಾಧ್ಯಾಯ, ಶಶಿಪ್ರಭಾ ಐತಾಳ್, ಸುಮತಿ ಕೋರಿಯಾ, ಅನುರಾಧ, ಅನುಪಮಾ ಮೊದಲಾದವರು ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಮಂಗಳೂರು : ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

    Published

    on

    ಮಂಗಳೂರು: ದೇವಾಲಯದ ಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿದ ಕಳ್ಳರ ದಂಡು, ನೂರಾರು ವರ್ಷಗಳ ಇತಿಹಾಸವಿದ್ದ ದೇವರಿಗೆ ಸಂಬಂಧಿಸಿದ ಲಕ್ಷಾಂತರ ರೂ ಮೌಲ್ಯ ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಹೋದ ಘಟನೆ ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಸೋಮವಾರ (ನ.04) ಮುಂಜಾನೆ ನಡೆದಿದೆ.

    ದೇವಳಕ್ಕೆ ಸಂಬಂಧಿಸಿದಂತೆ ಅನಾದಿ ಕಾಲದ ನೂರಾರು ವರ್ಷಗಳ ಹಳೆಯದಾದ ಹಿರಿಯರು ಮಾಡಿಸಿದಂತ ಸುಮಾರು ಒಂದುವರೆ ಕೆ.ಜಿ‌ ತೂಕದ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ದೇವರ ಮೂಗುತಿ ದೇವರ ಕೊಡೆ ಸೇರಿದಂತೆ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವಾಗಿದೆ. ಇದರ ಜೊತೆಗೆ ಕಾಣಿಕೆ ಹುಂಡಿಯಲ್ಲಿರುವ ನಗದನ್ನು ಕೊಂಡುಹೋಗಿದ್ದಾರೆ.

    ಆದಿತ್ಯವಾರ ಮಂದಿರದಲ್ಲಿ ವಿಶೇಷವಾದ ಪೂಜಾ ಕಾರ್ಯಕ್ರಮವಿದ್ದ ಕಾರಣ ಕಾಣಿಕೆ ಹುಂಡಿಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಹಣವಿರಬಹುದು ಎಂದು ಹೇಳಲಾಗುತ್ತಿದೆ.

    ಸಿ.ಸಿ.ಕ್ಯಾಮರಾದಲ್ಲಿ ದೃಶ್ಯ ಸೆರೆ :

    ಸುಮಾರು 5 ಜನರ ತಂಡ ಈ ಕಳ್ಳತನದಲ್ಲಿ ಭಾಗಿಯಾಗಿರುವುದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಹನದ ಮೂಲಕ ಬಂದ ಕಳ್ಳರ ತಂಡ ಸುಮಾರು 3.30 ರ ಸಮಯದಲ್ಲಿ ದೇವಸ್ಥಾನದ ಹಿಂಬದಿಯ ಬಾಗಿಲಿನ ಚಿಲಕ ಮುರಿದು ಒಳಪ್ರವೇಶ ಮಾಡಿದ್ದಾರೆ. ಬಳಿಕ ದೇವಸ್ಥಾನದ ಸುತ್ತಲೂ ತಿರುಗಾಡಿ ಮಾಹಿತಿ ಪಡೆದುಕೊಂಡು, ಗರ್ಭಗುಡಿಯ ಒಳಗೆ ಪ್ರವೇಶ ಮಾಡಿದ್ದಾರೆ. ಅಲ್ಲಿ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ವಸ್ತುಗಳನ್ನು ಗೋಣಿಯಲ್ಲಿ ತುಂಬಿಸಿಕೊಂಡು ದೇವಳದ ಗೋಪುರಕ್ಕೆ ಬಂದು, ಕಳ್ಳತನ ಮಾಡಿದ ಎಲ್ಲಾ ಬೆಳೆಬಾಳುವ ವಸ್ತುಗಳನ್ನು ಒಂದೇ ಚೀಲದಲ್ಲಿ ಭದ್ರಗೊಳಿಸಿ ವಾಪಸು ಹೋಗುವ ದೃಶ್ಯ ಕಂಡು ಬಂದಿದೆ.

    ನಾಯಿ ನೀಡಿದ ಸುಳಿವು :

    ದೇವಸ್ಥಾನದ ಕಂಪೌಂಡ್ ನ ಒಳಗಡೆಯೇ ಅರ್ಚಕರ ಮನೆಯಿದೆ. ಆದರೂ ಕಳ್ಳರು ಕಳ್ಳತನ ಧೈರ್ಯದಿಂದ ಕಳ್ಳತನ ಮಾಡಿದ್ದಾರೆ. ಕಳ್ಳರು ದೇವಸ್ಥಾನದ ಒಳಗೆ ಪ್ರವೇಶ ಮಾಡುವುದನ್ನು ಇವರ ಸಾಕು ನಾಯಿ ಗಮನಿಸಿ ಜೋರಾಗಿ ಬೊಗಳಲು ಆರಂಭಿಸಿದೆ. ನಾಯಿ ಬೊಗಳಿದ್ದರಿಂದ ಅರ್ಚಕರಿಗೆ ಎಚ್ಚರವಾಗಿದೆ. ನಾಯಿ ಯಾಕೆ ಬೊಗಳುತ್ತಿದೆ ಎಂದು ಸಿ.ಸಿ.ಕ್ಯಾಮರಾವನ್ನು ನೋಡಿದಾಗ ದೇವಸ್ಥಾನದ ಒಳಗೆ ಮೂವರು ಕಂಡುಬಂದಿದ್ದಾರೆ. ಕೂಡಲೇ ಅರ್ಚಕರು ದೇವಸ್ಥಾನದ ಮ್ಯಾನೇಜರ್ ಅವರಿಗೆ ವಿಚಾರ ತಿಳಿಸಿದ್ದಾರೆ. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಮೂವರು ದೇವಸ್ಥಾನದ ಒಳಗೆ ಇದ್ದು, ನನಗೆ ಒಬ್ಬನಿಗೆ ಹೋಗಲು ಹೆದರಿಕೆ ಆಗುತ್ತಿದ್ದು ಅವರನ್ನು ಬರುವಂತೆ ತಿಳಿಸಿದ್ದಾರೆ. ಕೂಡಲೇ ಅವರು ಇಲ್ಲಿಗೆ ಬಂದರಾದರೂ ಅದಾಗಲೇ ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

    ಪ್ರಕರಣ ದಾಕಲು :

    ಸಿ.ಸಿ.ಕ್ಯಾಮರಾ ಪರಿಶೀಲಿಸಿದಾಗ ಕಳ್ಳರು ಚಪ್ಪಲಿ ಧರಿಸದೆ ಗರ್ಭಗುಡಿಯೊಳಗೆ ಪ್ರವೇಶ ಮಾಡಿ, ಅಲ್ಲಿಂದ ಚಿನ್ನಾಭರಣಗಳನ್ನು ಕಳವು ಮಾಡುವ ದೃಶ್ಯ ಕಂಡು ಬಂತು. ಇದನ್ನು ಖಚಿತಪಡಿಸಿಕೊಂಡ ಬಳಿಕ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿದೆ.

    ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ಹರೀಶ್ ಮತ್ತು ಮೂರ್ತಿ ಭೇಟಿ ನೀಡಿದ್ದಾರೆ. ಜೊತೆಗೆ ಶ್ವಾನದಳ ಮತ್ತು ಬೆರಳಚ್ಚುತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರಾಟ ; ಆರೋಪಿಗಳು ಬಂಧನ !

    Published

    on

    ಬಜಪೆ: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಫಾರೂಕ್ ಮತ್ತು ಅಬ್ದುಲ್ ಜುನೈದ್ ಬಂಧಿತ ಆರೋಪಿಗಳು.

    ಮಂಗಳೂರಿನ ತೆಂಕ ಎಕ್ಕಾರು ಗ್ರಾಮದ ನಿವಾಸಿಗಳು ಎಮದು ಗುರುತಿಸಲಾಗಿದೆ.

    ಬಜ್ಪೆಯಿಂದ ಕಟೀಲು ಕಡೆಗೆ ಹೋಗುವ ಪೆರ್ಮುದೆ ಪಂಚಾಯತ್ ಕ್ರಾಸ್‌ನಿಂದ ಅನತಿ ದೂರದಲ್ಲಿ ಆರೋಪಿಗಳು ಮಾದಕದ್ರವ್ಯ ಎಂಡಿಎಂಎ ಮಾರಾಟ ಮಾಡುತ್ತಿದ್ದರು. ಬಜ್ಪೆ ಠಾಣೆಯ ಪಿಎಸ್‌ಐ ರೇವಣಸಿದ್ದಪ್ಪರವರು ಸಿಬ್ಬಂದಿಯೊಂದಿಗೆ ದಾಳಿನಡೆಸಿ ಬಂಧಿಸಿದ್ದಾರೆ.

    ಬಂಧಿತರಿಂದ 50,000 ರೂ. ಮೌಲ್ಯದ 9.11 ಗ್ರಾಂ ತೂಕದ ಮಾದಕದ್ರವ್ಯ ಎಂಡಿಎಂಎ ಸೇರಿದಂತೆ 2 ಮೊಬೈಲ್ ಪೋನ್‌ಗಳು, ಒಂದು ಬೈಕ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರ ವಿರುದ್ಧ ಮಾದಕವಸ್ತು ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುತ್ತಾರೆ.

    ಬಜಪೆ ಪೊಲೀಸ್ ಠಾನೆಯಲ್ಲಿ ಪ್ರಕರನ ದಾಖಲಾಗಿದೆ.

    Continue Reading

    LATEST NEWS

    Trending