Friday, July 1, 2022

ಏಳು ತಿಂಗಳ ಗರ್ಭಿಣಿ ಪತ್ನಿಯನ್ನೇ ಮುಗಿಸಿದನಾ ಕಿರಾತಕ ಪತಿ..!?

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗರ್ಭಿಣಿ ಶವ ಪತ್ತೆಯಾಗಿದ್ದು ಗಂಡನೇ ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.

ಮೃತಳನ್ನು ವಿಜಯನಗರದ ನಿವಾಸಿ 23 ವರ್ಷದ ಅಶ್ವಿನಿ ಎಂದು ಗುರುತಿಸಲಾಗಿದೆ.

ಮೈಸೂರು ತಾಲೂಕಿನ ಮೈದನಹಳ್ಳಿ ನಿವಾಸಿ ಪ್ರಮೋದ್ ಹಾಗೂ ವಿಜಯನಗರ ನಿವಾಸಿ ಅಶ್ವಿನಿ ಇಬ್ಬರು ಪ್ರೀತಿಸಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ 2021 ಜೂನ್ 13 ರಂದು ವಿವಾಹವಾಗಿದ್ದರು.

ಏಳು ತಿಂಗಳ ಗರ್ಭಿಣಿಯಾಗಿದ್ದ ಅಶ್ವಿನಿ, ಕೆಲ ದಿನಗಳ ಹಿಂದೆ ಗಂಡನ ಜೊತೆ ಮುನಿಸಿಕೊಂಡು ತವರು ಮ‌ನೆಗೆ ಬಂದಿದ್ದಳು.

ಭಾನುವಾರ ಮಧ್ಯಾಹ್ನ ವಿಜಯನಗರದಲ್ಲಿರುವ ಪತ್ನಿ ಮನೆ ಬಳಿ ಬಂದ ಪ್ರಮೋದ್, ಅಶ್ವಿನಿ ಜೊತೆ ಮಾತನಾಡಬೇಕು ಎಂದು ಬೈಕ್​​ನಲ್ಲಿ ಕರೆದುಕೊಂಡು ಹೋಗಿದ್ದಾನೆ.

ರಾತ್ರಿಯಾದರೂ ಮಗಳು ಬಾರದೇ ಇದ್ದಾಗ, ಮಗಳಿಗೆ ತಂದೆ ಹಲವು ಬಾರಿ ಫೋನ್​ ಮಾಡಿದ್ದು, ಆದರೆ ಅಶ್ವಿನಿ ರಿಸೀವ್ ಮಾಡಿಲ್ಲ.

ನಂತರ ಪ್ರಮೋದ್​ಗೂ ಕೂಡಾ ಕಾಲ್ ಮಾಡಿದಾಗಲೂ ಆತ ಕೂಡ ರಿಸೀವ್ ಮಾಡಿಲ್ಲವಂತೆ.

ಇಂದು ಬೆಳಗ್ಗೆ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅಶ್ವಿನಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೋಷಕರು ಮಗಳ ಶವ ನೋಡಿ, ಇದನ್ನು ಆಕೆಯ ಗಂಡನೆ ಕೆರೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಈ‌ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಶ್ವಿನಿ ಪೋಷಕರು ಪ್ರಕರಣ ದಾಖಲಿಸಿದ್ದು,ಆರೋಪಿ ಗಂಡನನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...

ಟೈಲರ್ ಕನ್ನಯ್ಯ ಲಾಲ್ ಕೊಲೆಗೈದವರಿಗೆ ಮರಣದಂಡನೆ ವಿಧಿಸಿ: ಶಾಸಕ ಕಾಮತ್‌ ಆಗ್ರಹ

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...