Connect with us

    DAKSHINA KANNADA

    ಇಂದಿನಿಂದ ಮದ್ಯ ಪ್ರಿಯರಿಗೆ ಶಾಕ್..! 3 ದಿನ ಜಿಲ್ಲೆಯಲ್ಲಿ ಮದ್ಯ ಬಂದ್..!

    Published

    on

    ಮಂಗಳೂರು: ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಾದ್ಯಂತ ಜೂ. 01 ರಂದು ಸಂಜೆ 4 ಗಂಟೆಯಿಂದ ಜೂ.3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.

     

    ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮ್ಯದದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್ ಹೊಟೇಲ್‍ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.

    DAKSHINA KANNADA

    ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ

    Published

    on

    ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ.

    ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.

    ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.

    ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

    Continue Reading

    DAKSHINA KANNADA

    ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆ ಸಂಸ್ಥಾಪಕ ಹಂದಾಡಿ ಬಾಲಕೃಷ್ಣ ನಾಯಕ್ ನಿಧ*ನ..!

    Published

    on

    ಮಂಗಳೂರು: ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ತಮ್ಮ 76ರ ಹರೆಯದಲ್ಲಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿ*ಧನ ಹೊಂದಿದರು.


    ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ ಜೊತೆಯಲ್ಲಿ ಬಡಗುತಿಟ್ಟಿನ ವೇಷಭೂಷಣಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಒದಗಿಸುತ್ತಾ, ಬಳಿಕ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿದರು. ತಮ್ಮ ಅಪೂರ್ವ ಕಲಾಪ್ರತಿಭೆ ಹಾಗೂ ಸರಳ ಸಜ್ಜನಿಕೆಯಿಂದ ಎಲ್ಲ ಸಂಘ ಸಂಸ್ಥೆಗಳಿಗೂ ಅನಿವಾರ್ಯ ಎಂಬಂತೆ ಬಾಳಿದ ಧೀಮಂತರು. ಬಡಗುತಿಟ್ಟಿನ ಕಿರೀಟ ಹಾಗೂ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಹಸ್ತರಾಗಿದ್ದರು.

    ದೇಶವಿದೇಶಗಳಲ್ಲಿ ನೂರಾರು ಮಂದಿಗೆ ಬಡಗುತಿಟ್ಟಿನ ಪಾರಂಪರಿಕ ವೇಷಭೂಷಣ ಸಿದ್ಧಪಡಿಸಿಕೊಟ್ಟ ಕೀರ್ತಿ ಬಾಲಕೃಷ್ಣ ನಾಯಕರದ್ದು. ತನ್ನ ಮೂವರು ಪುತ್ರರೂ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದು ಈ ಕುಟುಂಬದ ವಿಶೇಷತೆಯಾಗಿದೆ.

    ಇವರ ಕಲಾ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗ ಹಾಗೂ ಕಳೆದ ವರ್ಷ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಗೌರವಿಸಲಾಗಿತ್ತು. ಉಡುಪಿಯ ಯಕ್ಷಶಿಕ್ಷಣ ಅಭಿಯಾನ ಯಶಸ್ವಿಯಾಗುವಲ್ಲಿ ಬಾಲಕೃಷ್ಣ ನಾಯಕ್ ಕೊಡುಗೆ ಮಹತ್ತರವಾದುದು.

    ಮೃತರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅ*ಗಲಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶಪಾಲ್ ಸುವರ್ಣ, ಸ್ಥಾಪಕ ಟ್ರಸ್ಟಿ ಕೆ.ರಘುಪತಿ ಭಟ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಬ್ರಹ್ಮಾವರದ ಅಜಪುರ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪದ್ಮನಾಭ ಗಾಣಿಗ ಹಾಗೂ ಸದಸ್ಯರು ತೀರ್ವ ಸಂತಾಪ ಸೂಚಿಸಿದ್ದಾರೆ.

    Continue Reading

    BANTWAL

    ಅಜಿಲಮೊಗರು: ನೀರು ಪಾಲಾ*ದ ವ್ಯಕ್ತಿಯ ಮೃ*ತದೇಹ ಪತ್ತೆ

    Published

    on

    ಬಂಟ್ವಾಳ: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್ (57) ಅವರ ಮೃ*ತದೇಹ ಜುಲೈ 5ರಂದು ಶುಕ್ರವಾರ ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.

    ಮೈಕಲ್ ಗುರುವಾರ ಸಂಜೆ ಅಜಿಲಮೊಗರು ಕೂಟೇಲು ಸೇತುವೆ ಬಳಿ ಕಂಡಿ ಅಣೆಕಟ್ಟಿನಲ್ಲಿ ಕುಳಿತು ಮೀನು ಹಿಡಿಯುತ್ತಿದ್ದ ವೇಳೆ ಆಯತಪ್ಪಿ ಬಿ*ದ್ದು ನೀರು ಪಾ*ಲಾಗಿದ್ದರು.

    ಸುದ್ದಿ ತಿಳಿಯುತ್ತಿದ್ದಂತೆ ರಾತ್ರಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ನದಿಯಲ್ಲಿ ಹುಡುಕುವ ಪ್ರಯತ್ನ ನಡೆಸಿದರಾದರೂ ಸುಳಿವು ಸಿಕ್ಕಿರಲಿಲ್ಲ. ಬೆಳಿಗ್ಗೆ ನೇತ್ರಾವತಿ ನದಿಯಲ್ಲಿ ನೀರು ಇಳಿಕೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸಿದಾಗ ಮೃ*ತದೇಹ ಪತ್ತೆಯಾಗಿದೆ.

    ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ ಐ ಹರೀಶ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೈಕಲ್ ಅವರ ಮನೆ ಮಂದಿ ಸ್ಥಳಕ್ಕೆ ಆಗಮಿಸಿದ್ದರು.

    Continue Reading

    LATEST NEWS

    Trending