LATEST NEWS
ಮತದಾನಕ್ಕೆ ಸಜ್ಜಾದ 1,200 ಸದಸ್ಯರ ಒಂದೇ ಕುಟುಂಬ!
Published
7 months agoon
By
Adminಮಂಗಳೂರು ( ಅಸ್ಸಾಂ ) : ಈ ಕಾಲದಲ್ಲಿ ಒಂದು ಮನೆಯಲ್ಲಿ 10, 20 ಜನರು ಇರೋದು ಅಪರೂಪ. ಕೆಲವು ಅವಿಭಕ್ತ ಕುಟುಂಬದ ಮನೆಗಳು ಒಡೆದು ಹಾಳಾಗಿ ಹೋಗಿವೆ. ಇಂತಹ ಸಂದರ್ಭದಲ್ಲಿ ಒಂದೇ ಕುಟುಂಬದಲ್ಲಿ 1200 ಜನರಿರೋದು ಆಶ್ಚರ್ಯಕ್ಕೆ ಕಾರಣವಾಗಿದೆ. ಅಸ್ಸಾಂನಲ್ಲಿರುವ ಈ ಫ್ಯಾಮಿಲಿ ದೇಶದ ಅತಿ ದೊಡ್ಡ ಅವಿಭಕ್ತ ಕುಟುಂಬ ಅನ್ನೋ ಹೆಸರಿಗೆ ಪಾತ್ರವಾಗಿದೆ.
ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಅಸ್ಸಾಂನ ರಾನ್ ಬಹದ್ದೂರ್ ಥಾಪಾ ಕುಟುಂಬ ಮತ್ತೆ ಸುದ್ದಿಯಾಗಿದೆ. ಈ ಫ್ಯಾಮಿಲಿಯಲ್ಲಿ ಬರೋಬ್ಬರಿ 1,200 ಸದಸ್ಯರಿದ್ದು ಈ ಬಾರಿ ಲೋಕಸಭಾ ಚುನಾವಣೆಗೆ 350 ಮಂದಿ ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ.
ಇದೇ ಏಪ್ರಿಲ್ 19ರಂದು ಅಸ್ಸಾಂನಲ್ಲಿ ನಡೆಯುವ ಮತದಾನದಲ್ಲಿ 350 ಮಂದಿ ತಮ್ಮ ನಾಗರಿಕ ಹಕ್ಕನ್ನು ಚಲಾಯಿಸುತ್ತಿದ್ದಾರೆ. ದಿವಂಗತ ರಾನ್ ಬಹದ್ದೂರ್ ಥಾಪಾ ಅವರ ಅತಿ ದೊಡ್ಡ ಕುಟುಂಬ ಸದ್ಯ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ನೆಲೆಸಿದೆ.
READ MORE..; ರೋಡ್ ಶೋ ವೇಳೆ ಹೊಯ್ ಕೈ.. ಮಹಿಳೆಗೆ ಚೀಟಿ ನೀಡಲು ಹೋದ ಯುವಕನಿಗೆ ಧರ್ಮದೇಟು..!
ರಾನ್ ಬಹದ್ದೂರ್ ಥಾಪಾ ಅವರಿಗೆ 5 ಹೆಂಡತಿಯರು. 12 ಮಂದಿ ಗಂಡು ಮಕ್ಕಳು, 9 ಹೆಣ್ಣು ಮಕ್ಕಳು ಇದ್ದರು. ರಾನ್ ಬಹದ್ದೂರ್ 150 ಮಂದಿ ಮೊಮ್ಮಕ್ಕಳನ್ನು ಹೊಂದಿದ್ದರು. ಇದೀಗ ಇವರ ಕುಟುಂಬ ಬೆಳೆದು 1200 ಸದಸ್ಯರವರೆಗೂ ತಲುಪಿದೆ. ಸೋನಿತ್‌ಪುರ ಲೋಕಸಭಾ ಕ್ಷೇತ್ರದಲ್ಲಿ ಇದೇ ರೀತಿಯ ಹಲವು ಕುಟುಂಬಗಳು ವಾಸಿಸುತ್ತಿವೆ. ಅದರಲ್ಲೂ ರಾನ್ ಬಹದ್ದೂರ್ ಥಾಪಾ ಕುಟುಂಬ 350 ಮಂದಿ ಮತದಾನದ ಹಕ್ಕು ಪಡೆಯುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ.
International news
ನಿನ್ನೆಯ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ !
Published
9 minutes agoon
25/11/2024By
NEWS DESK3ಮಂಗಳೂರು/ಸೌದಿ ಅರೇಬಿಯಾ: ಐಪಿಎಲ್ ಸೀಸನ್ 18ರ ಹರಾಜು ಪ್ರಕ್ರಿಯೆ ನಿನ್ನೆಯಿಂದಲೇ ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 72 ಆಟಗಾರರು ಹರಾಜಾಗಿದ್ದು, ಅದರಲ್ಲಿ ಆರ್ ಸಿಬಿಗೆ ಯಾರೆಲ್ಲಾ ಆಟಗಾರರು ಬಂದಿದ್ದಾರೆ ಇಲ್ಲಿದೆ ನೋಡಿ.
ಮೆಗಾ ಹರಾಜು ಪ್ರಕ್ರಿಯೆ ಇವತ್ತು ಕೂಡ ಮುಂದುವರಿಯಲ್ಲಿದ್ದು, ನಿನ್ನೆಯ ಹರಾಜಿನಲ್ಲಿ ರಿಷಭ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ದಾಖಲೆಯ ಮೊತ್ತಕ್ಕೆ ಮಾರಾಟವಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಆದರೆ ಆರ್ ಸಿಬಿಯ ಅಭಿಮಾನಿಗಳಿಗೆ ಶಾಕ್ ಎದುರಾಗಿತ್ತು. ಕನ್ನಡಿಗ ಕೆ. ಎಲ್ ರಾಹುಲ್ ಈ ಬಾರಿಯಾದರು ಆರ್ ಸಿಬಿಗೆ ಬರಬಹುದು ಎಂಬ ನಿರೀಕ್ಷೆ ಈಡೆರಲಿಲ್ಲ.
ಅಲ್ಲದೆ, ಪ್ರಮುಖ ಆಟಗಾರರದ ರಿಷಭ್ ಪಂತ್, ಜೋಸ್ ಬಟ್ಲರ್, ಮಾಜಿ ಆಟಗಾರ ಯಜುವೇಂದ್ರ ಚಹಲ್ ರವರನ್ನು ಖರೀದಿಸಲು ವಿಫಲವಾಯಿತು. ಮತ್ತೊಂದೆಡೆ ಮೊಹಮ್ಮದ್ ಸಿರಾಜ್ ಅವರನ್ನು ಆರ್ ಟಿಎಂ ಬಳಸಿ ಉಳಿಸಿಕೊಳ್ಳದ ಆರ್ ಸಿಬಿ ಮ್ಯಾನೆಜ್ ಮೆಂಟ್ ನಿರ್ಧಾರಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.
ಇನ್ನೂ ಮೊದಲನೇ ದಿನದ ಹರಾಜು ಪ್ರಕ್ರಿಯೆಯಲ್ಲಿ ಆರ್ ಸಿಬಿ 6 ಆಟಗಾರರನ್ನು ಖರೀದಿಸಿತು. ಅದರಲ್ಲಿ ಮೂವರು ವಿದೇಶಿಯರು ಹಾಗೂ ಉಳಿದ ಮೂವರು ಭಾರತೀಯ ಆಟಗಾರರಾಗಿದ್ದಾರೆ.
ಇದನ್ನೂ ಓದಿ: ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ!
ಮೊದಲ ದಿನದ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ :
1.ಲಿಯಾಮ್ ಲಿವಿಂಗ್ ಸ್ಟೋನ್- ರೂ 8.75 ಕೋಟಿ
2.ಫಿಲ್ ಸಾಲ್ಟ್- ರೂ. 11.5 ಕೋಟಿ
3.ಜಿತೇಶ್ ಶರ್ಮಾ- ರೂ. 11 ಕೋಟಿ
4.ಜೋಶ್ ಹ್ಯಾಜಲ್ ವುಡ್- ರೂ. 12.5 ಕೋಟಿ
5.ಅನೂಜ್ ರಾವತ್- ರೂ. 30 ಲಕ್ಷ
6.ರಾಸಿಖ್ ಸಲಾಮ್ ದಾರ್-ರೂ. 6ಕೋಟಿ
7.ಸುಯಾಶ್ ಶರ್ಮಾ-ರೂ. 2.6ಕೋಟಿ
International news
ಎಲನ್ ಮಸ್ಕ್ ಗೆ ಇಷ್ಟವಾದ ಭಾರತದ ಚುನಾವಣಾ ಪ್ರಕ್ರಿಯೆ!
Published
18 hours agoon
24/11/2024By
NEWS DESK3ಮಂಗಳೂರು : ಎಲನ್ ಮಸ್ಕ್ ಜಗತ್ತಿನ ನಂಬರ್ ಒನ್ ಶ್ರೀಮಂತ ವ್ಯಕ್ತಿ. ಮಸ್ಕ್ ಅಮೆರಿಕಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿ, ಭಾರತದ ಚುನಾವಣಾ ಪ್ರಕ್ರಿಯೆಯನ್ನು ಹೊಗಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಮಸ್ಕ್, ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಅದ್ಬುತವಾಗಿ ನಡೆಯುತ್ತದೆ. ಒಂದೇ ಒಂದು ದಿನದಲ್ಲಿ ಇಡೀ ಲೋಕಸಭಾ ಚುನಾವಣೆಯ ಮತ ಎಣಿಕೆ ಮಾಡಿದ ಶ್ರೇಯಸ್ಸು ಭಾರತದ್ದು ಎಂದಿದ್ದಾರೆ.
ಇದನ್ನೂ ಓದಿ: ಸಾಯಿ ಪಲ್ಲವಿಯವರ ಕೈಯಲ್ಲಿದೆ ಹಲವಾರು ಸಿನಿಮಾಗಳು !
ಕ್ಯಾಲಿಫೋರ್ನಿಯಾದ ಚುನಾವಣಾ ಪ್ರಕ್ರಿಯೆಯನ್ನು ಟೀಕಿಸಿರುವ ಅವರು, ತಮ್ಮ ಎಕ್ಸ್ ಖಾತೆಯಲ್ಲಿ ಈ ಪೊಸ್ಟ್ ಹಾಕಿದ್ದಾರೆ. ಅದರ ಅಡಿಬರಹದಲ್ಲಿ, ಭಾರತದಲ್ಲಿ ಚುನಾವಣೆ ಎಂದರೆ ವಂಚನೆಯೇ ಮೊದಲ ಗುರಿ ಇರುವಲ್ಲಿ ಒಂದೇ ಒಂದು ದಿನದಲ್ಲಿ 64 ಕೋಟಿ ಮತಗಳನ್ನು ಎಣಿಕೆ ಮಾಡಿದ್ದಾರೆ. ಆದ್ರೆ ಕ್ಯಾಲಿಫೋರ್ನಿಯಾದಲ್ಲಿ ಇನ್ನೂ ಕೂಡ ಮತಗಳು ಎಣಿಕೆ ಆಗುತ್ತಲೇ ಇವೆ ಎಂದು ಬರೆದಿದ್ದಾರೆ.
ಕ್ಯಾಲಿಫೋರ್ನಿಯಾದಲ್ಲಿ ಮತ ಎಣಿಕೆ ಕಾರ್ಯ ವಿಳಂಬ ಯಾಕೆ :
ಅಮೆರಿಕಾದಲ್ಲಿ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದೆ. ಇದನ್ನು ಎಣಿಕೆ ಮಾಡುವ ಅನೇಕ ರೀತಿಯ ಪ್ರಕ್ರಿಯೆಗಳನ್ನು ಮಾಡುವ ಕಾರಣ ಚುನಾವಣಾ ಪ್ರಕ್ರಿಯೆ ವಿಳಂಬವಾಗುತ್ತಿದೆ. ಅದರಲ್ಲೂ ಕ್ಯಾಲಿಫೋರ್ನಿಯಾದಂತಹ ದೊಡ್ಡ ದೊಡ್ಡ ನಗರಗಳಲ್ಲಿ ಈ ಮೇಲ್ ಇನ್ ವೋಟಿಂಗ್ ಗಳು ತುಂಬಾ ಸಮಸ್ಯೆಗಳನ್ನು ಉಂಟು ಮಾಡುತ್ತವೆ. ಈ ವಿಳಂಬ ನೀತಿಯನ್ನು ಎಲನ್ ಮಸ್ಕ್ ಟೀಕಿಸಿ ಭಾರತವನ್ನು ಹೊಗಳಿದ್ದಾರೆ.
ಅಮೇರಿಕಾದಲ್ಲಿ ಹಿಂದಿನಿಂದಲೂ ಮೇಲ್ ಇನ್ ವೋಟಿಂಗ್ ವ್ಯವಸ್ಥೆ ಇದ್ದು, ಈಗಲೂ ಮುಂದುವರಿದುಕೊಂಡು ಬಂದಿದೆ.
LATEST NEWS
ಸಾಯಿ ಪಲ್ಲವಿಯವರ ಕೈಯಲ್ಲಿದೆ ಹಲವಾರು ಸಿನಿಮಾಗಳು !
Published
18 hours agoon
24/11/2024By
NEWS DESK3ಮಂಗಳೂರು: ತಮಿಳಿನ ಶಿವ ಕಾರ್ತಿಕೇಯನ್ ಮತ್ತು ಸಾಯಿ ಪಲ್ಲವಿ ಅಭಿನಯದ ‘ಅಮರನ್’ ಚಿತ್ರ ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದಾಗಲೇ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.
ನಟಿ ಸಾಯಿ ಪಲ್ಲವಿಯವರು ದಕ್ಷಿಣ ಭಾರತದ ಜನಪ್ರಿಯ ನಟಿ ಹಾಗೂ ತನ್ನ ಪ್ರತಿಭೆಯಿಂದಲೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ನಟಿ. ಸದಾ ಒಂದಲ್ಲಾ ಒಂದು ಸಿನಿಮಾದಲ್ಲಿ ಕಾರ್ಯನಿರತರಾಗಿರುವ ಸಾಯಿ ಪಲ್ಲವಿಯವರ ಮುಂದೆ ಸಾಲು ಸಾಲು ಸಿನಿಮಾಗಳು ಕಾಯುತ್ತಿದೆ.
ಇದನ್ನೂ ಓದಿ: ಹಾಸಿಗೆ ಹಿಡಿದಿದ್ದ 80ರ ಅಜ್ಜಿ ಮೇಲೆಯೂ ವರದಕ್ಷಿಣೆ ಕೇಸ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ರಣಬೀರ್ ಕಪೂರ್, ಯಶ್ ನಟನೆಯ ಹಿಂದಿಯ ರಾಮಾಯಣ ಸಿನಿಮಾದಲ್ಲಿ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ನಂತರ ಅಮೀರ್ ಖಾನ್ ನಿರ್ಮಾಣ ಮಾಡಿ ಅವರ ಮಗ ನಟಿಸುತ್ತಿರುವ ಹೊಸ ಹಿಂದಿ ಸಿನಿಮಾದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸುತ್ತಿದ್ದಾರೆ.
ಈಗಾಗಲೇ, ನಟ ನಾಗಚೈತನ್ಯ ನಟಿಸಿರುವ ‘ತಾಂಡೇಲ್’ ಸಿನಿಮಾದಲ್ಲೂ ಸಾಯಿ ಪಲ್ಲವಿಯವರು ನಟಿಸಿದ್ದಾರೆ. ಇದರ ಚಿತ್ರೀಕರಣ ಮುಗಿದಿದ್ದು, ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ. ಇನ್ನೂ ಸುಕುಮಾರ್ ನಿರ್ದೇಶನದ ಹೊಸ ಸಿನಿಮಾದಲ್ಲೂ ಸಾಯಿ ಪಲ್ಲವಿ ನಟಿಸಲಿದ್ದಾರೆ. ಇದರಲ್ಲಿ ನಾಯಕನಾಗಿ ರಾಮ್ ಚರಣ್ ಅಭಿನಯಿಸಲಿದ್ದಾರೆ.
ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಯಿ ಪಲ್ಲವಿ, ಪಕ್ಕಾ ಫ್ಯಾಮಿಲಿ ಗರ್ಲ್ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈಗಾಗಿಯೇ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
LATEST NEWS
80ರ ಪ್ರಾಯದಲ್ಲೂ ಅಜ್ಜಿಯ ಟ್ರೆಂಡಿಂಗ್ ಡ್ರೆಸ್ ಗೆ ಎಲ್ಲರೂ ಬೋಲ್ಡ್ !
ಪತ್ನಿಗೆ ಬೆಂ*ಕಿ ಹಚ್ಚಿ ತಲೆಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಅರೆಸ್ಟ್
ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ
ಬಿಗ್ಬಾಸ್ ಮನೆಯಲ್ಲಿನ ಸ್ಪರ್ಧಿಗಳ ವಯಸ್ಸೆಷ್ಟು ಗೊತ್ತಾ..?
ಮಂಗಳೂರಲ್ಲಿ ಸಮುದ್ರಕ್ಕೆ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಯತ್ನ
ಚಲಿಸುತ್ತಿರುವ ಬಸ್ಸಿನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟ ಯುವಕ
Trending
- LATEST NEWS5 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru3 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION4 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS7 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!