Connect with us

    LATEST NEWS

    ಕೋಟಾ ಶ್ರೀನಿವಾಸ ಪೂಜಾರಿಗೆ ಅಭಿಮಾನಿ ಕೊಟ್ಟ ಕೊಡುಗೆ ಏನು ಗೊತ್ತಾ…?

    Published

    on

    ಮಂಗಳೂರು ( ಚಿಕ್ಕಮಗಳೂರು ) : ಉಡುಪಿ –ಚಿಕ್ಕಮಗಳೂರು (Udupi – Chikkamagaluru Constituency) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (BJP Candidate) ಕೋಟಾ ಶ್ರೀನಿವಾಸ ಪೂಜಾರಿ ಬಹಳ ಸರಳ ವ್ಯಕ್ತಿ. ಹೀಗಾಗಿ ಚುನಾವಣ ಖರ್ಚಿಗಾಗಿ ಅವರಿಗೆ ಚುರುಮುರಿ ವ್ಯಾಪಾರಿಯೊಬ್ಬರು ಆರ್ಥಿಕ ಸಹಾಯ ಮಾಡಿದ್ದಾರೆ.

    petty shop

    ಬಹಳಷ್ಟು ಸರಳ ಸಜ್ಜನ ವ್ಯಕ್ತಿತ್ವದ ಮೂಲಕ ಗಮನ ಸೆಳೆದಿದ್ದ ಕೋಟ ಶ್ರೀನಿವಾಸ ಪೂಜಾರಿ ಈ ಬಾರಿ ಲೋಕಸಭಾ (Lok Sabha Election 2024) ಕಣದಲ್ಲಿದ್ದಾರೆ. ಚುನಾವಣಾ ಪ್ರಚಾರದಲ್ಲಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿಮಾನಿಯೊಬ್ಬ 25 ಸಾವಿರ ದೇಣಿಗೆ ನೀಡಿ ಗಮನ ಸೆಳೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತೇಗೂರು ಸರ್ಕಲ್ (Teguru circle )  ಬಳಿ ಇರುವ ಚುರುಮುರಿ ಅಂಗಡಿಯ ಲೋಕೇಶ್ ಬಾಬು ಈ ದೇಣಿಗೆ ನೀಡಿದವರಾಗಿದ್ದಾರೆ. ಪ್ರಚಾರದ ವೇಳೆ ಲೋಕೇಶ್ ಬಾಬು ಅವರ ಅಂಗಡಿಗೆ ಬಂದಿದ್ದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಎಲೆ ಅಡಿಕೆ, ಬಾಳೆಹಣ್ಣುಗಳ ಜೊತೆಗೆ ತಾಂಬೂಲದ ಜೊತೆಗೆ 25 ಸಾವಿರ ಹಣ ( cash ) ನೀಡಿ ಗೆಲುವಿಗಾಗಿ ಹಾರೈಸಿದ್ದಾರೆ.

    ಸಾಮಾನ್ಯ ಛಾಯಾಗ್ರಾಹಕನಾಗಿ ( photographer )  ವೃತ್ತಿ ಆರಂಭಿಸಿದ್ದ ಶ್ರೀನಿವಾಸ ಪೂಜಾರಿ ಅವರು ಲೋಕಲ್ ರಾಜಕೀಯದಿಂದ ಆರಂಭಿಸಿದ ಜೀವನ ಈಗ ರಾಷ್ಟ್ರ ರಾಜಕಾರಣದವರೆಗೆ ಬಂದು ನಿಂತಿದೆ. ಸಚಿವರಾಗಿ, ಬಿಜೆಪಿಯಲ್ಲಿ ಪ್ರಭಾವಿ ನಾಯಕರಾಗಿ ಬೆಳೆದರೂ ಅವರ ವ್ಯಕ್ತಿತ್ವ ಬದಲಾಗಿಲ್ಲ ಅನ್ನೋದು ಅವರ ಅಭಿಮಾನಿಗಳ ಬಳಗದ ಅಭಿಪ್ರಾಯ.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

    ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

    ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending