Connect with us

    LATEST NEWS

    ಮಳೆಗಾಗಿ ಹಸೆಮಣೆ ಏರಿ ಸತಿಪತಿಯಾದ ವಿಶೇಷ ಜೋಡಿ..!

    Published

    on

    ವಾರಣಾಸಿ: ದಕ್ಷಿಣ ಭಾರತದಲ್ಲಿ ವ್ಯಾಪಕ ಮಳೆ ಆಗ್ತಾ ಇದೆಯಾದ್ರೂ , ಉತ್ತರ ಭಾರತದಲ್ಲಿ ಇನ್ನೂ ಮಳೆ ಬೀಳುವ ಲಕ್ಷಣ ಕಾಣಿಸುತ್ತಿಲ್ಲ. ಉರಿ ಬಿಸಿಲಿನ ಹೊಡೆತದಿಂದ ಉತ್ತರ ಭಾರತದ ಬಹುತೇಕ ರಾಜ್ಯಗಳ ಜನರು ತತ್ತರಿಸಿ ಹೋಗಿದ್ದಾರೆ. ವರುಣನ ಕೃಪೆಗೆ ಸಾಕಷ್ಟು ಪೂಜೆ ಪುನಸ್ಕಾರ ಮಾಡಿದ್ರೂ ಮಳೆ ಸುರಿಯದ ಕಾರಣ ವಿಶೇಷ ಜೋಡಿಯೊಂದಕ್ಕೆ ಅದ್ಧೂರಿ ಮದುವೆ ಮಾಡಿಸಿದ್ದಾರೆ. ಇದೀಗ ಈ ವೀಡಿಯೋ ಸಖತ್ ವೈರಲ್ ಆಗಿದೆ.

    Read More..; ಹೆರಿಗೆಗೆ ಹೊರಟ ಪತ್ನಿ… ಗಂಡನಿಗೆ ತಿಂಗಳಿಗಾಗುವಷ್ಟು ಅಡುಗೆ; ಪೋಸ್ಟ್ ವೈರಲ್

    ಹೌದು, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಈ ವಿವಾಹ ಸಮಾರಂಭ ನಡೆದಿದ್ದು, ಜೋಡಿ ಕಪ್ಪೆಗಳು ಹಸೆಮಣೆ ಏರಿ ಸತಿಪತಿಗಳಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು, ಶಾಸ್ತ್ರೋಕ್ತವಾಗಿ ಪುರೋಹಿತರ ಮಾರ್ಗದರ್ಶನದಂತೆ ದಂಪತಿ ಈ ವಿವಾಹದ ಧಾರ್ಮಿಕ ಕಾರ್ಯಗಳನ್ನು ಮಾಡಿದ್ದಾರೆ. ಕಪ್ಪೆಗಳಿಗೆ ವಧು ವರರಂತೆ ಕೆಂಪು ಬಣ್ಣದ ಶಾಲು ಹೊದಿಸಿ ಹೂವಿನ ಹಾರ ಹಾಕಿ ಸಂಗೀತ ವಾದ್ಯದೊಂದಿಗೆ ಸಂಭ್ರಮದಿಂದ ಈ ಮದುವೆ ಮಾಡಲಾಗಿದೆ. ಮದುವೆ ವೇಳೆ ಭಜನೆ ಹಾಡುವ ಮೂಲಕ ಮಳೆಗಾಗಿ ಪ್ರಾರ್ಥನೆ ಸಲ್ಲಿಸುವುದು ಕೂಡಾ ವಿಡಿಯೋದಲ್ಲಿ ಕಾಣಬಹುದಾಗಿದೆ.

    LATEST NEWS

    ಮುಲ್ಕಿ ಸೀಮೆಯ ಪುಣ್ಯ ಕ್ಷೇತ್ರಕ್ಕೆ ಕೆ.ಎಲ್‌.ರಾಹುಲ್ ಭೇಟಿ..!

    Published

    on

    ಮಂಗಳೂರು : ಕೆಲ ದಿನಗಳ ಹಿಂದೆ ಟಿ20 ವಿಶ್ವಕಪ್‌ ವಿಜೇತ ತಂಡ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಕಾಪು ಮಾರಿಯಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಇದೀಗ ಭಾರತೀಯ ಕ್ರಿಕೇಟ್ ತಂಡದ ಮತ್ತೊರ್ವ ಸ್ಟಾರ್ ಆಟಗಾರ ಕೆ.ಎಲ್‌.ರಾಹುಲ್ ಮುಲ್ಕಿಯ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

    ಮೂಲತಃ ಮಂಗಳೂರಿನವರೇ ಆಗಿರುವ ಕೆ.ಎಲ್‌.ರಾಹುಲ್ ಭಾರತ ಕ್ರಿಕೇಟ್ ತಂಡದ ಹೆಮ್ಮೆಯ ಆಟಗಾರ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅತಿಯಾ ಶೆಟ್ಟಿಯನ್ನು ವಿವಾಹವಾದ ಬಳಿಕದ ಮುಲ್ಕಿಗೆ ರಾಹುಲ್‌ ಅವರ ಮೊದಲ ಭೇಟಿಯಾಗಿದೆ. ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ ರಾಹುಲ್ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಕ್ಷೇತ್ರದ ಅರ್ಚಕ ಗೋಪಾಲಕೃಷ್ಣ ಉಪಾಧ್ಯಾಯ ಅವರು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ರಾಹುಲ್‌ಗೆ ಪ್ರಸಾದ ನೀಡಿದ್ದಾರೆ.


    ಬಪ್ಪನಾಡು ಕ್ಷೇತ್ರದ ಬಳಿಕ ಮುಲ್ಕಿ ಸೀಮೆಯಲ್ಲೇ ಇರುವ ಮತ್ತೊಂದು ಪುಣ್ಯ ಕ್ಷೇತ್ರ ಶಿಮಂತೂರು ಶ್ರೀ ಆದಿ ಜನಾರ್ಧನ ಕ್ಷೇತ್ರ ಹಾಘೂ ಕಕ್ವಗುತ್ತು ಮೂಲ ನಾಗನ ಕ್ಷೇತ್ರಕ್ಕೆ ಕೆ.ಎಲ್‌ . ರಾಹುಲ್ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
    ಕೆ.ಎಲ್.ರಾಹುಲ್‌ ಆಗಮಿಸಿರುವ ವಿಚಾರ ತಿಳಿದು ನೂರಾರು ಜನ ಅಭಿಮಾನಿಗಳು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಕ್ಷೇತ್ರದಲ್ಲಿ ಅವರ ಜೊತೆ ಸೆಲ್ಫಿಗಾಗಿ ಮುಗಿಬಿದ್ದು, ಅಟೋಗ್ರಾಫ್‌ ಪಡೆದುಕೊಂಡಿದ್ದಾರೆ. ಅಭಿಮಾನಿಗಳ ಜೊತೆ ತುಳುಭಾಷೆಯಲ್ಲೇ ಮಾತನಾಡಿದ ಕೆ.ಎಲ್‌. ರಾಹುಲ್‌ ಅಭಿಮಾನಿಗಳ ಮನಗೆದ್ದಿದ್ದಾರೆ.

    Continue Reading

    DAKSHINA KANNADA

    ಗಾಳಿಗೆ ಹಾರಿದ ಶಾಲೆಯ ಹೆಂಚು..! ರಜಾ ದಿನವಾದ ಕಾರಣ ತಪ್ಪಿದ ಅನಾಹುತ..!

    Published

    on

    ಮಂಗಳೂರು ( ಕಡಬ ) : ಕಡಬ ತಾಲೂಕಿನಲ್ಲಿ ಭಾನುವಾರ ಮದ್ಯಾಹ್ನ ಜೋರಾಗಿ ಬೀಸಿದ ಗಾಳಿಗೆ ಶಾಲೆಯೊಂದರ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಜಾ ದಿನವಾದ ಕಾರಣ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.


    ಭಾನುವಾರ ಜೋರಾದ ಗಾಳಿಯ ಜೊತೆ ಮಳೆ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮದ್ಯಾಹ್ನದ ವೇಳೆಗೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಜೋರಾದ ಗಾಳಿ ಬೀಸಿದೆ. ಇದರ ಪರಿಣಾಮವಾಗಿ ಬಲ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಂಚುಗಳು ಹಾರಿ ಹೋಗಿದೆ. ಒಂದಷ್ಟು ಹೆಂಚುಗಳು ಶಾಲೆಯ ಹೊರಾಂಗಣದಲ್ಲಿ ಬಿದ್ದಿದ್ದರೆ, ಇನ್ನೂ ಕೆಲವು ಹೆಂಚುಗಳು ಶಾಲೆಯ ಕೊಠಡಿಯ ಒಳಗೆ ಬಿದ್ದಿದೆ. ಶಾಲೆಗೆ ಬಹುತೇಕ ಎಲ್ಲಾ ಕೊಠಡಿಯ ಹೆಂಚುಗಳು ಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಭಾನುವಾರವಾದ ಕಾರಣ ಶಾಲೆಯಲ್ಲಿ ಮಕ್ಕಳು ಇರದ ಕಾರಣ ಯಾವುದೇ ಅನಾಹುತ ನಡೆದಿಲ್ಲ.


    ಬೀಸಿದ ಗಾಳಿಗೆ ಶಾಲೆಯ ಹೆಂಚಿನ ಜೊತೆಗೆ ಗ್ರಾಮದ ಕೃಷಿಕರ ಅಡಿಕೆ ತೋಟಕ್ಕೂ ಹಾನಿಯಾಗಿದೆ. ಹಲವು ಅಡಿಕೆ ಮರಗಳು ತುಂಡಾಗಿ ಬಿದ್ದಿದ್ದು, ಕೆಲವೆಡೆ ವಿದ್ಯುತ್ ತಂತಿಯ ಮೇಲೆ ಬಿದ್ದ ಕಾರಣ ವಿದ್ಯುತ್ ಕಂಬಕ್ಕೂ ಕೂಡಾ ಹಾನಿ ಸಂಭವಿಸಿದೆ.
    ಜುಲೈ 15 ಮತ್ತು 16 ರಂದು ಕೂಡಾ ಜೋರಾದ ಗಾಳಿಯ ಜೊತೆ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    Continue Reading

    DAKSHINA KANNADA

    ನಾಳೆ, ನಾಡಿದ್ದು ದ.ಕ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

    Published

    on

    ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಇಂದು, ನಾಳೆ ಮತ್ತು ನಾಡಿದ್ದು(ಜು.15,16,17) ಈ ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಿದೆ.

    ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳ

    ಜುಲೈ 17 ರಿಂದ 19 ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ದಿನವಿಡೀ ಉತ್ತಮ ಮಳೆ ಬಂದಿದೆ. ಮಳೆಯ ಜತೆಗೆ ಬಲವಾದ ಗಾಳಿಯೂ ಬೀಸುತ್ತಿದೆ. ಸಮುದ್ರದಲ್ಲಿ ಅಬ್ಬರದ ಅಲೆಗಳು ಕಂಡು ಬರುತ್ತಿವೆ. ಗಾಳಿಯ ರಭಸಕ್ಕೆ ಅಲ್ಲಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ, ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಬೆಳಗ್ಗೆ ಬೀಸಿದ ಬಲವಾದ ಗಾಳಿಗೆ ಉಳ್ಳಾಲ ತಾಲೂಕಿನ ಕೋಟೆಕಾರು ಬಳಿ ಬೀರಿ- ಪ್ರವಾಸಿ ಬಂಗ್ಲೆ ಕ್ರಾಸ್‌ ಸರ್ವೀಸ್‌ ರಸ್ತೆಯಲ್ಲಿ ಭಾರೀ ಗಾತ್ರದ ಮೇ ಫ್ಲವರ್‌ ಮರವೊಂದು ಉರುಳಿ ಬಿದ್ದ ಘಟನೆ ಸಂಭವಿಸಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಸ್ತೆ ಬದಿ ನಿಲ್ಲಿಸಿದ್ದ ಎರಡು ಲಾರಿಗಳ ಮಧ್ಯೆಮರ ಬಿದ್ದ ಕಾರಣ ಅಪಾಯ ತಪ್ಪಿದೆ. ಅಲ್ಲದೆ ಇಂದು ಭಾನುವಾರ ಆಗಿದ್ದ ಕಾರಣ ಈ ರಸ್ತೆಯಲ್ಲಿ ವಾಹನ ಮತ್ತು ಜನ ಸಂಚಾರ ಕಡಿಮೆ ಇತ್ತು.

    Continue Reading

    LATEST NEWS

    Trending