Connect with us

    LATEST NEWS

    ಬುದ್ದಿ ಹೇಳಿದ ಪ್ರಿನ್ಸಿಪಲ್ ತಲೆಗೆ ಗುಂಡಿಕ್ಕಿ ಹ*ತ್ಯೆಗೈದ ವಿದ್ಯಾರ್ಥಿ !

    Published

    on

    ಮಂಗಳೂರು/ಭೋಪಾಲ್: ವಿದ್ಯಾರ್ಥಿಗಳು ತಪ್ಪು ಮಾಡಿದಾಗ ಶಿಕ್ಷಕರು ಬುದ್ದಿ ಹೇಳಿ ಸರಿ ದಾರಿಗೆ ತರುತ್ತಾರೆ. ಆದರೆ ಇಲ್ಲಿ ಪೋಷಕರನ್ನು ಕರೆಸಿ ಬುದ್ದಿ ಹೇಳಿದಕ್ಕೆ ವಿದ್ಯಾರ್ಥಿಯೊಬ್ಬ ಪ್ರಾಂಶುಪಾಲರ ತಲೆಗೆ ಗುಂಡಿಕ್ಕಿ ಹ*ತ್ಯೆಗೈದಿದ್ದಾನೆ.

    ಪ್ರಾಂಶುಪಾಲರು, ಪೋಷಕರನ್ನು ಕರೆಸಿ ವಿದ್ಯಾರ್ಥಿ ಸರಿಯಾಗಿ ತರಗತಿಗೆ ಬರುತ್ತಿಲ್ಲ ಎಂದು ಬುದ್ದಿ ಹೇಳಿದಕ್ಕೆ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಹ*ತ್ಯೆಗೈದ ಘಟನೆ ಮಧ್ಯಪ್ರದೇಶ ಛತ್ತರ್ ಪುರದಲ್ಲಿ ನಡೆದಿದೆ.

    ಇದನ್ನೂ ಓದಿ: ಸಿರಿಯಾ ಸಂಘರ್ಷ: ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ವಿದೇಶಾಂಗ ಇಲಾಖೆ ಸೂಚನೆ

    ಈ ಘಟನೆ ಧಮೋರಾದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ. ಹ*ತ್ಯೆಯಾದ ಪ್ರಾಂಶುಪಾಲರನ್ನು ಸುರೇಂದ್ರ ಕುಮಾರ್ ಸಕ್ಸೇನಾ ಎಂದು ಗುರುತಿಸಲಾಗಿದೆ. ಅವರನ್ನು ಹ*ತ್ಯೆಗೈದ ವಿದ್ಯಾರ್ಥಿ ಕಾಲೇಜಿಗೆ ಸರಿಯಾಗಿ ಬರುತ್ತಿರಲಿಲ್ಲ ಎಂದು ಪೋಷಕರನ್ನು ಕರೆಸಿ ಛೀಮಾರಿ ಹಾಕಿದ್ದರು. ಇದೇ ಕಾರಣಕ್ಕೆ ಶಾಲೆಗೆ ನುಗ್ಗಿ ಶೌಚಾಲಯದಲ್ಲಿದ್ದ ಪ್ರಾಂಶುಪಾಲರ ತಲೆಗೆ ಗುಂಡು ಹಾರಿಸಿದ್ದಾನೆ. ಈ ವೇಳೆ ಪ್ರಾಂಶುಪಾಲರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ಆರೋಪಿಗಳ ಕೃತ್ಯ ಕಾಲೇಜಿನಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹ*ತ್ಯೆಯ ಬಳಿಕ ಪ್ರಾಂಶುಪಾಲರ ಸ್ಕೂಟರ್ ಸಮೇತ ಆರೋಪಿ ಹಾಗೂ ಆತನ ಸ್ನೇಹಿತ ಇಬ್ಬರೂ ಕೂಡ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

    ಘಟನೆಗೆ ಸಂಬಂಧಿಸಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಪೊಲೀಸರು ಮಾಹಿತಿ ಕಲೆಹಾಕಿದ್ದು, ಆರೋಪಿ ಗೂಂಡಾ ಸ್ವಭಾವದವನು ಎಂದು ತಿಳಿದು ಬಂದಿದೆ. ಆತನ ಬಂಧನಕ್ಕೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
    ಒಟ್ಟಿನಲ್ಲಿ ಪೋಷಕರನ್ನು ಶಾಲೆಗೆ ಕರೆಸಿ ವಿದ್ಯಾರ್ಥಿಗೆ ಬುದ್ದಿ ಹೇಳಿದ್ದೆ ಪ್ರಾಂಶುಪಾಲರ ಜೀವಕ್ಕೆ ಕಂಟಕವಾಯಿತು.

    DAKSHINA KANNADA

    ಮಂಗಳೂರು-ಸಿಂಗಾಪುರ ನೇರ ವಿಮಾನ ಯಾನ; ಬಹುಕಾಲದ ಬೇಡಿಕೆ ಈಡೇರಿಕೆ

    Published

    on

    ಮಂಗಳೂರು : ಹೊಸ ವರ್ಷದ ಕೊಡುಗೆ ಎಂಬಂತೆ ಮಂಗಳೂರಿನಿಂದ ಸಿಂಗಾಪುರಕ್ಕೆ ನೇರ ವಿಮಾನ ಯಾನ 2025ರ ಜನವರಿ 21 ರಿಂದ ಶುರುವಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಕಂಪೆನಿ ಈ ವಿಮಾನ ಹಾರಾಟ ಆರಂಭಿಸಲು ಮುಂದೆ ಬಂದಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ.

    ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಐಎಕ್ಸ್ 862 ವಿಮಾನ 5.55 ಕ್ಕೆ ಹೊರಟು 13.25 ಕ್ಕೆ ಸಿಂಗಾಪುರ ತಲಪುತ್ತದೆ. ಮರು ಪ್ರಯಾಣದಲ್ಲಿ ಐಎಕ್ಸ್ 861 ವಿಮಾನ ಸಿಂಗಾಪುರದಿಂದ 14.25 ಕ್ಕೆ ಹೊರಟು 16.55 ಕ್ಕೆ ಮಂಗಳೂರು ತಲಪುವುದು.

    2025ರ ಜ.21ರಿಂದ ಸಿಂಗಾಪುರಕ್ಕೆ ವಿಮಾನ :

    ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ಈ ವಿಮಾನ ಹಾರಾಟ ಸೇವೆ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024 ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ ಮನವಿ ಸಲ್ಲಿಸಿದ್ದರು. ಫೆ.1 ರಿಂದ ದಿಲ್ಲಿಗೆ ದಿನನಿತ್ಯ ವಿಮಾನ ಸೌಲಭ್ಯಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1, 2025 ರಿಂದ ಮಂಗಳೂರು ಮತ್ತು ರಾಜಧಾನಿ ದಿಲ್ಲಿ ನಡುವೆ ದೈನಂದಿನ ತಡೆರಹಿತ ವಿಮಾನ ಹಾರಾಟ ಸೌಲಭ್ಯವನ್ನು ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

    Continue Reading

    Ancient Mangaluru

    ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಭೀಕರ ಅಪ*ಘಾತ !

    Published

    on

    ಪುತ್ತೂರು: ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.

     

    ಕಾರಿನಲ್ಲಿದ್ದವರಿಗೆ ಗಂ*ಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಇದನ್ನೂ ಓದಿ: ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ

    ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ಮಾಹಿತಿ ತಿಳಿದು ಬಂದಿದೆ. ಕಾರಿನಲ್ಲಿ ಕೆಲ ಪೂಜಾ ಸಾಮಾಗ್ರಿಗಳು ಸೇರಿದಂತೆ ಕುಂಕುಮ ಪ್ರಸಾದಗಳು ಕಂಡುಬಂದಿದೆ.

    Continue Reading

    DAKSHINA KANNADA

    ಉತ್ತಮ ಜನಸ್ಪಂದನೆಯೊಂದಿಗೆ ಮಂಗಳೂರು-ಕಾರ್ಕಳ KSRTC ಸಂಚಾರ ಆರಂಭ

    Published

    on

    ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ.

    ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.

     

    ಕೆ.ಎಸ್‌.ಆರ್‌.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್‌, ‘ಮಂಗಳೂರು-ಕಾರ್ಕಳ ಮಧ್ಯೆ 8 ಟ್ರಿಪ್‌ಗಳ ಬೇಡಿಕೆಯಲ್ಲಿ ಕೇವಲ 3 ಟ್ರಿಪ್‌ಗೆ ಅವಕಾಶ ನೀಡಿದೆ. ಕೇಂದ್ರ ಸರಕಾರದ ಏರಿಯಾ ಸ್ಕೀಂ ನಿಯಮ ಪ್ರಕಾರ ಹಾಗೂ ಚಾಪ್ಟರ್‌ -5ರಂತೆ ಹೊಸ ರೂಟ್‌ಗೆ ಪರವಾನಿಗೆ ನೀಡಲು ಸಾರಿಗೆ ಪ್ರಾಧಿಕಾರಕ್ಕೆ ಅಧಿಕಾರ ಇದೆ’ ಎಂದು ವಾದ ಮಂಡಿಸಿದರು. ‘ಮುಂದಿನ ದಿನಗಳಲ್ಲಿ ಅಗತ್ಯ ಇರುವ ಇತರ ಪ್ರದೇಶಗಳಲ್ಲಿ ಸರಕಾರಿ ಬಸ್‌ ಸಂಚಾರ ಆರಂಭಿಸಲು ಸರಕಾರ ವನ್ನು ಕೇಳಿಕೊಂಡಿದ್ದೇವೆ’ ಎಂದು ಸದಸ್ಯ ಐವನ್‌ ಡಿ’ ಸೋಜಾ ತಿಳಿಸಿದರು.

    ಇದನ್ನೂ ಓದಿ : ಮಂಗಳೂರು-ಕಾರ್ಕಳ ಕೆ.ಎಸ್‌.ಆರ್‌.ಟಿ.ಸಿ ಪ್ರಾಯೋಗಿಕ ಸಂಚಾರಕ್ಕೆ ನಾಳೆ ಚಾಲನೆ !!

     

    ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಬಸ್ ಸಂಚರಿಸಲಿದೆ. ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ‌ ಪರವಾನಗಿ‌ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನ‌ಸ್ಪಂದನೆ ಲಭಿಸಿದೆ.

    Continue Reading

    LATEST NEWS

    Trending