LATEST NEWS
ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ
ಬ್ರಹ್ಮಾವರ: ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯು ಮೊಹಮ್ಮದ್ ಜಹೀದ (12) ಎಂದು ಗುರುತಿಸಲಾಗಿದೆ.
ಕಳೆದ 4 ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲಿಕ್ ದಿನಾರ್ ಮದರಸ ಹಾಸ್ಟೇಲ್‌ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆಯನ್ನು ಮುಗಿಸಿ ಅ.11 ರಂದು ಹಾಸ್ಟೇಲ್‌ಗೆ ಮರಳಿದ್ದಾನೆ.
ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದನ್ನು ಗಮನಿಸಿ ಹಾಡುಕಿದಾಗ ಹಾಸ್ಟೇಲ್‌ನ ಬಾತ್‌ರೂಮ್‌ನಲ್ಲಿ ಸರಳಿಗೆ ಬೈರಾಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.
ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10.40 ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕನಿಗೆ ಹಾಸ್ಟೇಲ್‌ಗೆ ಹೋಗಲು ಮನಸ್ಸಿಲ್ಲವೆಂದು, ಹಾಸ್ಟೇಲ್‌ನ ಇತರ ವಿದ್ಯಾರ್ಥಿಗಳೊಂದಿಗೆ ಸಣ್ನ ಮಟ್ಟಿನ ಜಗಳ ಆಗಿತ್ತು ಎಂದು ತಿಳಿದು ಬಂದಿದದೆ.
DAKSHINA KANNADA
ಮಂಗಳೂರು : ಕೂಟ ಮಹಾ ಜಗತ್ತಿನಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವೇತನ ವಿತರಣೆ
ಮಂಗಳೂರು : ಕೂಟ ಮಹಾ ಜಗತ್ತು ಮಂಗಳೂರು ಅಂಗ ಸಂಸ್ಥೆಯ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಣಾ ಕಾರ್ಯಕ್ರಮವು ಜರುಗಿತು.
ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿಘ್ನೇಶ್ ಕಾರಂತ್, ಮೈಟ್‌ನ ಬಿ.ಇ ಹಾಗೂ ಸಂಜನಾ ಹೇರ್ಳೆ ಕೆ. ಅವರಿಗೆ ತಲಾ ೨೫ ಸಾವಿರ ಸ್ಕಾಲರ್‌ಶಿಪ್ ನೀಡಲಾಯಿತು.
“ಭವಿಷ್ಯದ ದಿನಗಳಲ್ಲಿ ಮತ್ತೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಈ ನಿಟ್ಟಿನಲ್ಲಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುವುದು” ಎಂದು ಕೂಟ ಜಗತ್ತು ಮಂಗಳೂರು ಅಂಗ ಸಂಸ್ಥೆಯ ಅಧ್ಯಕ್ಷ ಶ್ರೀಧರ ಹೊಳ್ಳ ಹೇಳಿದರು.
“ಕೂಟ ಜಗತ್ತು ಮಂಗಳೂರು ಅಂಗ ಸಂಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಸದಸ್ಯತ್ವ ಅಭಿಮಾನ ಆಗಬೇಕಿದೆ. ವ್ಯಾಪ್ತಿಯ ಎಲ್ಲರೂ ಸದಸ್ಯರಾಗುವ ಮೂಲಕ ಸಂಘಟನೆಯನ್ನು ಬಲಪಡಿಸುವ ಕೆಲಸ ಆಗಬೇಕು” ಎಂದು ಕಾರ್ಯದರ್ಶಿ ಗೋಪಾಲಕೃಷ್ಣ ಮಯ್ಯ ಹೇಳಿದರು.
ಸಂಘಟನಾ ಕಾರ್ಯದರ್ಶಿ ಕೃಷ್ಣಮಯ್ಯ, ಶಿವರಾಮಯ್ಯ, ಪದ್ಮನಾಭ ಮಯ್ಯ, ಮಹಿಳಾ ವೇದಿಕೆಯ ಪ್ರಭಾರಾವ್, ಲಲಿತಾ ಆರ್.ಉಪಾಧ್ಯಾಯ, ಶಶಿಪ್ರಭಾ ಐತಾಳ್, ಸುಮತಿ ಕೋರಿಯಾ, ಅನುರಾಧ, ಅನುಪಮಾ ಮೊದಲಾದವರು ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರು : ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು
ಮಂಗಳೂರು: ದೇವಾಲಯದ ಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿದ ಕಳ್ಳರ ದಂಡು, ನೂರಾರು ವರ್ಷಗಳ ಇತಿಹಾಸವಿದ್ದ ದೇವರಿಗೆ ಸಂಬಂಧಿಸಿದ ಲಕ್ಷಾಂತರ ರೂ ಮೌಲ್ಯ ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಹೋದ ಘಟನೆ ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಸೋಮವಾರ (ನ.04) ಮುಂಜಾನೆ ನಡೆದಿದೆ.
ದೇವಳಕ್ಕೆ ಸಂಬಂಧಿಸಿದಂತೆ ಅನಾದಿ ಕಾಲದ ನೂರಾರು ವರ್ಷಗಳ ಹಳೆಯದಾದ ಹಿರಿಯರು ಮಾಡಿಸಿದಂತ ಸುಮಾರು ಒಂದುವರೆ ಕೆ.ಜಿ ತೂಕದ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ದೇವರ ಮೂಗುತಿ ದೇವರ ಕೊಡೆ ಸೇರಿದಂತೆ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವಾಗಿದೆ. ಇದರ ಜೊತೆಗೆ ಕಾಣಿಕೆ ಹುಂಡಿಯಲ್ಲಿರುವ ನಗದನ್ನು ಕೊಂಡುಹೋಗಿದ್ದಾರೆ.
ಆದಿತ್ಯವಾರ ಮಂದಿರದಲ್ಲಿ ವಿಶೇಷವಾದ ಪೂಜಾ ಕಾರ್ಯಕ್ರಮವಿದ್ದ ಕಾರಣ ಕಾಣಿಕೆ ಹುಂಡಿಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಹಣವಿರಬಹುದು ಎಂದು ಹೇಳಲಾಗುತ್ತಿದೆ.
ಸಿ.ಸಿ.ಕ್ಯಾಮರಾದಲ್ಲಿ ದೃಶ್ಯ ಸೆರೆ :
ಸುಮಾರು 5 ಜನರ ತಂಡ ಈ ಕಳ್ಳತನದಲ್ಲಿ ಭಾಗಿಯಾಗಿರುವುದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಹನದ ಮೂಲಕ ಬಂದ ಕಳ್ಳರ ತಂಡ ಸುಮಾರು 3.30 ರ ಸಮಯದಲ್ಲಿ ದೇವಸ್ಥಾನದ ಹಿಂಬದಿಯ ಬಾಗಿಲಿನ ಚಿಲಕ ಮುರಿದು ಒಳಪ್ರವೇಶ ಮಾಡಿದ್ದಾರೆ. ಬಳಿಕ ದೇವಸ್ಥಾನದ ಸುತ್ತಲೂ ತಿರುಗಾಡಿ ಮಾಹಿತಿ ಪಡೆದುಕೊಂಡು, ಗರ್ಭಗುಡಿಯ ಒಳಗೆ ಪ್ರವೇಶ ಮಾಡಿದ್ದಾರೆ. ಅಲ್ಲಿ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ವಸ್ತುಗಳನ್ನು ಗೋಣಿಯಲ್ಲಿ ತುಂಬಿಸಿಕೊಂಡು ದೇವಳದ ಗೋಪುರಕ್ಕೆ ಬಂದು, ಕಳ್ಳತನ ಮಾಡಿದ ಎಲ್ಲಾ ಬೆಳೆಬಾಳುವ ವಸ್ತುಗಳನ್ನು ಒಂದೇ ಚೀಲದಲ್ಲಿ ಭದ್ರಗೊಳಿಸಿ ವಾಪಸು ಹೋಗುವ ದೃಶ್ಯ ಕಂಡು ಬಂದಿದೆ.
ನಾಯಿ ನೀಡಿದ ಸುಳಿವು :
ದೇವಸ್ಥಾನದ ಕಂಪೌಂಡ್ ನ ಒಳಗಡೆಯೇ ಅರ್ಚಕರ ಮನೆಯಿದೆ. ಆದರೂ ಕಳ್ಳರು ಕಳ್ಳತನ ಧೈರ್ಯದಿಂದ ಕಳ್ಳತನ ಮಾಡಿದ್ದಾರೆ. ಕಳ್ಳರು ದೇವಸ್ಥಾನದ ಒಳಗೆ ಪ್ರವೇಶ ಮಾಡುವುದನ್ನು ಇವರ ಸಾಕು ನಾಯಿ ಗಮನಿಸಿ ಜೋರಾಗಿ ಬೊಗಳಲು ಆರಂಭಿಸಿದೆ. ನಾಯಿ ಬೊಗಳಿದ್ದರಿಂದ ಅರ್ಚಕರಿಗೆ ಎಚ್ಚರವಾಗಿದೆ. ನಾಯಿ ಯಾಕೆ ಬೊಗಳುತ್ತಿದೆ ಎಂದು ಸಿ.ಸಿ.ಕ್ಯಾಮರಾವನ್ನು ನೋಡಿದಾಗ ದೇವಸ್ಥಾನದ ಒಳಗೆ ಮೂವರು ಕಂಡುಬಂದಿದ್ದಾರೆ. ಕೂಡಲೇ ಅರ್ಚಕರು ದೇವಸ್ಥಾನದ ಮ್ಯಾನೇಜರ್ ಅವರಿಗೆ ವಿಚಾರ ತಿಳಿಸಿದ್ದಾರೆ. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಮೂವರು ದೇವಸ್ಥಾನದ ಒಳಗೆ ಇದ್ದು, ನನಗೆ ಒಬ್ಬನಿಗೆ ಹೋಗಲು ಹೆದರಿಕೆ ಆಗುತ್ತಿದ್ದು ಅವರನ್ನು ಬರುವಂತೆ ತಿಳಿಸಿದ್ದಾರೆ. ಕೂಡಲೇ ಅವರು ಇಲ್ಲಿಗೆ ಬಂದರಾದರೂ ಅದಾಗಲೇ ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಪ್ರಕರಣ ದಾಕಲು :
ಸಿ.ಸಿ.ಕ್ಯಾಮರಾ ಪರಿಶೀಲಿಸಿದಾಗ ಕಳ್ಳರು ಚಪ್ಪಲಿ ಧರಿಸದೆ ಗರ್ಭಗುಡಿಯೊಳಗೆ ಪ್ರವೇಶ ಮಾಡಿ, ಅಲ್ಲಿಂದ ಚಿನ್ನಾಭರಣಗಳನ್ನು ಕಳವು ಮಾಡುವ ದೃಶ್ಯ ಕಂಡು ಬಂತು. ಇದನ್ನು ಖಚಿತಪಡಿಸಿಕೊಂಡ ಬಳಿಕ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ಹರೀಶ್ ಮತ್ತು ಮೂರ್ತಿ ಭೇಟಿ ನೀಡಿದ್ದಾರೆ. ಜೊತೆಗೆ ಶ್ವಾನದಳ ಮತ್ತು ಬೆರಳಚ್ಚುತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
BIG BOSS
BBK11: ಬಿಗ್ಬಾಸ್ ಮನೆಯಲ್ಲಿ ಅನುಷಾ ಹಾಗೂ ಚೈತ್ರಾ ಕುಂದಾಪುರ ಮಧ್ಯೆ ಶುರುವಾಯ್ತು ಯುದ್ಧ; ಅಸಲಿಗೆ ಆಗಿದ್ದೇನು?
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಐದನೇ ವಾರಕ್ಕೆ ಕಾಲಿಟ್ಟಿದೆ. ನಿನ್ನೆ ಬಿಗ್ಬಾಸ್ ಮನೆಯಿಂದ ಮಾನಸ ಆಚೆ ಬಂದಿದ್ದರು. ಈಗ ಬಿಗ್ಬಾಸ್ ಮನೆಯಲ್ಲಿ 13 ಜನ ಉಳಿದುಕೊಂಡಿದ್ದಾರೆ. ಭವ್ಯಾ ಗೌಡ, ತ್ರಿವಿಕ್ರಮ್, ಚೈತ್ರಾ ಕುಂದಾಪುರ, ಗೌತಮಿ, ಮೋಕ್ಷಿತಾ, ಮಂಜು, ಧರ್ಮ ಕೀರ್ತಿ ರಾಜ್, ಅನುಷಾ ರೈ, ಗೋಲ್ಡ್ ಸುರೇಶ್, ಹನುಮಂತ, ಧನರಾಜ್ ಹಾಗೂ ಐಶ್ವರ್ಯ.
ಬಿಗ್ಬಾಸ್ ಮನೆಯಲ್ಲಿ ಏನೇ ನಡೆದರೂ ಈ 13 ಸ್ಪರ್ಧಿಗಳ ಮಧ್ಯೆಯೇ ನಡೆಯಬೇಕು. ಈಗ ಹೊಸ ಪ್ರೋಮೋವೊಂದು ರಿಲೀಸ್ ಆಗಿದೆ. ಆ ಪ್ರೋಮೋದಲ್ಲಿ ಬಿಗ್ಬಾಸ್ ಮನೆ ಮಂದಿಗೆ ಟಾಸ್ಕ್ವೊಂದನ್ನು ಕೊಟ್ಟಿದ್ದಾರೆ. ಇದೇ ಪಗಡೆ ಆಟದಲ್ಲಿ ಚೈತ್ರಾ ಅವರು ಗೌತಮಿಯನ್ನು ಸೇಪ್ ಮಾಡಿದ್ದಾರೆ. ಈ ಟಾಸ್ಕ್ ಮುಗಿದ ಬಳಿಕ ಅನುಷಾ ನಾವು ಅಲ್ಲೇ ಇದ್ವಿ ನಿನ್ನ ಕಣ್ಣಿಗೆ ಕಾಣಿಸಲಿಲ್ಲಾ? ಅಂತ ಕೇಳಿದ್ದಾರೆ. ಅದಕ್ಕೆ ಚೈತ್ರಾ, ನನ್ನ ಕಣ್ಣಿಗೆ ಕಾಣಿಸಿದ್ರೂ ನಾನು ಹಾಗೇಯೇ ಇರುತ್ತೇನೆ ಅಂತ ಹೇಳಿ ಅನುಷಾ ಅವರ ತಲೆಗೆ ಹೊಡೆದಿದ್ದಾರೆ. ಅದಕ್ಕೆ ಕೋಪಗೊಂಡ ಅನುಷಾ ಚೈತ್ರಾ ಅವರ ಮೇಲೆ ರೈಗಾಡಿದ್ದಾರೆ.
ಆಗ ಚೈತ್ರಾ ನೀನು ಆಡಿದ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತೇನೆ ಅಂತ ವಾರ್ನ್ ಮಾಡಿದ್ದಾರೆ. ಇಂದು ರಾತ್ರಿ 9.30ಕ್ಕೆ ಈ ಎಪಿಸೋಡ್ ಪ್ರಸಾರವಾಗಲಿದೆ. ಅಲ್ಲಿ ಯಾವ ವಿಚಾರಕ್ಕೆ ಈ ಗಲಾಟೆ ನಡೆಯುತ್ತು. ಆಮೇಲೆ ಏನೆಲ್ಲಾ ಆಯ್ತು ಎಂದು ಗೊತ್ತಾಗಲಿದೆ. ಒಟ್ಟಿನಲ್ಲಿ ಇಷ್ಟು ದಿನ ಒಳ್ಳೆಯ ಗೆಳತಿಯರಾಗಿದ್ದ ಚೈತ್ರಾ ಹಾಗೂ ಅನುಷಾ ಮಧ್ಯೆ ಸಣ್ಣ ಬಿರುಕು ಮೂಡಿದೆ.
- LATEST NEWS5 days ago
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಕ್ಕಿಯ ಜೊತೆಗೆ ಉಚಿತವಾಗಿ ಸಿಗಲಿವೆ ಈ 9 ವಸ್ತುಗಳು.!
- DAKSHINA KANNADA2 days ago
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಭೀಕರ ಅ*ಪಘಾತ; ಓರ್ವ ಮೃ*ತ್ಯು, ಮತ್ತೋರ್ವ ಗಂಭೀರ
- kerala5 days ago
ಕಾಸರಗೋಡು : ‘ಮಗು’ ವನ್ನು ರಕ್ಷಿಸಿದ ‘ದೈವ’ನರ್ತಕ ; ವಿರೋಚಿತ ಕಥೆ !!
- LATEST NEWS6 days ago
ಮಹಿಳೆಯರೇ.. ನೀವು ಈ ಪಾನೀಯ ಕುಡಿದ್ರೆ 10 ವರ್ಷ ಸಣ್ಣ ಕಾಣೋದು ಗ್ಯಾರಂಟಿ.. !!