ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
ಮಂಗಳೂರು/ಮಧ್ಯಪ್ರದೇಶ: ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಜತ್ ಪಾಟಿದಾರ್ ಅವರಿಗೆ ನಾಯಕತ್ವ ಒದಗಿ ಬಂದಿದೆ.
ರಜತ್ ಪಟಿದಾರ್ ಆರ್ ಸಿಬಿ ತಂಡದಲ್ಲಿ ಪ್ರಮುಖ ಆಟಗಾರ ಹಾಗೂ ಈ ಬಾರಿ ತಂಡ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ರಜತ್ ಪಾಟಿದಾರ್ ಗೆ ರಾಜ್ಯ ತಂಡದ ನಾಯಕತ್ವ ನೀಡಲಾಗಿದೆ.
ನವೆಂಬರ್ 23 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 15 ಸದಸ್ಯರ ಮಧ್ಯಪ್ರದೇಶ ತಂಡವನ್ನು ಘೋಷಿಸಲಾಗಿದೆ.
ಮಧ್ಯಪ್ರದೇಶ ತಂಡದ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಒಂದು ವೇಳೆ ಮುಂಬರುವ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ ತಂಡವು ಫೈನಲ್ ಗೆ ತಲುಪಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ರೇಸ್ ನಲ್ಲಿ ರಜತ್ ಪಾಟಿದಾರ್ ಕೂಡ ತೀವ್ರ ಪೈಪೋಟಿ ಕೊಡಲಿದ್ದಾರೆ.
ಆರ್ ಸಿಬಿ ಪರ 24 ಇನ್ನಿಂಗ್ಸ್ ಆಡಿರುವ ರಜತ್ ಪಾಟಿದಾರ್ 1 ಶತಕ 7 ಅರ್ಧಶತಕಗಳೊಂದಿಗೆ ಒಟ್ಟು 799 ರನ್ ಕಲೆಹಾಕಿದ್ದಾರೆ. ಈಗಗಾಲೇ ಆರ್ ಸಿ ಬಿ ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ತಂಡದಿಂದ ಹೊರಬಿದಿದ್ದಾರೆ. ಇದರಿಂದ ನಾಯಕತ್ವ ಯಾರ ಪಾಲಾಗಲಿದೆ ಎಂಬುವುದು ತ್ರೀವ್ರ ಕುತೂಹಲ ಮೂಡಿಸಿದೆ.
ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಪತ್ನಿ ದೇವಿಶಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ದಂಪತಿಗಳಿಗೆ ಗೌರವಾರ್ಪಣೆ ಮಾಡಲಾಯಿತು.
ಸೂರ್ಯಕುಮಾರ್ ಯಾದವ್ ಮತ್ತು ದೇವಿಶಾ ಶೆಟ್ಟಿ ಈಗ ಮತ್ತೆ ಸುದ್ದಿಯಲ್ಲಿದ್ದು, ಈ ಬಾರಿ ಸುದ್ದಿಯಾಗಲು ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿರುವುದು. ಟಿ20 ವಿಶ್ವಕಪ್ಗೂ ಮುನ್ನ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಅದಕ್ಕಾಗಿ, ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬಳಿಕ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ಸೂರ್ಯಕುಮಾರ್ ಯಾದವ್ಗೆ ವಿಶೇಷ ನಂಟು ಬೆಳೆಯಲು ಮುಖ್ಯ ಕಾರಣ ಪತ್ನಿ ದೇವಿಶಾ ಶೆಟ್ಟಿ.
ದೇವಿಶಾ ಶೆಟ್ಟಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಮುಂಬೈನಲ್ಲಿ ಹುಟ್ಟಿ ಬೆಳೆದ ದೇವಿಶಾ ಪೊದ್ದಾರ್ ಪದವಿ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಪೂರೈಸಿದ್ದು, ಸೂರ್ಯಕುಮಾರ್ ಯಾದವ್ ಕೂಡ ಅಲ್ಲಿಯೇ ಓದಿದ್ದರು. 2012 ರಲ್ಲಿ ಕಾಲೇಜ್ನಲ್ಲಿ ನಡೆದ ನೃತ್ಯ ಕಾರ್ಯಕ್ರಮದಲ್ಲಿ ಸೂರ್ಯಕುಮಾರ್ ಯಾದವ್, ದೇವಿಶಾ ಶೆಟ್ಟಿ ಅವರನ್ನು ಮೊದಲು ನೋಡಿದ್ದಾರೆ. ಇದೇ ವೇಳೆ ದೇವಿಶಾ ಮಾಡಿದ ನೃತ್ಯಕ್ಕೆ ಫಿದಾ ಆಗಿದ್ದರು. ಸೂರ್ಯಕುಮಾರ್ ಸೀನಿಯರ್ ಆಗಿದ್ದು, ದೇವಿಶಾ ಜೂನಿಯರ್ ವಿದ್ಯಾರ್ಥಿನಿ.
ನಿಧಾನವಾಗಿ ಆವರಿಬ್ಬರ ಸ್ನೇಹ ಬೆಳೆದಿದ್ದು, ಬಳಿಕ ಪ್ರೇಮವಾಗಿ ಬದಲಾಗಿದೆ. ಸೂರ್ಯನ ಪ್ರೇಮ ನಿವೇದನೆಯನ್ನು ದೇವಿಶಾ ಶೆಟ್ಟಿ ಒಪ್ಪಿಕೊಂಡಿದ್ದರು. ಅಲ್ಲದೆ 2012 ರಿಂದ 2016 ರವರೆಗೆ ಇಬ್ಬರು ಪ್ರೇಮಪಕ್ಷಿಗಳಾಗಿ ತಿರುಗಾಡಿದ್ದು, 2016 ರಲ್ಲಿ ತಮ್ಮ ಪ್ರೇಮ ವಿಚಾರವನ್ನು ಮನೆಯವರಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ, ಅದಾಗಲೇ ಐಪಿಎಲ್ ಮೂಲಕ ಸದ್ದು ಮಾಡಿದ್ದ ಸೂರ್ಯನನ್ನು ದೇವಿಶಾ ಕುಟುಂಬದವರು ಒಪ್ಪಿದ್ದು, ಇತ್ತ ಸೂರ್ಯಕುಮಾರ್ ಯಾದವ್ ಅವರ ಕುಟುಂಬದವರಿಗೂ ದೇವಿಶಾ ಇಷ್ಟವಾಗಿದ್ದರು.
ಮೇ 29, 2016 ರಲ್ಲಿ ಇಬ್ಬರ ನಿಶ್ಚಿತಾರ್ಥ ನೆರವೇರಿದ್ದು, ದಕ್ಷಿಣ ಭಾರತದ ಸಂಪ್ರದಾಯದಂತೆ ಜುಲೈ 7, 2016 ರಂದು ವಿವಾಹವಾದಗಿದ್ದು. ಇದೀಗ ಇಬ್ಬರು ಮಾದರಿ ದಂಪತಿಗಳಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಮುಂಬೈನಲ್ಲೇ ಬೆಳೆದರೂ ತವರಿನ ನಂಟು ಬಿಟ್ಟುಕೊಳ್ಳದ ದೇವಿಶಾ ಶೆಟ್ಟಿ ಪತಿಯ ಜೊತೆ ಆಗಾಗ ತುಳುನಾಡಿಗೆ ಬರುವ ಮೂಲಕ ಸುದ್ದಿಯಾಗುತ್ತಿದ್ದಾರೆ.