BELTHANGADY
ಹದಿ ಹರೆಯದ ವಿದ್ಯಾರ್ಥಿಯ ಹನಿಟ್ರ್ಯಾಪ್ ಯತ್ನ ; ಪೊಲೀಸರಿಂದ ತನಿಖೆ !
ಬೆಳ್ತಂಗಡಿ : ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಪ್ರಕರಣ ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ತಕ್ಷಣವೇ ಸೂಕ್ತ ಕ್ರಮ ಕೈಗೊಂಡ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಲಾಗಿದೆ.
ಬೆಳ್ತಂಗಡಿ ವ್ಯಾಪ್ತಿಯ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನ ದೇಹವನ್ನು ಕಾಣಿಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ.
ವೀಡಿಯೋ ವೈರಲ್ ಬೆದರಿಕೆ:
ಇದಾದ ಬಳಿಕ ವಿದ್ಯಾರ್ಥಿಯ ಮುಖವನ್ನು ಬಳಿಕ ಅಶ್ಲೀಲ ವೀಡಿಯೋ ಕ್ರಿಯೆಟ್ ಮಾಡಲಾಗಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಮತ್ತೊಬ್ಬ ವ್ಯಕ್ತಿ ಕರೆ ಮಾಡಿ ಬೆದರಿಸಿದ್ದಾನೆ. ಅಲ್ಲದೇ, ಈ ವೀಡಿಯೋ ವೈರಲ್ ಆಗಬಾರದೆಂದಾಲ್ಲಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಇದರಿಂದ ಆತಂಕಕ್ಕೊಳಗಾದ ವಿದ್ಯಾರ್ಥಿ, ಈ ವಿಚಾರವನ್ನು ಮಾಧ್ಯಮ ಪ್ರತಿನಿಧಿಯೋರ್ವರ ಗಮನಕ್ಕೆ ತಂದಿದ್ದಾನೆ. ಅವರು ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆಯ ಹಾಗೂ ಸೈಬರ್ ಕ್ರೈಮ್ ವಿಭಾಗಕ್ಕೆ ತಕ್ಷಣವೇ ಮಾಹಿತಿ ನೀಡುವಂತೆ ಸಲಹೆ ನೀಡಿದ್ದಾರೆ. ಈ ವೇಳೆ ಪೊಲೀಸರು ಸಂಬಂಧಪಟ್ಟ ಖಾತೆಗಳನ್ನು ಬ್ಲಾಕ್ ಮಾಡುವಂತೆ ವಿದ್ಯಾರ್ಥಿಗೆ ತಿಳಿಸಿದ್ದಾರೆ.
ತಮಗೆ ತಿಳಿಯದಂತೆ ವೀಡಿಯೋ ಕರೆ ಸ್ವೀಕರಿಸಿದ ಮಾತ್ರಕ್ಕೆ ಅವರ ಅಶ್ಲೀಲ ವೀಡಿಯೋವನ್ನು ಸಿದ್ಧ ಪಡಿಸಿ, ಅದನ್ನು ಮಾನಹಾನಿಗೆ ಬಳಸುವ ಹಾಗೂ ಬೆದರಿಕೆಯೊಡ್ಡುವ ಮೂಲಕ ಹಣಕ್ಕಾಗಿ ಪೀಡಿಸುವ ಜಾಲಗಳು ಸಕ್ರೀಯವಾಗಿದ್ದು, ಈ ಜಾಲಕ್ಕೆ ಸಿಲುಕಿದರೂ ಭಯಪಡದೆ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ಸಹಾಯ ಸಂಖ್ಯೆ 1930ಕ್ಕೆ ಸಂಪರ್ಕಿಸಿ ಸಹಾಯ ಯಾಚಿಸಬಹುದೆಂದು ಪೊಲೀಸರು ತಿಳಿಸಿದ್ದಾರೆ.
BELTHANGADY
ಬೆಳ್ತಂಗಡಿ: ಮನೆಗೆ ನುಗ್ಗಿ ಕಳ್ಳತನ; ಪ್ರಕರಣ ದಾಖಲು
ಬೆಳ್ತಂಗಡಿ: ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ಅ.27 ರಂದು ಸಂಜೆ 5 ಗಂಟೆಯಿಂದ ಅ.28 ರ ಮಧ್ಯಾಹ್ನ 12:15 ಗಂಟೆ ಮಧ್ಯ ಅವಧಿಯಲ್ಲಿ ಮನೆಯಿಂದ ಚಿನ್ನಭಾರಣ ಹಾಗೂ ನಗದು ಕಳವಾದ ಘಟನೆ ನಡೆದಿದೆ.
ಪಾಂಡೀಲು ಹೊಸ ಮನೆ ನಿವಾಸಿ ಸುಜಾತಾ (51)ಅವರು ಮನೆಗೆ ಬೀಗ ಹಾಕಿ ತನ್ನ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋದ ಸಮಯ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ ಕಳವು ಗೈದಿದ್ದಾರೆ.
ಮನೆಯ ಗೋದ್ರೇಜ್ ಕಪಾಟಿನಲ್ಲಿದ್ದ ನಗದು 25,000 ರೂ. ಹಾಗೂ 5 ಗ್ರಾಂ. ತೂಕದ ಬೆಂಡೋಲೆ ಒಂದು ಜತೆ ಹಾಗೂ 4 ಗ್ರಾಂ. ತೂಕದ ಚಿನ್ನದ ಉಂಗುರ ಒಂದನ್ನು ಕಳವು ಮಾಡಿಕೊಂಡು ಹೋಗಿದ್ದು ಕಳುವಾದ ಸೊತ್ತುಗಳ ನಗದು ಸೇರಿ ಒಟ್ಟು 80,000 ರೂ. ಅಂದಾಜು ಮೌಲ್ಯ ಎಂದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
BELTHANGADY
ವೈನ್ ಶಾಪ್ ಕಳ್ಳತನ ಪ್ರಕರಣ; ಅಂತರ್ ರಾಜ್ಯ ಕಳ್ಳರ ಸೆರೆ
ಬೆಳ್ತಂಗಡಿ : ವೈನ್ಸ್ ಶಾಪ್ ಮತ್ತು ಮೊಬೈಲ್ ಶಾಪ್ ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರ ಬಲೆಯಲ್ಲಿ ಅಂತರ್ ರಾಜ್ಯ ಕಳ್ಳರು ಸೆರೆಯಾಗಿದ್ದಾರೆ.
ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ಮದ್ಯದ ಅಂಗಡಿ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಗಳನ್ನು ಕಳ್ಳತನ ಮಾಡಿದ ಘಟನೆ ಅ.13 ರಂದು ಭಾನುವಾರ ರಾತ್ರಿ ನಡೆದಿತ್ತು. ಅಂಗಡಿಯ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಒಳಗೆ ಇರಿಸಲಾಗಿದ್ದ ಸುಮಾರು ಒಂಬತ್ತು ಸಾವಿರ ನಗದು ಎರಡು ಬಿಯಾರ್ ಬಾಟಲ್‌ನ್ನು ಕಳ್ಳತನ ಮಾಡಲಾಗಿತ್ತು. ಜೊತೆಗೆ ಅದೇ ದಿನ ರಾತ್ರಿ ಉಜಿರೆಯ ಮೊಬೈಲ್ ಶಾಪ್ ನಲ್ಲಿ ಕೂಡ ಕಳ್ಳತನವಾಗಿ 600 ರೂಪಾಯಿಗಳನ್ನು ಕಳ್ಳರು ಎಗರಿಸಿದ್ದರು. ಈ ಕಳ್ಳತನ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಪ್ರಕರಣದ ಜಾಡು ಹಿಡಿದ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಪುರ್ ಮರ್ ಮತ್ತು ಸಬ್ ಇನ್ಸೆಕ್ಟರ್ ಮುರುಳಿಧರ್ ನಾಯ್ ನೇತೃತ್ವದ ತಂಡ ಸಿಸಿಕ್ಯಾಮರಗಳ ಮೂಲಕ ಕಳ್ಳತನಕ್ಕೆ ಬಳಸಿದ ಬೈಕ್ ಪತ್ತೆ ಹಚ್ಚಿದ್ದು, ಈ ವೇಳೆ ಆರೋಪಿಗಳು ಕೊಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿರುವುದು ಪತ್ತೆಯಾಗಿತ್ತು.
ಇದನ್ನು ಬೆನ್ನತ್ತಿದಾಗ ಪೊಲೀಸರಿಗೆ ಅಪ್ರಾಪ್ತ ಬಾಲಕ ಹಾಗೂ ಮತ್ತೊಬ್ಬನ ಸುಳಿವು ಸಿಕ್ಕಿತ್ತು. ಈ ಇಬ್ಬರೂ ಆರೋಪಿಗಳು ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.16 ರಂದು ಮಧ್ಯರಾತ್ರಿ 2:45 ಕ್ಕೆ ಕೋಣಿ ಶಾಖೆಯ ಕರ್ನಾಟಕ ಬ್ಯಾಂಕ್ ಕಳ್ಳತನಕ್ಕೆ ಯತ್ನ ಮಾಡುತ್ತಿರುವಾಗ ಬ್ಯಾಂಕ್ ನ ಮಾನಿಟರಿಂಗ್ ಹೈದರಾಬಾದ್ ಸಂಸ್ಥೆ ನೋಡಿಕೊಳ್ಳುತ್ತಿದ್ದು ಅವರು ಲೈವ್ ಮೂಲಕ ಸಿಸಿಕ್ಯಾಮರದ ಮೂಲಕ ಕಳ್ಳತನ ಯತ್ನ ನೋಡುತ್ತಿದ್ದು ಈ ವೇಳೆ ಬ್ಯಾಂಕ್ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿ ಅಂತರ್ ರಾಜ್ಯ ಕಳ್ಳರಾದ ಆರೋಪಿಗಳಾದ ಕೊಪ್ಪಳ ಜಿಲ್ಲೆಯ ಇಂದ್ರನಗರ ನಿವಾಸಿ ಮೊಹಮ್ಮದ್ ಹುಸೇನ್(22) ಮತ್ತು ಅಪ್ರಾಪ್ತ ಬಾಲಕ ರೆಡ್ ಹ್ಯಾಂಡ್ ಆಗಿ ಸೆರೆಹಿಡಿದಿದ್ದಾರೆ.
ಈ ಆರೋಪಿತರು ಕುಂದಾಪುರ ಠಾಣೆ ಮಾತ್ರವಲ್ಲದೆ, ಬೆಳ್ತಂಗಡಿ ಠಾಣೆ, ಪಡುಬಿದ್ರಿ ಠಾಣೆ, ಬಳ್ಳಾರಿ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಬ್ಯಾಂಕ್ ಕಳ್ಳತನ, ಬೈಕ್ ಕಳ್ಳತನ, ಅಂಗಡಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ.
ಬೆಳ್ತಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸಲು ಇಬ್ಬರು ಆರೋಪಿಗಳನ್ನು ಬಾಡಿ ವಾರೆಂಟ್ ಮೂಲಕ ವಶಕ್ಕೆ ಪಡೆಯಲು ನ್ಯಾಯಾಲಯಕ್ಕೆ ಅನುಮತಿಯನ್ನು ಕೊರಿದ್ದು ಎರಡು ದಿನದಲ್ಲಿ ಆರೋಪಿಗಳನ್ನು ಉಡುಪಿ ಜೈಲಿನಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಾಗಿದೆ.
BELTHANGADY
ಬೆಳ್ತಂಗಡಿ ಮಲಂತಬೆಟ್ಟುವಿನಲ್ಲಿ ಹೆಜ್ಜೇನು ದಾಳಿ …!!
ಬೆಳ್ತಂಗಡಿ : ಸಂತ ತೆರೆಸಾ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ಮೇಲಂತಬೆಟ್ಟು ಶಾಲೆಯಿಂದ ಮನೆ ಕಡೆ ಬರುತ್ತಿದ್ದರು. ಇವರ ಮೇಲೆ ತೀವ್ರವಾಗಿ ಹೆಜ್ಜೇನು ದಾಳಿ ನಡೆಸಿತ್ತು. ಮಗು ದಾರಿ ತೋರದೆ ಕೆಲ ಮನೆಗಳಿಗೆ ಓಡಿತ್ತು. ಭಯಭೀತಿಯಿಂದಾಗಿ ಮನೆ ಬಾಗಿಲು ಮುಚ್ಚಿತ್ತು.
ಮೇಲಂತಬೆಟ್ಟು ಗ್ರಾಮದ ಬಳಿ ಹೆಜ್ಜೇನು ಜನರ ಮೇಲೆ ದಾಳಿ ಮಾಡಿದ್ದು, ಜನ ಭಯದಿಂದ ಓಡಿ ಹೋದರು. ಸುತ್ತಲಿನ ಮನೆಯವರು ಭೀತಿಯಿಂದ ಮನೆಬಾಗಿಲು ಮುಚ್ಚಿದರು.
ಹೆಜ್ಜೇನು ದಾಳಿಯಿಂದ ನೋವು ಉರಿ ತಾಳಲಾರದೆ, ಅತ್ತು ಕರೆದರೂ ರಕ್ಷಣೆಗೆ ರಕ್ಷಣೆಗೆ ಯಾರೂ ಇಲ್ಲದಾಗ ಕೊನೆಯ ಉಪಾಯ ಇಲ್ಲದೆ ಪಂಚಾಯತ್ ಬಳಿ ಓಡಿದಾಗ ಪಂಚಾಯತ್ ಲೈಬ್ರರಿಯನ್ ಚಂದ್ರಾವತಿ ಯೊಗೀಶ್ ಪೂಜಾರಿ ಗೇರುಕಟ್ಟೆ ಬಂದು ಮುಚ್ಚಿದ ಬಾಗಿಲನ್ನು ತೆರೆದು ಮಗುವನ್ನು ಪಂಚಾಯತ್ ಒಳಗೆ ಕರೆಸಿಕೊಂಡು ಹೊದರು. ಆದರೂ ಬೆನ್ನು ಬಿಡದ ಹೆಜ್ಜೇನು ಆಗಲೂ ದಾಳಿ ನಡೆಸಿತು.
ಮುಂದಕ್ಕೆ ಅಧ್ಯಕ್ಷರ ಕೊಠಡಿಯ ಒಳಗೆ ಹೋಗಿ ಬಾಗಿಲು ಮುಚ್ಚಿ ನೋಡಿದಾಗ ಅಲ್ಲಿಯೂ ಹೆಜ್ಜೇನು ಬಂದಿತ್ತು. ಆವಾಗ ಚಂದ್ರಮತಿಯು ಪೊರಕೆ ಸಹಾಯದಿಂದ ಬಹಳಷ್ಟು ಸಂಖ್ಯೆಯಲ್ಲಿದ್ದ ಹೆಜ್ಜೇನನ್ನು ಕೊಂದು ಮಗುವಿನ ಬಟ್ಟೆ ಬಿಚ್ಚಿಸಿ ಹೆಜ್ಜೇನು ಮುಳನ್ನು ತುರ್ತಾಗಿ ತೆಗೆದು ಮನೆಯವರಿಗೆ ಸುದ್ದಿ ಮುಟ್ಟಿಸಿದರು.
ನಂತರ ಮಗುವನ್ನು ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಮಗು ಈಗ ಆರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾನೆ. ಪಂಚಾಯತ್ ನೌಕರ ಚಂದ್ರಾವತಿಯವರ ಸಮಯ ಪ್ರಜ್ಞೆ, ತಾಯಿ ಮಮತೆ, ಧೈರ್ಯ ಗ್ರಾಮಸ್ಥರ ಪ್ರಿತಿಗೆ ಪಾತ್ರವಾಯಿತು.
- LATEST NEWS6 days ago
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಕ್ಕಿಯ ಜೊತೆಗೆ ಉಚಿತವಾಗಿ ಸಿಗಲಿವೆ ಈ 9 ವಸ್ತುಗಳು.!
- DAKSHINA KANNADA3 days ago
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಭೀಕರ ಅ*ಪಘಾತ; ಓರ್ವ ಮೃ*ತ್ಯು, ಮತ್ತೋರ್ವ ಗಂಭೀರ
- kerala6 days ago
ಕಾಸರಗೋಡು : ‘ಮಗು’ ವನ್ನು ರಕ್ಷಿಸಿದ ‘ದೈವ’ನರ್ತಕ ; ವಿರೋಚಿತ ಕಥೆ !!
- LATEST NEWS7 days ago
ಮಹಿಳೆಯರೇ.. ನೀವು ಈ ಪಾನೀಯ ಕುಡಿದ್ರೆ 10 ವರ್ಷ ಸಣ್ಣ ಕಾಣೋದು ಗ್ಯಾರಂಟಿ.. !!