ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.