Connect with us

    DAKSHINA KANNADA

    ಪುತ್ತೂರಿನಲ್ಲಿ ಭೀಕರ ಅಪಘಾತ; ಇಬ್ಬರು ಸಾ*ವು

    Published

    on

    ಪುತ್ತೂರು : ಆಕ್ಟಿವಾ- ಬೊಲೆರೋ-ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾ*ತ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃ*ತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ.

    ಲೋಕೇಶ್(48), ರವೀಂದ್ರ(57) ಮೃತಪಟ್ಟವರು. ಮೃತರು  ಸೋಮವಾರಪೇಟೆಯ ತ್ಯಾಗತೂರಿನವರು. ಮೃತ ರವೀಂದ್ರ ಅವರು ಟ್ಯಾಂಕರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಮಂಗಳೂರಿನ ಬಾಡಿಗೆ ರೂಂ ನ್ನು ಖಾಲಿ ಮಾಡಿ ಮಡಿಕೇರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

    ಇದನ್ನೂ ಓದಿ : ನಕಲಿ ವೈದ್ಯನಿಂದ ಭ್ರೂಣ ಹ*ತ್ಯೆ ..! ತನಿಖೆ ವೇಳೆ ವೈದ್ಯನ ಕರಾಳ ಮುಖ ಬಯಲು..!!

    ಆಕ್ಟಿವಾಗೆ ಆಲ್ಟೋ ಡಿ*ಕ್ಕಿ ಹೊಡೆದು ಬಳಿಕ ಮುಂಭಾಗದಲ್ಲಿದ್ದ ಬೊಲೆರೋ ಡಿ*ಕ್ಕಿ ಹೊಡೆದು ಈ ದುರಂ*ತ ನಡೆದಿದೆ. ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    DAKSHINA KANNADA

    ಮುಳುಗಿದ ಪಡೀಲ್ ಅಂಡರ್ಪಾಸ್ – ಸಂಚಾರ ಸ್ಥಗಿತ

    Published

    on

    ಮಂಗಳೂರು: ಕರಾವಳಿಯಾದ್ಯಂತ ಸುರಿಯುತ್ತಿರುವ ಮಳೆ ಜನತೆಯನ್ನು ಚಂಡಿ ಹಿಡಿಸಿ ಬಿಟ್ಟಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಎರಡು ದಿನಗಳಿಂದ ಬಿರುಸು ಪಡೆದುಕೊಂಡಿದ್ದು ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

    ನಗರದ ಹಲವು ಕಡೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿದ್ದು, ಜನರು ಪರದಾಡುವಂತಾಗಿದೆ. ನಗರದ ಪಡೀಲ್ – ಬಜಾಲ್ ಸಂಪರ್ಕಿಸುವ ರಸ್ತೆಯ ಅಂಡರ್ಪಾಸ್‌ ನೀರಿನಿಂದ ತುಂಬಿ ಮುಳುಗಿ ಹೋಗಿದೆ. ಇಂದು ಬೆಳಿಗ್ಗೆ ಅಂಡರ್‌ಪಾಸ್‌ ಕೆಳಭಾಗದಲ್ಲಿ ನೀರು ತುಂಬಿಕೊಂಡಿದ್ದು ಜನ ಸಂಚರಿಸಲಾಗದೇ ತೊಂದರೆ ಅನುಭವಿಸಿದರು.

    ಕಾರೊಂದು ನೀರಿನಲ್ಲಿ ಬರಲಾಗದ ಸ್ಥಿತಿಯಲ್ಲಿದ್ದು ಬಳಿಕ ಸ್ಥಳೀಯರು ವಾಹನವನ್ನು ದೂಡಿಕೊಂಡು ಬಂದು ಮೇಲೆ ತಂದಿದ್ದಾರೆ. ಪಡೀಲ್‌ – ಬಜಾಲ್‌ ಸಂಪರ್ಕಿಸುವ ಈ ಅಂಡರ್ಪಾಸ್‌ ಪ್ರತೀ ಮಳೆಗಾಲದ ಸಂದರ್ಭದಲ್ಲೂ  ಜನ ಕಂಗೆಡುತ್ತಿದ್ದಾರೆ.

    Continue Reading

    DAKSHINA KANNADA

    ರಾಜ್ಯದಲ್ಲಿ ಐದು ದಿನಗಳ ಕಾಲ ಭರ್ಜರಿ ಮಳೆಯ ಎಚ್ಚರಿಕೆ

    Published

    on

    ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದೆ.

    ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

    ಎಲ್ಲೆಲ್ಲಿ ಆರೆಂಜ್ ಅಲರ್ಟ್?

    ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ

    ಎಲ್ಲೆಲ್ಲಿ ಯೆಲ್ಲೋ ಅಲರ್ಟ್?

    ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ

    Continue Reading

    DAKSHINA KANNADA

    ಕುಂಬಳೆ: ಪತ್ನಿಯ ಸೀಮಂತಕ್ಕಾಗಿ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು

    Published

    on

    ಕಾಸರಗೋಡು: ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್‌ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬಂಬ್ರಾಣ ಉಜಾರು ನಿವಾಸಿ ದಿ|ಅಮ್ಮು ಶೆಟ್ಟಿ ಅವರ ಪುತ್ರ ಅಜಿತ್‌ ಶೆಟ್ಟಿ(32) ಸಾವಿಗೀಡಾದವರು.

    ಜೂ.24 ರಂದು ರಾತ್ರಿ 9.30ಕ್ಕೆ ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ಈ ಸಾವು ಸಂಭವಿಸಿದೆ.

    ಅವರು ಕತಾರ್‌ನಲ್ಲಿ ಉದ್ಯೋಗದಲ್ಲಿದ್ದರು. ಜೂ. 22ರಂದು ಊರಿಗೆ ಬಂದಿದ್ದರು. ಜೂ. 23ರಂದು ಪತ್ನಿಯ ಸೀಮಂತ ಕಾರ್ಯಕ್ರಮ ನಡೆದಿತ್ತು. ಜೂ. 24ರಂದು ರಾತ್ರಿ ಕುಂಬಳೆ ಪೇಟೆಗೆ ಬಂದ ಅಜಿತ್‌ ಶೆಟ್ಟಿ ಆಹಾರ ವಸ್ತುಗಳನ್ನು ಖರೀದಿಸಿ ಬುಲೆಟ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಆರಿಕ್ಕಾಡಿ ಶ್ರೀ ಹನುಮಾನ್‌ ದೇವಸ್ಥಾನ ಸಮೀಪ ಬೈಕ್‌ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಹಾಗು ಇತರ ಪ್ರಯಾಣಿಕರು ಕುಂಬಳೆಯ ಜಿಲ್ಲಾ ಸರಕಾರಿ ಆಸ್ಪತ್ರೆಗೆ ತಲುಪಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು. ಮೃತರು ತಾಯಿ, ಪತ್ನಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

    Continue Reading

    LATEST NEWS

    Trending