Connect with us

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Ancient Mangaluru

ಮೇ.10 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನೆ

Published

on

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನಾ ಸಮಾರಂಭ ಮೇ 10 ರಂದು ಮಧ್ಯಾಹ್ನ 12 ಗಂಟೆಗೆ ಮುಲ್ಕಿಯ ಲಘುವಿ ಕಾಂಪ್ಲೆಕ್ಸ್ ಮುಖ್ಯರಸ್ತೆ ಪಕ್ಷಿಕೆರೆಯಲ್ಲಿ ನಡೆಯಲಿದೆ.

ಮುಲ್ಕಿ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಪಕ್ಷಿಕೆರೆ ಸಂತ ಜುದರ ಪುಣ್ಯಕ್ಷೇತ್ರ ಧರ್ಮಗುರು ಅತಿ ವಂದನೀಯ ಗುರುಗಳು ಮೆಲ್ವಿನ್ ನೊರೊಹ್ನಾ ದ್ವೀಪ ಪ್ರಜ್ವಲಿಸಲಿದ್ದಾರೆ. ಪಕ್ಷಿಕೆರೆ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಶ್ರೀ ಕೆ.ಸೀತಾರಾಮ್ ಶೆಟ್ಟಿ, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಗಣಕೀಕೃತ ಬ್ಯಾಂಕಿಂಗ್ ಗೆ ಚಾಲನೆ ನೀಡಲಿದ್ದಾರೆ. ಪಕ್ಷಿಕೆರೆ, ಎಸ್ ಕೋಡಿ, ಬಿಲ್ಲವ ಸಂಘದ ಅಧ್ಯಕ್ಷ ನವೀನ್ ಹರಿಪಾದೆ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

ಸಮಾಜಸೇವಕ ಧನಂಜಯ ಶೆಟ್ಟಿಗಾರ್ ಇ-ಮುದ್ರಾಂಕ ಸೇವೆಗೆ, ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಆವರ್ತನ ಠೇವಣಿಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಉಳಿತಾಯ ಖಾತೆಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಕಟ್ಟಡದ ಮಾಲಕ ಶ್ರೀನಿವಾಸ ಕೋಟ್ಯಾನ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸರ್ವರಿಗೂ ಆದರದ ಸ್ವಾಗತ ಕೋರಲಾಗಿದೆ.

Continue Reading

DAKSHINA KANNADA

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

Published

on

ಮಂಗಳೂರು:  2023- 24ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.  ಈ ಪೈಕಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಹಾಜರಾಗಿದ್ದರು. 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

ಇದೀಗ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆ  ಶೇಕಡಾ 94 ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಹೊಂದಿದೆ. ಶಿವಮೊಗ್ಗ ಶೇ.88.67 ಫಲಿತಾಂಶದಿಂದ  ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

ರಾಜ್ಯಕ್ಕೆ ಬಾಗಲಕೋಟೆ ಮುಧೋಳಿನ ಅಂಕಿತಾ 625 ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ದಕ್ಷಿಣ ಕನ್ನಡ ಚಿನ್ಮಯ್ 624 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಮುಂದೆ ಓದಿ..; ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದು. kseab.karnataka.gov.in ಅಥವಾ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದಾಗಿದೆ.

Continue Reading

DAKSHINA KANNADA

ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

Published

on

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20 ವ) ಎಂಬವರು ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮೇ.8ರಂದು ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದೆ. ನಗರದ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದ ನಿತೇಶ್ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.

suicide

ಮುಂದೆ ಓದಿ..; PUTTUR : ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ತೆಗೆದವರಿಗೆ ಬಿತ್ತು ಧರ್ಮದೇಟು!

ಇವರು ಉಡುಪಿ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ 2 ವರ್ಷಗಳಿಂದ ಮಂಗಳೂರು ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಸುಮಾರು 5 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಈ ಬಗ್ಗೆ ಆಕೆಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

LATEST NEWS

Trending