ಪ್ರವೀತ್ ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದನಾಗಿದ್ದ. ಸಸಿಹಿತ್ಲು ಮೇಳದ ಭರವಸೆಯ ಯುವ ಕಲಾವಿದ ಪ್ರವೀತ್ ಆಚಾರ್ಯ ಎಲ್ಲರೊಂದಿಗೆ ಬೆರೆಯುತ್ತಾ, ಸದಾ ಕ್ರಿಯಾಶೀಲತೆಯಿಂದ ಹಿರಿಯರನ್ನು ಗೌರವಿಸುತ್ತಾ, ಕಿರಿಯರೊಂದಿಗೆ ಸ್ನೇಹಿತನಂತೆ ಇರುತ್ತಿದ್ದ ಕಲಾವಿದನ ಅ*ಗಲುವಿಕೆ ಸಸಿಹಿತ್ಲು ಮೇಳಕ್ಕೆ ಬರಸಿಡಿಲು ಬಡಿದಂತಾಗಿದೆ.
ಮಂಗಳೂರು/ ನವದೆಹಲಿ : ಇತ್ತೀಚಿನ ದಿನಗಳಲ್ಲಿ ಅಭಿವೃದ್ದಿಯ ಹೆಸರಿನಲ್ಲಿ ಅನೇಕ ಜನರು ತಮ್ಮ ಕೃಷಿ ಹಾಗೂ ಪಟ್ಟಾ ಜಮೀನುಗಳನ್ನು ಸರ್ಕಾರಕ್ಕೆ ಬಿಟ್ಟುಕೊಡುವ ಪರಿಸ್ಥಿತಿ ಬಂದಿದೆ. ಹೀಗೆ ಬಿಟ್ಟು ಕೊಟ್ಟ ಜಮೀನಿಗೆ ಪರಿಹಾರ ನೀಡಲಾಗುತ್ತಿದೆಯಾದ್ರೂ ಪರಿಹಾರದ ಹಣಕ್ಕಾಗಿ ಜನರು ಅಲೆದಾಡುವ ಪರಿಸ್ಥಿತಿ ಕೂಡಾ ಇದೆ. ಆದ್ರೆ ಇನ್ನು ಮುಂದೆ ಈ ರೀತಿ ಸ್ವಾಧೀನಪಡಿಸಿದ ಜಮೀನಿಗೆ ಪರಿಹಾರ ನೀಡಲು ವಿಳಂಬವಾದ್ರೆ ಚಿಂತಿಸಬೇಕಾಗಿಲ್ಲ. ಯಾಕಂದ್ರೆ ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಭೂ ಪರಿಹಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಭೂಮಿ ಕಳೆದುಕೊಳ್ಳುವ ಸಂತ್ರಸ್ತರ ಪರವಾಗಿ ತೀರ್ಪೊಂದನ್ನು ನೀಡಿದೆ. ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ವಿಶೇಷ ಅಧಿಕಾರ ಬಳಸಿಕೊಂಡು ನ್ಯಾಯಾಲಯವು ಈ ತೀರ್ಪು ನೀಡಿದೆ. ಈ ತೀರ್ಪಿನಿಂದಾಗಿ ಇನ್ನು ಮುಂದೆ ಭೂ ಸ್ವಾಧೀನ ಮಾಡಿ ಪರಿಹಾರ ಸಮಯಕ್ಕೆ ಸರಿಯಾಗಿ ನೀಡದೇ ಇದ್ರೆ ಸರ್ಕಾರದ ಬೊಕ್ಕಸಕ್ಕೇ ನಷ್ಟ ಉಂಟಾಗಲಿದೆ. ಯಾಕಂದ್ರೆ ಇನ್ನು ಮುಂದೆ ಸರ್ಕಾರ ಭೂ ಸ್ವಾಧೀನ ಮಾಡಿ ಧೀರ್ಘಕಾಲ ಪರಿಹಾರ ನೀಡದೇ ಇದ್ದರೆ ಪರಿಹಾರ ನೀಡುವ ಸಮಯದಲ್ಲಿನ ಮಾರುಕಟ್ಟೆಯ ದರವನ್ನು ಸಂತ್ರಸ್ತರಿಗೆ ನೀಡಬೇಕಾಗುತ್ತದೆ.
ಯಾವ ಕಾರಣಕ್ಕೆ ಈ ಅದೇಶ ನೀಡಲಾಗಿದೆ..?
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB) ವಿರುದ್ಧ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿ ಈ ಆದೇಶ ನೀಡಲಾಗಿದೆ. ಬೆಂಗಳೂರು ಮೈಸೂರು ಕಾರಿಡಾರ್ ಯೋಜನೆಗಾಗಿ ಸಾವಿರಾರು ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು 2003 ರಲ್ಲಿ KIADB ಅಧಿಸೂಚನೆ ಹೊರಡಿಸಿತ್ತು. ಆದ್ರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೂ ಸಂತ್ರಸ್ತರಿಗೆ ಪರಿಹಾರವನ್ನು ನೀಡಿರಲಿಲ್ಲ. ನೋಟಿಫಿಕೇಷನ್ ಬಳಿಕವೂ ಪರಿಹಾರ ಸಿಗದ ಕಾರಣ ಜಮೀನು ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. 2019 ರಲ್ಲಿ ಪರಿಹಾರ ನೀಡಲು KIADB ಮುಂದಾಗಿತ್ತಾದ್ರೂ ಅದು 2003 ರ ಮಾರುಕಟ್ಟೆ ದರವಾಗಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣದ ತೀರ್ಪು ಹೊರಬಿದ್ದಿದೆ. ಕೆಐಎಡಿಬಿಯು ಸಂತ್ರಸ್ತರಿಗೆ 2019 ರ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಬೇಕು ಎಂದು ಆದೇಶ ನೀಡಿದೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ
ಮಂಗಳೂರು/ವಿಜಯಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕರಾಗಿದ್ದ ಸವಣೂರು ಗ್ರಾಮದ ಮುಗೇರು ನಿವಾಸಿ ಸಂತೋಷ್ ಕುಮಾರ್ ರೈ (40) ರವರು ಜ.2ರಂದು ಬೆಳಿಗ್ಗೆ ವಿಜಯಪುರದಲ್ಲಿ ಹೃದಯಾಘಾತದಿಂದಾಗಿ ನಿಧನರಾದರು.
ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಕಳೆದ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ 2 ವರ್ಷಗಳಿಂದ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರ ಅಕಾಲಿಕ ಮರಣದಿಂದ ಕುಟುಂಬ ವರ್ಗದವರು ದು:ಖತಪ್ತರಾಗಿದ್ದಾರೆ.
ಮಂಗಳೂರು : ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ವಿಚಾರಣೆ ಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚನೆ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕಾಪು ಕಳತ್ತೂರಿನ ಕೆ. ಉಮ್ಮರಬ್ಬ ಮ್ಯೊದೀನ್(63) ಬಂಧಿತ ಆರೋಪಿ. ಈತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಪ್ರಕರಣ ದಾಖಲಾಗಿತ್ತು.