Connect with us

    chikkamagaluru

    ಮುಳ್ಳಯ್ಯನಗಿರಿಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು..!

    Published

    on

    ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸುಮಾರು 250 ಅಡಿ ಆಳದ ಪ್ರಪಾತಕ್ಕೆ ಕಾರು ಉರುಳಿ ಬಿದ್ದಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನಲ್ಲಿ ಹೈದರಾಬಾದ್ ಮೂಲದ ಐವರು ಪ್ರವಾಸಿಗರು ಮುಳ್ಳಯ್ಯನಗಿರಿ ವೀಕ್ಷಣೆಗೆ ಬಂದಿದ್ದರು. ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪ್ರಪಾತಕ್ಕೆ ಉರುಳಿ ಬಿದ್ದಿದೆ. ತಕ್ಷಣ ಘಟನೆ ವೀಕ್ಷಿಸಿದ ಕೆಲವರು ಪ್ರಪಾತಕ್ಕೆ ಬಿದ್ದಿದ್ದ ಪ್ರವಾಸಿಗರನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಗಾಯಾಳುಗಳನ್ನು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ವ್ಯಾಪ್ತಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    chikkamagaluru

    ಗೈರು ಹಾಜರಾದ ವಿದ್ಯಾರ್ಥಿಗಳಿಂದ ಹಣ ವಸೂಲಿ ಸಂಚು; ತಾವು ಬೀಸಿದ ಬಲೆಗೆ ತಾವೇ ಸಿಕ್ಕಿಬಿದ್ದ ಆರೋಪಿಗಳು

    Published

    on

    ಮಂಗಳೂರು/ಚಿಕ್ಕಮಗಳೂರು: ಅನಿವಾರ್ಯ ಕಾರಣಗಳಿಂದ ಕಾಲೇಜಿಗೆ ವಿದ್ಯಾರ್ಥಿಗಳು ಗೈರು ಹಾಜರಾಗುವುದು ಸಹಜ. ಹಾಗೆ ಬಾರದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಬೇಕೆಂದಿದ್ದರೆ, ಹಣ ನೀಡುವಂತೆ ಆದೇಶಿಸಿದ್ದ ಬೀರೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


    ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಟಿ.ಹರೀಶ್‌ ಮುಖಾಂತರ ಹಣದ ಬೇಡಿಕೆಯನ್ನಿಟ್ಟಿದ್ದ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ.
    ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಫೋನ್‌ ಪೇ ಮೂಲಕ 10 ಸಾವಿರ ಹಾಗೂ ಪ್ರಾಂಶುಪಾಲ ಎಂ.ಕೆ.ಪ್ರವೀಣ್ ಕುಮಾರ್‌ 5 ಸಾವಿರ ರೂ. ಕಸಿದುಕೊಂಡಿರುವುದಾಗಿ ಪ್ರಕರಣ ದಾಖಲಾಗಿದೆ.
    ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ತಿರುಮಲೇಶ್, ಬಿ.ಮಲ್ಲಿಕಾರ್ಜುನ್‌, ಅನಿಲ್ ರಾಥೋಡ್ ಇತರರು ಪಾಲ್ಗೊಂಡಿದ್ದರು.

    Continue Reading

    chikkamagaluru

    ಚಿಕ್ಕಮಗಳೂರು ಹೋಮ್‌ಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟೀಸ್..!

    Published

    on

    ಚಿಕ್ಕಮಗಳೂರು/ಮಂಗಳೂರು: ಅಂಕೋಲಾದ ಶಿರೂರು, ಶಿರಾಡಿ ಘಾಟ್‌ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್​​ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್​ಗಳನ್ನು ಪತ್ತೆ ಹಚ್ಚಲು ಮುಂದಾಗಿದೆ.

    ಚಿಕ್ಕಮಗಳೂರು ಅರಣ್ಯ ವಲಯ  ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್​ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್​ ಮಾಲಿಕರು ತಮ್ಮ ಹೋಂಸ್ಟೇಗೆ ಸಂಬಂಧಿಸಿದ ಕಂದಾಯ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಡಿಎಫ್​ಒ ರಮೇಶ್ ಬಾಬು ಅವರು ನೋಟಿಸ್ ಹೊರಡಿಸಿದ್ದಾರೆ.

    ಗಡಿನಾಡು ಹೊಸೂರಿನಲ್ಲಿ ಗಣೇಶನಿಗೆ ಹೈಕೋರ್ಟ್​ ಮಂಟಪ, ಗಣಪನೇ ಜಡ್ಜ್

    ಎಚ್ಚೆತ್ತ ಅರಣ್ಯ ಇಲಾಖೆ:
    ಸಾಲು ಸಾಲು ದುರ್ಘಟನೆ ಬಳಿಕ ಎಚ್ಚತ್ತ ಅರಣ್ಯ ಇಲಾಖೆ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಹೋಂಸ್ಟೇ ಅಥವಾ ರೆಸಾರ್ಟ್​​​ಗಳ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿತ್ತು. ವರದಿ ಸಲ್ಲಿಕೆಯಾದ ಬಳಿಕ ಅರಣ್ಯ ಇಲಾಖೆ 2015ರ ನಂತರ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ​​ಅಥವಾ ಹೋಂಸ್ಟೇ, ತೋಟ, ಬಡವಾಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡುವಂತೆ ಸೂಚನೆ ನೀಡಿತ್ತು.

    ಇದೀಗ, ಅನಧಿಕೃತವಾಗಿ ನಡೆಯುತ್ತಿರುವ ರೆಸಾರ್ಟ್​ ಅಥವಾ ಹೋಂಸ್ಟೇಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಚಿಕ್ಕಮಗಳೂರು ಅರಣ್ಯ ವಲಯದಲ್ಲಿ ನಿರ್ಮಾಣ ಮಾಡಿರುವ ಎಲ್ಲ ಹೋಂಸ್ಟೇ ಮಾಲಿಕರು ಕಂದಾಯ ದಾಖಲಾತಿಗಳನ್ನು ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.

    Continue Reading

    chikkamagaluru

    ಗನ್ ಒರೆಸುತ್ತಿದ್ದ ವೇಳೆ ಮಿಸ್‌ ಫಯರ್; ವ್ಯಕ್ತಿ ಸಾ*ವು

    Published

    on

    ಚಿಕಮಗಳೂರು: ಮನೆಯಲ್ಲಿದ್ದ ಗನ್ ಒರೆಸುತ್ತಿದ್ದ ವೇಳೆ ಮಿಸ್‌ ಫಯರ್‌ ಆಗಿ ವ್ಯಕ್ತಿಯೊಬ್ಬ ಸಾವನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳವಾಸ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಕಳವಾಸೆ ಗ್ರಾಮದ ಅರುಣ್ (47 ವ) ಎಂದು ಹೇಳಲಾಗಿದೆ.

    ಅರುಣ್ ಎಂಬವರು ತನ್ನ ಮನೆಯ ಶೆಡ್‌ ನಲ್ಲಿದ್ದ ಗನ್‌ನನ್ನು ಶುಚಿಗೊಳಿಸುತ್ತಿದ್ದ ವೇಳೆ ಏಕಾಏಕಿ ಗುಂಡು ಹಾರಿ ಅರುಣ್‌ರವರ ಬಲಕಣ್ಣನ್ನು ಹೊಕ್ಕಿದೆ. ಘಟನೆಯಿಂದ ಗಂಭೀರ ಗಾಯಗೊಂಡ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಈ ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಇದು ಆತ್ಮಹತ್ಯೆಯೋ ಅಥವಾ ಮಿಸ್ ಫಯರ್‌ ಆಗಿ ಗುಂಡು ತಗುಳಿದೆಯೋ ಅನ್ನೋದು ತನಿಖೆ ವೇಳೆ ಬಯಲಿಗೆ ಬರಬೇಕಿದೆ.

    ನಟಿಗೆ ಲೈಂಗಿಕ ಕಿರುಕುಳ ಆರೋಪ; ಮಲಯಾಳಂ ನಿರ್ದೇಶಕ ರಂಜಿತ್‌ ವಿರುದ್ದ ಎಫ್‌ಐಆರ್..!

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending