Connect with us

LATEST NEWS

ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ; 3 ಬೋಗಿಗಳು ಅ*ಗ್ನಿಗಾಹುತಿ

Published

on

ಮಂಗಳೂರು/ವಿಶಾಖಪಟ್ಟಣಂ : ಆಂಧ್ರ ಪ್ರದೇಶದ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ತಿರುಮಲ ಎಕ್ಸ್‌ಪ್ರೆಸ್‌ ರೈಲಿನ ಮೂರು ಬೋಗಿಗಳಲ್ಲಿ ಬೆಂ*ಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಇಂದು(ಆ.4) ಮುಂಜಾನೆ 10 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಅದೃಷ್ಟವಶಾತ್, ಈ ಸಮಯದಲ್ಲಿ ಯಾವುದೇ ಪ್ರಯಾಣಿಕರು ಬೋಗಿಯಲ್ಲಿ ಇರಲಿಲ್ಲ.

ವಿಶಾಖಪಟ್ಟಣಂನಿಂದ ತಿರುಪತಿಗೆ ಈ ರೈಲು ಪ್ರಯಾಣಿಸಲು ರೆಡಿಯಾಗಿದ್ದು, ಪ್ರಯಾಣಿಕರನ್ನು ಹತ್ತಿಸುವ ಮೊದಲು ನಿರ್ವಹಣಾ ಡಿಪೋಗೆ ಹೋಗಲು ಸಿದ್ಧವಾಗಿತ್ತು. ಈ ವೇಳೆ ಫ್ಲಾಟ್‌ಫಾರಂ ನಲ್ಲಿದ್ದ ಸಿಬಂದಿಯೊಬ್ಬರು ಕೋಚ್ ಒಳಗಡೆಯಿಂದ ಹೊಗೆ ಬರುವುದನ್ನು ಗಮನಿಸಿದ್ದಾರೆ. ತಕ್ಷಣ ರೈಲ್ವೇ ಅಗ್ನಿಶಾಮಕ ಸಿಬಂದಿಗೆ ಮಾಹಿತಿ ನೀಡಿ ಬೆಂ*ಕಿ ನಂದಿಸುವ ಕಾರ್ಯ ನಡೆಸಲಾಗಿದೆ.

ಇದನ್ನೂ ಓದಿ : ಭೂಕು*ಸಿತದಿಂದ ಕಂಗೆಟ್ಟ ವಯನಾಡು; ನೋವಿನ ನಡುವೆ ಸಂತ್ರಸ್ಥರಿಗೆ ಕಳ್ಳರ ಕಾಟ

ಈ ವೇಳೆಗೆ ರೈಲಿನ ಮೂರು ಎಸಿ ಬೋಗಿಗಳು ಬೆಂ*ಕಿಗೆ ಆಹುತಿಯಾಗಿವೆ. ಅ*ಗ್ನಿ ಅವ*ಘಡಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ವಿಧಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

LATEST NEWS

ನೀರಸ ಪ್ರದರ್ಶನ ಮುಂದುವರಿಸಿದ ಭಾರತ: ವಿವದಾತ್ಮಕ ತೀರ್ಪಿಗೆ ರಾಹುಲ್ ಬಲಿ !

Published

on

ಮಂಗಳೂರು/ಆಸ್ಟ್ರೇಲಿಯಾ: ಪರ್ತ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ನಲ್ಲಿ ಪ್ರವಾಸಿ ಭಾರತ ತಂಡ ತನ್ನ ಬ್ಯಾಟಿಂಗ್ ವೈಫಲ್ಯ ಮುಂದುವರಿಸಿದೆ.


ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಕೆ ಎಲ್ ರಾಹುಲ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ ಸ್ವಲ್ಪ ಹೊತ್ತು ಕ್ರೀಸ್ ನಲ್ಲಿ ನಿಂತಿದ್ದು ಬಿಟ್ಟರೆ, ಉಳಿದವರಿಂದ ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ನೀಡಿದ್ದ ಅದೇ ನೀರಸ ಪ್ರದರ್ಶನ ಮುಂದುವರಿಯಿತು.
ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ಜೊತೆಯಾಟ ಮುಂದುವರಿಸಲು ಸಾಧ್ಯವಾಗಲಿಲ್ಲ. 5 ರನ್ ಅಷ್ಟೇ ಜೊತೆಯಾಟವಾಡಿದ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್ ರಾಹುಲ್ ಜೋಡಿ, ಜೈಸ್ವಾಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸುವುದರ ಮೂಲಕ ಆರಂಭಿಕ ನಿರಾಸೆ ಮೂಡಿಸಿದರು. ನಂತರ ಬಂದ ದೇವದತ್ ಪಡಿಕ್ಕಲ್, ಜೋಶ್ ಹೇಜಲ್ ವುಡ್ ಮಾರಕ ದಾಳಿಗೆ ಖಾತೆ ತೆರೆಯಲು ಕೂಡ ಸಾಧ್ಯವಾಗದೇ ಪೆವಿಲಿಯನ್ ಗೆ ಮರಳಿದರು.

ಇದನ್ನೂ ಓದಿ:ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!
ಅಪಾರ ನಿರೀಕ್ಷೆಗಳ ಸಾಗರವೇ ಹೊತ್ತು ಬ್ಯಾಟಿಂಗ್ ಗೆ ಇಳಿದಿದ್ದ ವಿರಾಟ್ ಕೊಹ್ಲಿ ಮತ್ತೆ ನಿರಾಸೆ ಮೂಡಿಸಿದ್ದಾರೆ, ಕೇವಲ 5 ರನ್ ಗಳಸಿ ಔಟಾದರು. ನಂತರ ಬಂದ ಪಂತ್ ಆಟ ಲಯಕ್ಕೆ ತಂದರಾದರೂ ಇವರಿಗೆ ಯಾರೂ ಕೂಡ ಜೋಡಿಯಾಗಿ ನಿಲ್ಲಲೇ ಇಲ್ಲ. ಧ್ರುವ್ ಜುರೆಲ್ 11 ರನ್ ಗಳಿಗೆ ಔಟಾದರೆ, ವಾಷಿಂಗ್ಟನ್ ಸುಂದರ್ ಕೂಡ ನಾಲ್ಕು ರನ್ ಗೆ ಸುಸ್ತಾದರು. ಆದರೆ 7 ನೇ ವಿಕೆಟ್ ಗೆ ಪಂತ್‌ ಮತ್ತು ನಿತೀಶ್ 48 ರನ್ ಗಳ ಜೊತೆಯಾಟ ನೀಡಿದರು.
ನಂತರ ಬಂದ ಹರ್ಷಿತ್ ರಾಣಾ 7 ರನ್ ಗಳಿಸಿ ಔಟಾದರು. ಇನ್ನೂ ಬುಮ್ರಾ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶನ ಮುಂದುವರಿಯಿತು.

ಅಂಪೈರ್ ತೀರ್ಪು ವಿರುದ್ದ ರಾಹುಲ್ ಅಸಮಾಧಾನ:

ಮಿಚೆಲ್ ಸ್ಟಾರ್ಕ್ ಎಸೆತವನ್ನು ರಾಹುಲ್ ಹೊಡೆಯಲು ಮುಂದಾದಾಗ, ಅದು ರಾಹುಲ್ ಅವರ ಬ್ಯಾಟ್ ನ ಸಮೀಪ ಹಾದು ಹೋಗಿ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಕ್ಯಾಚ್ ಹಿಡಿದರು. ತಕ್ಷಣವೇ ಫೀಲ್ಡ್ ಅಂಪೈರ್ ಬಳಿ ಮನವಿ ಮಾಡಿದರು. ನಂತರ ಆಸೀಸ್ ತಂಡ ಥರ್ಡ್ ಅಂಪೈರ್ ಮೊರೆ ಹೋದರು. ಇದನ್ನು ಪುರಸ್ಕರಿಸಿದ ಮೂರನೇ ಅಂಪೈರ್ ರಾಹುಲ್ ಔಟ್ ಎಂದು ಘೋಷಿಸಿದರು.
ಸ್ಟಾರ್ಕ್ ಎಸೆದ ಚೆಂಡು ರಾಹುಲ್ ಬ್ಯಾಟ್ ತಾಗಿದೆಯೇ ಅಥವಾ ಪ್ಯಾಡ್ ಗೆ ತಾಗಿದೆಯೇ ಎಂಬುದು ಸ್ಪಷ್ಟವಾಗಿರಲಿಲ್ಲ. ರೀಪ್ಲೇಯಲ್ಲಿ ವಿವಿಧ ಆಯಾಮಗಳಿಂದ ಪರಿಶೀಲಿಸಿದ ನಂತರ, ಸ್ನಿಕ್ಕೋಮೀಟರ್ ಏರಿಳಿತವನ್ನು ಆಧರಿಸಿ ರಾಹುಲ್ ಔಟ್ ಎಂದು ತೀರ್ಪು ನೀಡಲಾಯಿತು. ಇದರಿಂದ ರಾಹುಲ್ ಅಸಮಾಧಾನದಿಂದಲೇ ಹೊರ ನಡೆದರು.

Continue Reading

Baindooru

ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!

Published

on

ಬೆಂಗಳೂರು : ಮಾದಕ ವಸ್ತು ಮಾರಾಟ, ಸಾಗಾಟ ಜಾಲದ ಮೇಲೆ ಕಣ್ಣಿಟ್ಟಿರುವ ಸಿಸಿಬಿ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಮಾ*ದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಹಾಗೂ ಸಿಸಿಬಿ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ  ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಹೊಸ ವರ್ಷಕ್ಕೆ ಗಾಂ*ಜಾ ಸಪ್ಲೈ :
ಹೊಸ ವರ್ಷಾಚರಣೆಯ ಸಲುವಾಗಿ ಕ್ವಿಂಟಾಲ್ ಗಟ್ಟಲೆ ಗಾಂ*ಜಾ ಸಪ್ಲೈ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಪೆಡ್ಲರ್ ಅಚ್ಚು ಹಾಗೂ ಜಮೀರ್, ರೇಷ್ಮಾ ದಂಪತಿ ಬಂಧಿತರು. ಆರೋಪಿಗಳಿಂದ 3.25 ಕೋಟಿ ರೂಪಾಯಿ ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

ಮೂವರು ಆರೋಪಿಗಳು ಒಡಿಶಾ ಮತ್ತು ಆಂಧ್ರದಲ್ಲಿ ಗಾಂ*ಜಾ ಸಂಗ್ರಹಿಸಿದ್ದರು. ಹೊಸ ವರ್ಷಾಚರಣೆ ವೇಳೆ ಬೆಂಗಳೂರು, ಕೇರಳದಲ್ಲಿ ಮಾರಾಟ ಮಾಡಲು ಯೋಜಿಸಿದ್ದರು. ಜಮೀರ್ ಮತ್ತು ರೇಷ್ಮಾ ದಂಪತಿ ಬೆಂಗಳೂರಿನಲ್ಲಿ, ಪೆಡ್ಲರ್ ಅಚ್ಚು ಕೇರಳದಲ್ಲಿ ಗಾಂ*ಜಾ ಮಾರಲು ನಿರ್ಧರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ಬೆಂಗಳೂರು ಮತ್ತು ಕೇರಳಕ್ಕೆ ಸಾಗಿಸಲು ಆರೋಪಿಗಳು ಸೆಲ್ಫ್ ಡ್ರೈವಿಂಗ್ ಕಾರು ಬಾಡಿಗೆಗೆ ಪಡೆದಿದ್ದರು. ಬಳಿಕ ಬೆಡ್ ಶೀಟ್ ನಲ್ಲಿ ಗಾಂಜಾ ತುಂಬಿ ಕಾರಿನಲ್ಲಿ ಬೆಂಗಳೂರಿಗೆ ತರುತ್ತಿದ್ದರು . ಗಾಂಜಾ ತರುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಠಾಣೆ ಪೊಲೀಸರು ಹೆಚ್ ಬಿ ಆರ್ ಲೇಔಟ್ ಬಳಿ ಕಾರನ್ನು ಅಡ್ಡ ಹಾಕಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುವಾಗ ಕಾರಿನಲ್ಲಿ 3 ಕೋಟಿ ರೂ. ಮೌಲ್ಯದ ಗಾಂ*ಜಾ ಪತ್ತೆಯಾಗಿದೆ. ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಅಚ್ಚು ಕೇರಳ ಪೊಲೀಸರಿಗೆ ಬೇಕಾದ ಮೋಸ್ಟ್ ವಾಂಟೆಡ್  ಆರೋಪಿ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದ್ದು, ಆತನ ವಿರುದ್ಧ ಕೇರಳದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಸ್ ಅರೆಸ್ಟ್ :

ಬೆಂಗಳೂರಿನಲ್ಲಿ ವಿದೇಶಿ ಡ್ರ*ಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾ*ಳಿ ನಡೆಸಿದ ಸಿಸಿಬಿ ಅಧಿಕಾರಿಗಳು,  1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಏನಾಶ್ಚರ್ಯ ? ಈ ಡಯಟ್​ನಿಂದ ಪತ್ನಿಯ 4ನೇ ಸ್ಟೇಜ್ ಸ್ತನ ಕ್ಯಾನ್ಸರ್ ಮಾಯ !!
ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರ*ಗ್ಸ್ ತರಿಸುತ್ತಿದ್ದರು. ಹೊಸ ವರ್ಷಾಚರಣೆಯಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ, ಈ ವಿದೇಶಿ ಪೆಡ್ಲರ್ ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರು ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ.

Continue Reading

Baindooru

ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!

Published

on

ಫ್ರಿಜ್ಜಿನ್ನಲ್ಲಿರಿಸಿದ ಅಹಾರಗಳು ತಾಜಾತನವನ್ನು ಉಳಿಸಿಕೊಳ್ಳಲು ಕಾರಣವೆಂದರೆ ಶೀತಲೀಕರಣ. ಆದರೆ, ಈ ಪರಿ ಎಲ್ಲಾ ಬಗೆಯ ಅಹಾರಗಳಿಗೆ ಅನ್ವಯಿಸಲಾರದು. ಕೆಲವು ಫಲಗಳಂತೂ ಫ್ರಿಜ್ಜಿನಲ್ಲಿಟ್ಟರೇ ಸಾಕು, ಚೆನ್ನಾಗಿರುವ ಬದಲು ಹಾಳಾಗಲು ತೊಡಗುತ್ತವೆ. ಇಂದಿನ ಲೇಖನದಲ್ಲಿ ಈ ಗುಣವಿರುವ ಕೆಲವು ಫಲಗಳ ಬಗ್ಗೆ ವಿವರಿಸಲಾಗಿದೆ. ಇವನ್ನು ಫ್ರಿಜ್ಜಿನಲ್ಲಿಡುವ ಬದಲು ತಣ್ಣನೆಯ ಸ್ಥಳದಲ್ಲಿ ಗಾಳಿಯಾಡದಂತೆ ಶೇಖರಿಸಬೇಕು. ಈ ಫಲಗಳು ಯಾವುವು ಎಂಬುದನ್ನು ನೋಡೋಣ.

ಬಾಳೆಹಣ್ಣು

ಬಾಳೆಹಣ್ಣುಗಳನ್ನು ಎಂದಿಗೂ ಫ್ರಿಜ್ಜಿನಲ್ಲಿ ಸಂಗ್ರಹಿಸಬಾರದು. ಏಕೆಂದರೆ ಬಾಳೆಹಣ್ಣಿನ ತಾಪಮಾನ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಾದರೆ, ಇದರ ಸಿಪ್ಪೆ ಶೀಘ್ರವೇ ಕಪ್ಪಾಗುತ್ತದೆ ಹಾಗೂ ಸಿಪ್ಪೆಯ ಅಡಿಯಲ್ಲಿನ ತಿರುಳು ಕೂಡಾ ಕೊಳೆಯಲು ತೊಡಗುತ್ತದೆ.

 

ಕಲ್ಲಂಗಡಿ

ಬೇಸಿಗೆಯಲ್ಲಿ ಜನರು ಅತಿ ಹೆಚ್ಚಾಗಿ ಇಷ್ಟಪಡುವ ಫಲವಾದ ಕಲ್ಲಂಗಡಿಯನ್ನೂ ಫ್ರಿಜ್ಜಿನಲ್ಲಿ ಇರಿಸಬಾರದು. ಆದರೆ, ಸಾಮಾನ್ಯವಾಗಿ ಕಲ್ಲಗಂಡಿ ದೊಡ್ಡ ಗಾತ್ರದಲ್ಲಿದ್ದು ಇದನ್ನು ಕತ್ತರಿಸಿದಾಗ ದೊರಕುವ ಆಗಾಧ ಪ್ರಮಾಣವನ್ನು ಫ್ರಿಜ್ಜಿನಲ್ಲಿ ಸಂಗ್ರಹಿಸದೇ ಬೇರೆ ಮಾರ್ಗವಿಲ್ಲ. ಆದರೆ, ನಿಸರ್ಗಕ್ಕೆ ನಿಮ್ಮ ಈ ಅಗತ್ಯತೆಯ ಅರಿವಿಲ್ಲ. ಸೇಬನ್ನು ಕತ್ತರಿಸಿ ಕೊಂಚ ಹೊತ್ತು ಇರಿಸಿದಾಗ ಗಾಳಿಗೆ ತೆರೆದ ಭಾಗ ಕಪ್ಪಗಾಗುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿಯೂ ಹೀಗೇ, ಗಾಳಿಗೆ ಒಡ್ಡಿದ ಭಾಗದ ಆಂಟಿ ಆಕ್ಸಿಡೆಂಟುಗಳು ರಾಸಾಯನಿಕ ಕ್ರಿಯೆಗೆ ಒಳಪಟ್ಟು ಶೀಘ್ರವೇ ಹುಳಿಯಾಗುತ್ತದೆ.

 

ಸೇಬು

ಸೇಬು ಹಣ್ಣುಗಳು 90% ತೇವಾಂಶವನ್ನು ಹೊಂದಿರುವ ಪರಿಸರದಲ್ಲಿ ಹೆಚ್ಚು ಹೊತ್ತು ಕೆಡದೇ ತಾಜಾತನವನ್ನುಉಳಿಸಿಕೊಳ್ಳುತ್ತವೆ. ಆದರೆ ನಮ್ಮ ರೆಫ್ರಿಜರೇಟರ್ ನೈಸರ್ಗಿಕ ಡಿಹೈಡ್ರೇಟರ್ ಅಥವಾ ತೇವಾಂಶ ಇರದ ಸ್ಥಳವಾಗಿದೆ. ಹಾಗಾಗಿ, ಫ್ರಿಜ್ಜಿನಲ್ಲಿಟ್ಟ ಸೇಬು ತೇವಾಂಶದ ಕೊರತೆಗೆ ಒಡ್ಡಿಕೊಳ್ಳುತ್ತವೆ. ಈ ಸ್ಥಿತಿಯಲ್ಲಿ ಸೇಬಿನಲ್ಲಿರುವ ಇಥೈಲೀನ್ ಹಾಗೂ ಇತರ ಕಿಣ್ವಗಳು ತಿರುಳನ್ನು ಅತಿ ಶೀಘ್ರವಾಗಿ ಹಣ್ಣಾಗಿಸುತ್ತವೆ ಹಾಗೂ ಕೊಳೆಯಲು ಪ್ರಾರಂಭಿಸುತ್ತದೆ.

ಮಾವಿನ ಹಣ್ಣು

ಮಾವಿನ ಹಣ್ಣನ್ನು ಫ್ರಿಜ್ಜಿನಲ್ಲಿ ಇರಿಸಿದರೆ ಇದರಲ್ಲಿರುವ ಆಂಟಿ ಆಕ್ಸಿಡೆಂಟುಗಳ ಪ್ರಮಾಣ ತಗ್ಗತೊಡಗುತ್ತದೆ. ಹಾಗಾಗಿ ಮಾವಿನ ಹಣ್ಣಿನ ಪೌಷ್ಟಿಕ ಮೌಲ್ಯಗಳು ಕಡಿಮೆಯಾಗುತ್ತವೆ. ಈ ಹಣ್ಣುಗಳನ್ನು ಫ್ರಿಜ್ಜಿನಲ್ಲಿರಿಸಿದರೆ ಮಾವಿನ ಹಣ್ಣು ವಿಷಕಾರಿ ಯಾಗ ಬಹುದು. ಬದಲಿಗೆ ಇನ್ನೂ ಕಾಯಿಯಾಗಿರುವ ಮಾವು ಗಳನ್ನು ತಂದು ಬೆಚ್ಚಗಿರುವ ಮತ್ತು ನೆರಳಿನ ಸ್ಥಳದಲ್ಲಿ ಇರಿಸಿ ಒಂದೆರಡು ದಿನಗಳ ಬಳಿಕ ಸ್ವಾಭಾವಿಕವಾಗಿ ಹಣ್ಣಾಗುವಂತೆ ಮಾಡಿ ಸೇವಿಸಿ​.

ಲಿಚ್ಚಿ

ಬೇಸಿಗೆಯಲ್ಲಿ ಸೇವಿಸಲು ರುಚಿಕರವಾದ ಚಿಕ್ಕ ಗೋಲಿಗ ಳಂತಿರುವ ಲಿಚ್ಚಿ ಹಣ್ಣುಗಳನ್ನು ಎಂದಿಗೂ ಫ್ರಿಜ್ಜಿನಲ್ಲಿ ಇರಿಸ ಬಾರದು. ಏಕೆಂದರೆ, ತಂಪಾದ ತಾಪಮಾನದಲ್ಲಿ ಇದರ ತಿರುಳು ಕೊಳೆಯಲು ಆರಂಭಿಸುತ್ತದೆ. ಆದರೆ, ಸಿಪ್ಪೆ ಮಾತ್ರ ಹಾಳಾಗದೇ ಹಾಗೇ ಉಳಿದಿರುತ್ತದೆ. ಫ್ರಿಜ್ಜಿ ನಿಂದ ತೆಗೆದು ನೋಡಿದ ಲಿಚ್ಚಿಯ ಸಿಪ್ಪೆ ಚೆನ್ನಾಗಿರು ವಂತೆಯೇ ಕಂಡುಬಂದರೂ ಒಳಗಿನ ತಿರುಳು ಕೊಳೆತಿರುತ್ತದೆ.

Continue Reading

LATEST NEWS

Trending

Exit mobile version