Connect with us

    LATEST NEWS

    ಪೆಂಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್..! ಮತ್ತೆ ನಾಲ್ವರನ್ನು ಬಂಧಿಸಿದ SIT ಅಧಿಕಾರಿಗಳು..!!

    Published

    on

    ಹಾಸನ/ಮಂಗಳೂರು: ರೇವಣ್ಣ ಪೆಂಡ್ರೈವ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗ್ತಾ ಇದ್ದು, ಇದೀಗ ಮಹಿಳೆ ಅಪಹರಣಕ್ಕೆ ಸಂಬಂಧಿಸಿ ರೇವಣ್ಣ ಬಂಧನದ ಬಳಿಕ ನಾಲ್ವರನ್ನು ಎಸ್‌ಐಟಿ ತಂಡ ಬಂಧಿಸಿದ್ದಾರೆ. ಹಾಸನ ಆಶ್ಲೀಲ ವೀಡಿಯೋಗೆ ಸಂಬಂಧಪಟ್ಟ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣನನ್ನು ಬಂಧಿಸಲಾಗಿತ್ತು. ಇದೀಗ ಕಿಡ್ನಾಪ್ ಸಹಕರಿಸಿದ್ದಾರೆ ಎಂಬ ಆರೋಪದಡಿಯಲ್ಲಿ ನಾಲ್ವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

    arrest

    ಯುವ ಜನತಾದಳ‌ ಮಾಜಿ ಅಧ್ಯಕ್ಷ ಹೆಚ್.ಕೆ.ಸುಜಯ್, ಕಪ್ಪಡಿ‌ ಗ್ರಾಮದ ಮಧು, ಹೆಬ್ಬಾಳು ಗ್ರಾಮ ಪಂಚಾಯತ್ ಸದಸ್ಯ ಮನು, ವಕೀಲ‌ ತಿಮ್ಮಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ಗೆ ಸಹಕರಿಸಿದ ಆರೋಪ ಇದೆ.

    ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಿಮ್ಮಪ್ಪ ರೇವಣ್ಣ ಪರ ಬ್ಯಾಟ್ ಬೀಸಿದ್ದು ಪೊಲೀಸರು ವಿರುದ್ಧ ಆರೋಪ ಮಾಡಿದ್ದರು. ಶಾಸಕರ ಕುಮ್ಮಕ್ಕಿನಿಂದ ರೇವಣ್ಣನ ಬಂಧನ ಮಾಡಲಾಗಿದೆ ಎಂದು ಆರೋಪ ಮಾಡಿದ್ದರು.  ಸುದ್ದಿಗೋಷ್ಠಿ ಮುಗಿಯುತ್ತಿದ್ದಂತೆ ನಾಲ್ವರನ್ನು ಎಸ್​ಐಟಿ ತಂಡ ಬಂಧಿಸಿದೆ. ನಾಲ್ವರು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮುಲ್ಕಿ : ಪ್ರೀತಿಸಿದ ಹುಡುಗಿ ಆತ್ಮಹ*ತ್ಯೆ ಬೆನ್ನಲ್ಲೇ ರೈಲಿಗೆ ತಲೆಕೊಟ್ಟು ಇಹಲೋಕ ತ್ಯಜಿಸಿದ ಯುವಕ!

    Published

    on

    ಮುಲ್ಕಿ : ಅತಿಕಾರಿಬೆಟ್ಟು ಮೈಲೊಟ್ಟು ರೈಲ್ವೇ ಗೇಟ್ ಬಳಿ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ (೨೦) ಅತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

    ಪ್ರೀತಿ…ಮದುವೆಗೆ ನಿರಾಕರಣೆ :

    ಮೃತ ಕಾರ್ತಿಕ್ ಪೂಜಾರಿ ತನ್ನ ತಾಯಿ ಅಜ್ಜಿ ಜೊತೆ ಮೈಲೊಟ್ಟಿನಲ್ಲಿ ನೆಲೆಸಿದ್ದು, ಕಳೆದ ಕೆಲವು ತಿಂಗಳ ಹಿಂದೆ ಚಿತ್ರದುರ್ಗದಲ್ಲಿ ಸಂಬಂಧಿಕರ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸಕ್ಕೆ ಸೇರಿದ್ದನು. ಈ ನಡುವೆ ಕಾಲೇಜಿನಲ್ಲಿರುವಾಗ ಕಾರ್ತಿಕ್ ಪೂಜಾರಿ ಸಹಪಾಠಿ ಶರಣ್ಯ ಎಂಬಳನ್ನು ಪ್ರೀತಿಸುತ್ತಿದ್ದ. ಇಬ್ಬರು ಅಪ್ರಾಪ್ತರಾದ ಕಾರಣ ಮದುವೆಗೆ ಅನುಮತಿ ಸಿಕ್ಕಿಲ್ಲ. ಪ್ರಾಪ್ತರಾದ ಬಳಿಕ ಮದುವೆ ಮಾಡುವ ಬಾಂಡ್ ಪೇಪರ್ ಮೂಲಕ ಸಮ್ಮತಿ ದೊರೆತಿತ್ತು ಎನ್ನಲಾಗಿದೆ.
    ಈ ನಡುವೆ ಶರಣ್ಯ ಮಾನಸಿಕ ಖಿನ್ನತೆಗೆ ಒಳಗಾಗಿ ಮೂಡುಬಿದ್ರೆಯ ತನ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಳು. ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಇದನ್ನೂ ಓದಿ : ಠಾಣೆಗೆ ನುಗ್ಗಿ ಉದ್ಧಟತನದ ವರ್ತನೆ..! ಹರೀಶ್ ಪೂಂಜಾ ಮೇಲೆ ಕೇಸ್‌..!

    ನೊಂದು ರೈಲಿಗೆ ತಲೆಕೊಟ್ಟ ಯುವಕ :

    ಪ್ರೀತಿಸಿದ ಹುಡುಗಿ ಆತ್ಮಹ*ತ್ಯೆ ಮಾಡಿಕೊಂಡಿದ್ದೇ ತಡ, ಚಿತ್ರದುರ್ಗದಲ್ಲಿದ್ದ ಕಾರ್ತಿಕ್ ಪೂಜಾರಿ ಏಕಾಏಕಿ ಶನಿವಾರ ಸಂಜೆ ಮನೆಗೆ ಬಂದಿದ್ದಾನೆ. ತಾಯಿ ಕೇರಳಕ್ಕೆ ಹೋಗಿ ಭಾನುವಾರ ಬೆಳಗ್ಗೆ ಬರುವಷ್ಟರಲ್ಲಿ ಕಾರ್ತಿಕ್ ತನ್ನ ಮನೆಯ ಅಣತಿ ದೂರದಲ್ಲಿರುವ ರೈಲ್ವೇ ಹಳಿಯಲ್ಲಿ ಮಂಗಳೂರಿನಿಂದ ಮುರ್ಡೇಶ್ವರ ರೈಲಿನಡಿಗೆ ಬಿದ್ದು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾಧರ್ ಭೇಟಿ ನೀಡಿ ಪರಿಶೀಲಿಸಿದ್ದು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾ*ವು

    Published

    on

    ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತ ಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಶಿರೂರಿನಲ್ಲಿ ಈ ಘಟನೆ ನಡೆದಿದ್ದು, ಇರ್ಷಾದ್(56ವ) ಮೃ*ತಪಟ್ಟವರು. ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ.

    ಶನಿವಾರ(ಮೇ.18) ರಾತ್ರಿ ಸುರಿದ ಬಿರುಗಾಳಿ ಮಳೆಗೆ ವಿದ್ಯುತ್ ತಂತಿ ತುಂಡಾಗಿ ನೆಲದ ಮೇಲೆ ಬಿದ್ದಿತ್ತು. ಇದನ್ನು ಗಮನಿಸದ ಇರ್ಷಾದ್ ಅವರು ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಕಾರಣ ತಕ್ಷಣ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮೆಸ್ಕಾಂ ಸಿಬ್ಬಂದಿ ತುಂಡಾದ ತಂತಿಯನ್ನು ಸರಿ ಪಡಿಸಿದ್ದಾರೆ. ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.

    Read More..; ಠಾಣೆಗೆ ನುಗ್ಗಿ ಉದ್ಧಟತನದ ವರ್ತನೆ..! ಹರೀಶ್ ಪೂಂಜಾ ಮೇಲೆ ಕೇಸ್‌..!

    Continue Reading

    BELTHANGADY

    ಠಾಣೆಗೆ ನುಗ್ಗಿ ಉದ್ಧಟತನದ ವರ್ತನೆ..! ಹರೀಶ್ ಪೂಂಜಾ ಮೇಲೆ ಕೇಸ್‌..!

    Published

    on

    ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಜೊತೆಯಲ್ಲಿ ಉದ್ಧಟತನದಿಂದ ವರ್ತಿಸಿದ್ದ ಶಾಸಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಬೆಳ್ತಂಗಡಿಯ ಮೇಲಂತಬೆಟ್ಟು ಎಂಬಲ್ಲಿ ಅಕ್ರಮ ಗಣಿಗಾರಿಕೆಗೆ ಪೊಲೀಸರ ಸಹಕಾರ ಪಡೆದು ತಹಶೀಲ್ದಾರ್ ದಾಳಿ ನಡೆಸಿದ್ದರು. ಈ ವೇಳೆ ಅದು ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಗೌಡ ಎಂಬವರಿಗೆ ಸೇರಿದ್ದಾಗಿ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದು ತಂದಿದ್ದರು. ಈ ವಿಚಾರ ತಿಳಿದು ಠಾಣೆಗೆ ಆಗಮಿಸಿದ್ದ ಶಾಸಕ ಹರೀಶ್ ಪೂಂಜಾ ಠಾಣೆಯಲ್ಲಿ ಪೊಲೀಸರ ಜೊತೆಯಲ್ಲಿ ಅನುಚಿತವಾಗಿ ವರ್ತಿಸಿ ಬೆದರಿಕೆ ಕೂಡಾ ಹಾಕಿದ್ದರು.

    ಶಾಸಕ ಹರೀಶ್ ಪೂಂಜಾ ನಡವಳಿಕೆಯ ಬಗ್ಗೆ ವ್ಯಾಪಕ ಟೀಕೆ ಕೂಡಾ ವ್ಯಕ್ತವಾಗಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಲಾಗಿತ್ತು. ಇದೀಗ ಹಿರಿಯ ಅಧಿಕಾರಿಗಳ ಸೂಚನೆಯಂತೆ ಶಾಸಕ ಹರೀಶ್ ಪೂಂಜಾ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. IPC 353 ,504 ಅಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    Trending