Wednesday, December 1, 2021

ಮುಕೇಶ್​ ಅಂಬಾನಿ ಮನೆ ಬಳಿ ಸ್ಫೋಟಕ ಸಾಮಾಗ್ರಿ ತುಂಬಿದ ಕಾರು ಪತ್ತೆ..!

ಮುಕೇಶ್​ ಅಂಬಾನಿ ಮನೆ ಬಳಿ ಸ್ಫೋಟಕ ಸಾಮಾಗ್ರಿ ತುಂಬಿದ ಕಾರು ಪತ್ತೆ..!

ಮುಂಬೈ : ಭಾರತದ ಖ್ಯಾತ ಉದ್ಯಮಿ ಮುಕೇಶ್​ ಅಂಬಾನಿಯವರ ಮುಂಬೈ ನಿವಾಸದ ಬಳಿ ಸ್ಫೋಟಕ ವಸ್ತುಗಳು ತುಂಬಿರುವ ವಾಹನ ಒಂದು ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.


ಮುಂಬೈ ನಗರದ ಪೊಡ್ಡಾರ್ ರಸ್ತೆಯಲ್ಲಿರುವ ನಿವಾಸದ ಬಳಿ ಮಹೀಂದ್ರಾ ಸ್ಕಾರ್ಪಿಯೋ ಗಾಡಿ ಒಂದು ಸಾಕಷ್ಟು ಸಮಯದಿಂದ ನಿಂತಿದ್ದನ್ನು ಅಂಬಾನಿಯವರ ಭದ್ರತಾ ಸಿಬ್ಬಂದಿ ನೋಡಿದ್ದಾರೆ.
ತಕ್ಷಣ ಸಿಬಂದಿ ಆ ಮಾಹಿತಿಯನ್ನು ಮುಂಬೈ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಂಬ್​ ನಿಗ್ರಹ ದಳಕ್ಕೂ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
ಕಾರಿನ ಒಳಗೆ ಪರಿಶೀಲನೆ ನಡೆಸಿದಾಗ ಅದರಲ್ಲಿ 20 ಜೆಲಾಟಿನ್ ಕಡ್ಡಿಗಳು ಕಾಣಿಸಿವೆ. ಇವುಗಳನ್ನು ಸ್ಫೋಟಕ ತಯಾರು ಮಾಡಲು ಬಳಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಶ್ವಾನಪಡೆಯೂ ಬಂದಿದ್ದು ಪರಿಶೀಲನೆ ನಡೆಸಿದ್ದು ತನಿಖೆ ಮದುವರೆದಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...