Connect with us

    LATEST NEWS

    ರಾಗಿಗುಡ್ಡದಲ್ಲಿ ಬೀಸಿತು ಭಾವೈಕ್ಯತೆ ಅಲೆ; ಅನ್ಯಕೋಮಿನವರಿಂದ ಗಣಪಗೆ ಹೂವಿನ ಹಾರ

    Published

    on

    ಮಂಗಳೂರು/ಶಿವಮೊಗ್ಗ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ವಾತಾವರಣ ಪ್ರಕ್ಷ್ಯಬ್ಧಗೊಂಡಿದೆ. ಬುಧವಾರ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕೋಮುಗಲಭೆ ಸಂಭವಿಸಿತ್ತು. ಈ ನಡುವೆ ಶಿವಮೊಗ್ಗದಲ್ಲಿ ಅನ್ಯಕೋಮಿನರು ಒಂದಾಗಿ ಗಣೇಶ ವಿಸರ್ಜಣೆ ಮೆರವಣಿಗೆ ನಡೆಸಿದರು. ಕಳೆದ ವರ್ಷ ಈದ್ ಮಿಲಾದ್ ಸಮಯದಲ್ಲಿ ಕೋಮುಗಲಭೆಗೆ ಸಾಕ್ಷಿಯಾಗಿದ್ದ ರಾಗಿಗುಡ್ಡದಲ್ಲಿ ಈಗ ಭಾವೈಕ್ಯತೆಯ ಅಲೆ ಬೀಸಿದೆ. ಗುರುವಾರ(ಸೆ.12) ನಡೆದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಇಮಾಮ್ ಬಾಡ ಮಸೀದಿಯವರು ಗಣಪನಿಗೆ ಹೂವಿನ ಹಾರ ಹಾಕಿ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ‌. ಇದರಿಂದ ಗಣಪತಿ ವಿಸರ್ಜನಾ ಮಂಡಳಿಯ ಯುವಕರಿಗೆ ಸಂತೋಷವಾಗಿದೆ. ಈ ಬಾರಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾಗಿಯಾಗುವುದಾಗಿ ನೂರುಲ್ಲಾರಿಗೆ ಹಿಂದೂ ಯುವಕರು ಆಶ್ವಾಸನೆ ನೀಡಿದ್ದಾರೆ.
    ಮತ್ತೊಂದು ಕಡೆ ಮುರಾದ್ ನಗರದಲ್ಲಿರುವ ಅಹಮದ್ ಕಾಲೋನಿಯ ಸೆಕೆಂಡ್ ಕ್ರಾಸ್​ನಲ್ಲಿ ಸ್ನೇಹಜ್ಯೋತಿ ಗೆಳೆಯರ ಬಳಗದವರು ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರು. ಗುರುವಾರ(ಸೆ.12) ನಡೆದ ಗಣಪತಿ ವಿಸರ್ಜನೆ ಮೆರವಣಿಗೆ ಅಹಮದ್ ಕಾಲೋನಿಯ ಸೆಕೆಂಡ್ ಕ್ರಾಸ್​​ನಿಂದ ಕೆಜಿಎನ್ ಸರ್ಕಲ್, ಸಂದೇಶ್ ಮೋಟಾರ್ ಮೂಲಕ ಇಮಾಬಾಡ ಮಸೀದಿ ರಸ್ತೆಯ ಮೂಲಕ ಸೀಗೆಹಟ್ಟಿ ವೃತ್ತ ತಲುಪಿತ್ತು. ಮಸೀದಿ ರಸ್ತೆಗೆ ಮೆರವಣಿಗೆ ಬಂದಾಗ ಮಸೀದಿ ಕಮಿಟಿಯ ನೂರುಲ್ಲಾರ್​​ ಮತ್ತು ಅವರ ಸಹಚರರು ಗಣಪನಿಗೆ ಹೂವಿನ ಹಾರಹಾಕಿ ನಮಸ್ಕರಿಸಿ ಸೌಹಾರ್ದತೆಗೆ ಸಾಕ್ಷಿಯಾದರು. ಈ ಹಿಂದೆ ಎರಡು ಬಾರಿ ಇಮಾಮ್ ಬಾಡ ಮಸೀದಿ ರಸ್ತೆಗೆ ಮೆರವಣಿಗೆ ಬಂದಾಗ ಮಾತಿನ ಚಕಮಕಿ ನಡೆದಿತ್ತು. ಆದರೆ, ಈ ಬಾರಿ ಭಾವೈಕ್ಯತೆಯಿಂದ ಗಣಪತಿಯನ್ನು ವಿಸರ್ಜಿಸಲಾಗಿದೆ.

    ಗಲಭೆಗೆ ಸಾಕ್ಷಿಯಾಗುತ್ತಿದ್ದ ಸ್ಥಳ :
    ಕಳೆದ ವರ್ಷ ಈದ್ ಮಿಲಾದ್ ಹಬ್ಬದಾಚರಣೆ ವೇಳೆ ರಾಗಿಗುಡ್ಡದಲ್ಲಿ ಪ್ರಚೋದನಾಕಾರಿ ಫ್ಲೇಕ್ಸ್ ಮತ್ತು ಕಟೌಟ್ ವಿವಾದ ಶುರುಗಾಗಿತ್ತು. ಬಳಿಕ ಎರಡು ಕೋಮಿನ ನಡುವೆ ಹಿಂ*ಸಾರೂಪ ಪಡೆದುಕೊಂಡಿತ್ತು. 15 ದಿನಗಳ ಕಾಲ 144 ಸೆಕ್ಷನ್ ಜಾರಿ ಕೂಡ ಮಾಡಲಾಗಿತ್ತು. ಎಲ್ಲೆಂದರಲ್ಲಿ ಕಲ್ಲು ತೂರಾಟ, ಲಾಠಿ ಚಾರ್ಜ್, ಮನೆ ಮೇಲೆ ಕಲ್ಲುತೂರಾಟ ಸೇರಿದಂತೆ ಅನೇಕ ಹಿಂ*ಸಾಚಾರಗಳು ನಡೆದಿದ್ದವು.

    DAKSHINA KANNADA

    ಕೋಟಿ ಗಾಯತ್ರಿ ಯಾಗ: ಸೆ. 29ರಂದು ಚಿತ್ರಾಪುರ ಮಠದಲ್ಲಿ ಸಂಕಲ್ಪ ದಿನ

    Published

    on

    ಮಂಗಳೂರು : ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ನಡೆಯಲಿರುವ ಕೋಟಿ ಗಾಯತ್ರಿ ಯಾಗದ ಪೂರ್ವಭಾವಿಯಾಗಿ ಸೆ. 29ರ ಭಾನುವಾರ ಮುಂಜಾನೆ ಸಂಕಲ್ಪ ದಿನವನ್ನು ಮಂಗಳೂರಿನ ಚಿತ್ರಾಪುರ ಮಠದಲ್ಲಿ ನಡೆಲು ಉದ್ದೇಶಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಶ್ರೀಧರ ಹೊಳ್ಳ ಹೇಳಿದರು. ಚಿತ್ರಾಪುರ ಮಠದಲ್ಲಿ ನಡೆದ ಬ್ರಾಹ್ಮಣ ಸಮುದಾಯದ ಸಮಸ್ತರ ಸಭೆಯಲ್ಲಿ ಕೋಟಿ ಗಾಯತ್ರಿ ಯಾಗದ ಯಶಸ್ವಿಗಾಗಿ ನಾನಾ ಸಮಿತಿಗಳನ್ನು ರಚನೆಯ ಬಗ್ಗೆ ಚರ್ಚಿಸಿ ನಿರ್ಣಯಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು.

    ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮುದಾಯವು ಈಗಾಗಲೇ ಗಾಯತ್ರಿ ಯಜ್ಞದ ಪೂರ್ವಭಾವಿಯಾಗಿ ಜಪದ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹೊರಭಾಗದಲ್ಲಿರುವ ಜಿಲ್ಲೆಯ ಬ್ರಾಹ್ಮಣರು ಕೂಡಾ ಹೆಸರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಮಂದಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಪ್ರೇರೇಪಿಸುವ ಕೆಲಸವಾಗಬೇಕು ಎಂದರು. ಬ್ರಾಹ್ಮಣ ಸಮಾಜದ ಎಲ್ಲಾ ಬಾಂಧವರು ಒಂದೇ ಸೂರಿನಡಿ ಸೇರಿಸಿ, ಹೊರ ಜಗತ್ತಿಗೆ ಬ್ರಾಹ್ಮಣ ಎಂಬ ಸಂದೇಶ ಮುಟ್ಟಿಸುವಂತಾಗಬೇಕು. ಇದೊಂದು ವಿಶೇಷ ಕಾರ್ಯಕ್ರಮ ಈ ಕಾರ್ಯಕ್ರಮವು ಗಾಯತ್ರಿ ಸಂಗಮವಾಗಿದೆ. ’ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೇಜದ ಬೆಳಕಲಿ’ ಶೀರ್ಷಿಕೆಯಡಿ ಜರಗಲಿದೆ. ಆದುದರಿಂದ ರಚನೆಯಾದ ಸಮಿತಿಯ ಸದಸ್ಯರು ಎಲ್ಲರೂ ಒಂದಾಗಿ ತಮ್ಮ ಮನೆ ಕಾರ್ಯಕ್ರಮ ಎಂಬ ರೀತಿಯಲ್ಲಿ ದುಡಿಯಬೇಕು. ಆ ಮೂಲಕ ಸಮಾಜಕ್ಕೆ ನಮ್ಮ ಒಗ್ಗಟ್ಟನ್ನು ತೋರಿಸಿಕೊಡಬೇಕು ಎಂದು ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಶ್ರೀ ಮಹೇಶ್ ಕಜೆ ಹೇಳಿದರು.

    ನಾನಾ ಸಮಿತಿಗಳ ಜವಾಬ್ದಾರಿ, ಹೋಮದ ರೂಪು ರೇಶೆ, ಹೋಮದ ಉದ್ದೇಶ, ಕಾರ್ಯಯೋಜನೆಯ ಕುರಿತು ಮಾಹಿತಿ ನೀಡಿದ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಸಾಂದರ್ಭಿಕವಾಗಿ ಮಾತನಾಡಿದರು. ಅ. 26ರಂದು ಮಹಿಳೆಯರಿಗಾಗಿ ಮಾತೃ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಮಾತೆಯರು ಈ ಸಂಗಮದಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಈ ವೇದಿಕೆಯೇ ಇಡೀ ಸಮಾಜದ ಮುಖವಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಹಿಂದೆ ಗಾಯತ್ರಿ ಯಾಗ ಮಾಡಿ ಅನುಭವ ಇರುವ ವಿದ್ವಾನ್ ಬಂದಗದ್ದೆ ನಾಗರಾಜ್ ಮಾತನಾಡಿ, ಗಾಯತ್ರಿ ಮಂತ್ರ ಅನುಷ್ಠಾನ ಮಾಡುವುದರಿಂದ ಸಿಗುವ ಲಾಭ, ಮಾನಸಿಕ ವಿಕಸನದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು.

    ವಿದ್ವಾನ್ ಕಟೀಲಿನ ಶ್ರೀಹರಿ ನಾರಾಯಣದಾಸ ಆಸ್ರಣ್ಣ ಮಾತನಾಡಿ, ಎಲ್ಲಾ ವಿಪ್ರ ಸಮಾಜ ಬಾಂಧವರು ಒಟ್ಟು ಸೇರಿ ಈ ಯಜ್ಞ ಕಾರ್ಯದಲ್ಲಿ ಭಾಗಿಗಳಾಗೋಣ, ಪ್ರತಿಯೊಬ್ಬ ಬ್ರಾಹ್ಮಣನು ಸಹ ಕುಟುಂಬ ಸಹಿತ ಪಾಲ್ಗೊಳ್ಳಬೇಕು ಹಾಗೂ ಸೆ.೨೯ರ ಸಂಕಲ್ಪ ಕಾರ್ಯದಲ್ಲಿ ಕನಿಷ್ಠ ೫೦೦ ಜನ ಬಾಂಧವರು ಸೇರಬೇಕು ಎಂದರು. ಬ್ರಾಹ್ಮಣ ಮಹಾಸಭಾ ಸುರತ್ಕಲ್‌ನ ಗೌರವಾಧ್ಯಕ್ಷ ಪಿ. ಪುರುಷೋತ್ತಮ ರಾವ್ ಇದು ನಮ್ಮೆಲ್ಲರ ಕಾರ್ಯಕ್ರಮ ಪ್ರತಿಯೊಬ್ಬರು ತಾನು ಮನ ಧನಗಳಿಂದ ಸಾಹಕರಿಸೋಣ ಎಂದರು.

    ವಿವಿಧ ಬ್ರಾಹ್ಮಣ ಸಮಾಜದ ಪ್ರಮುಖರಾದ ಕರ್ಗಿ ಶ್ರೀನಿವಾಸ ಅಚಾರ್, ಶ್ರೀನಿವಾಸ್ ಚಿತ್ರಾಪುರ, ಸುರೇಶ್ ರಾವ್ ಚಿತ್ರಾಪುರ, ಶ್ರೀಕರ ದಾಮ್ಲೆ, ಎಂ.ಟಿ. ಭಟ್, ಉದಯ ಕುಮಾರ್, ಉದಯ ಕುಮಾರ್ ಸುರತ್ಕಲ್, ಕಾತ್ಯಾಯಿನಿ ರಾವ್, ಶೋಭಾ ಚಿತ್ರಾಪುರ, ಸಾವಿತ್ರಿ ಹೆಚ್ ಭಟ್, ಹೊಸಬೆಟ್ಟು, ರಮಾ.ವಿ ರಾವ್, ಯಮುನಾ ಪಿ ರಾವ್, ಎಂ ಸದಾಶಿವ ಕುಳಾಯಿ, ಪ್ರಕಾಶ್ ಕೋಟೆಕಾರ್, ಜಯಪ್ರಕಾಶ್ ಹೆಬ್ಬಾರ್, ಜಯರಾಮ್ ಭಟ್, ಸುಬ್ರಹ್ಮಣ್ಯ ವಿ ಭಟ್, ಗೋಪಾಲಕೃಷ್ಣ ಮಯ್ಯ, ಜ್ಯೋತಿಷಿ ರಂಗ ಐತಾಳ್ ಕದ್ರಿ, ವಿದ್ವಾನ್ ಸತ್ಯಕೃಷ್ಣ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

    Continue Reading

    LATEST NEWS

    ಪೋಕ್ಸೋ ಪ್ರಕರಣ: ಖ್ಯಾತ ಜ್ಯೋತಿಷಿ ಬಂಧನ

    Published

    on

    ಸುಳ್ಯ: ತಾಲೂಕಿನ ಬೆಳ್ಳಾರೆಯ ಪೊಲೀಸರು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿಯೊಬ್ಬನನ್ನು ಬಂಧಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯಲ್ಲಿ ಧಾರ್ಮಿಕ ಉಪನ್ಯಾಸದ ಜೊತೆಗೆ ಜ್ಯೋತಿಷ್ಯ ಶಾಸ್ತ್ರದ ಮೂಲಕ ಫೇಮಸ್ ಆಗಿದ್ದ ನರಸಿಂಹ ಪ್ರಸಾದ್ ಪಾಂಗಣೇಯ ಬಂಧಿತ ಆರೋಪಿ.

    ಕಾಣಿಯೂರಿನ ಬೆಳಂದೂರು ನಿವಾಸಿಯಾಗಿರುವ ಈತನ ಮನೆಗೆ ಮುಂಜಾನೆಯ ವೇಳೆ ದಾಳಿ ಮಾಡಿದ ಪೊಲೀಸರು ಪ್ರಸಾದ್ ಪಾಂಗಣೇಯನನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಬಾಲಕಿಯೊಬ್ಬಳ ಕೌನ್ಸಿಲಿಂಗ್ ವೇಳೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಈ ಬಂಧನ ಆಗಿದೆ ಎಂಬ ಮಾಹಿತಿ ದೊರೆತಿದೆ.

    Continue Reading

    LATEST NEWS

    ಗೌರವಧನ ಸರಿಯಾಗಿ ನೀಡದೇ ಇದ್ದಲ್ಲಿ ಕೆಲಸ ಸ್ಥಗಿತ: ಅಂಗನವಾಡಿ ಕಾರ್ಯಕರ್ತೆಯರಿಂದ ಎಚ್ಚರಿಕೆ

    Published

    on

    ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸಿ ಅಂತ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದಾರೆ.

    ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರೆಯರು ಹಾಗೂ ಸಹಾಯಕಿಯರು ಈ ಪ್ರತಿಭಟನೆ ನಡೆಸಿದ್ದಾರೆ. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

    ಪ್ರಮುಖವಾಗಿ ಗೌರವಧನವನ್ನು ಪ್ರತಿ ತಿಂಗಳ ಸರಿಯಾಗಿ ಪಾವತಿ ಮಾಡಬೇಕು ಹಾಗೂ ಮೊಟ್ಟೆ ವಿತರಣೆಗೆ ತಗಲುವ ಖರ್ಚನ್ನು ಮುಂಚಿತವಾಗಿ ನೀಡಬೇಕು ಮತ್ತು ಮಾರುಕಟ್ಟೆ ದರದಲ್ಲಿ ಏರಿಳಿತಕ್ಕೆ ತಕ್ಕಂತೆ ಮೊಟ್ಟದರವನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

    ನಮ್ಮನ್ನು ದುಡಿಸಿಕೊಳ್ಳೂತ್ತಿರುವ ಸರ್ಕಾರ ನಮಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯನ್ನು ನೀಡದೆ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಸರ್ಕಾರ ಸೂಕ್ತವಾಗಿ ಸ್ಪಂಧಿಸದೇ ಇದ್ದಲ್ಲಿ ಕೆಲಸ ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದ್ದಾರೆ.

    Continue Reading

    LATEST NEWS

    Trending