Connect with us

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    FILM

    ನಟಿಗೆ ಲೈಂಗಿಕ ಕಿರುಕುಳ ಆರೋಪ; ಮಲಯಾಳಂ ನಿರ್ದೇಶಕ ರಂಜಿತ್‌ ವಿರುದ್ದ ಎಫ್‌ಐಆರ್..!

    Published

    on

    ಈಗಾಗಲೇ ಕನ್ನಡ ಚಿತ್ರರಂಗದ ಮಾದರಿಯಲ್ಲೇ ಮಲಯಾಳಂ ಚಿತ್ರರಂಗದಲ್ಲೂ ಮೀಟೂ ಭಾರೀ ಸದ್ದು ಮಾಡುತ್ತಿದ್ದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಸ್ಥಿತಿ-ಗತಿ ಅರಿಯಲು ರಚಿಸಲಾಗಿದ್ದ ಹೇಮಾ ಸಮಿತಿಯ ವರದಿಯನ್ನು ಕೊನೆಗೂ ಕೇರಳ ಸರ್ಕಾರ ಪ್ರಕಟಿಸಿದ್ದು, ಕೆಲವು ಆಘಾತಕಾರಿ ಅಂಶಗಳು ಹೊರಬಂದಿವೆ.

    ಮಲಯಾಳಂ ಚಿತ್ರರಂಗದಲ್ಲಿ ಹಲವಾರು ನಟರ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದಿದ್ದು ಸೋಮವಾರ ಕೇರಳ ಪೊಲೀಸರು ಚಲನಚಿತ್ರ ನಿರ್ಮಾಪಕ ರಂಜಿತ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಅವರು ಕೊಚ್ಚಿ ನಗರ ಪೊಲೀಸ್ ಕಮಿಷನರ್‌ಗೆ ಚಲನಚಿತ್ರ ನಿರ್ಮಾಪಕರ ವಿರುದ್ಧ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ. 2009ರಲ್ಲಿ ‘ಪಾಲೇರಿ ಮಾಣಿಕ್ಯಂ’ ಸಿನಿಮಾದಲ್ಲಿ ನಟಿಸುವಂತೆ ನಟಿಯನ್ನು ಆಹ್ವಾನಿಸಿದ ನಂತರ ರಂಜಿತ್ ಅವರು ಲೈಂಗಿಕ ಉದ್ದೇಶದಿಂದ ನಟಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಪೊಲೀಸರಿಗೆ ಇಮೇಲ್ ಮೂಲಕ ಕಳುಹಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.

    ಕೊಚ್ಚಿ ಪೊಲೀಸ್ ಕಮಿಷನರ್ ಎಸ್ ಶ್ಯಾಮಸುಂದರ್ ಪ್ರಕಾರ, ಐಪಿಸಿ ಸೆಕ್ಷನ್ 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲದಿಂದ ಆಕೆಯ ಘನತೆಗೆ ಹಾನಿಗೊಳಿಸುವ ಉದ್ದೇಶದಿಂದ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

    ಕನ್ನಡದ ಹಿರಿಯ ನಟಿ ಪದ್ಮಜಾ ರಾವ್​ಗೆ ಮೂರು ತಿಂಗಳು ಜೈಲು ಶಿಕ್ಷೆ, 40 ಲಕ್ಷ ರೂ. ದಂಡ ..!!

    ನಿರ್ದೇಶಕ ರಂಜಿತ್ ವಿರುದ್ಧ ಆರೋಪ
    ರಂಜಿತ್ ಅವರು ವರ್ಷಗಳ ಹಿಂದೆ ಸ್ಕ್ರಿಪ್ಟ್ ಕುರಿತು ಚರ್ಚಿಸುವಾಗ  ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಶ್ರೀಲೇಖಾ ಮಿತ್ರ ಆರೋಪಿಸಿದ್ದಾರೆ.  “ರಂಜಿತ್ ಮಲಯಾಳಂ ಚಿತ್ರರಂಗದಲ್ಲಿ ಖ್ಯಾತನಾಮರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ. ಮುಂಬರುವ ಚಲನಚಿತ್ರ ಯೋಜನೆ ಕುರಿತು ಚರ್ಚಿಸಲು ನಾನು ಅವರ ಮನೆಗೆ  ಹೋಗಿದ್ದೆ. ಅಲ್ಲಿ ಅವರ ನಡವಳಿಕೆ ನನಗೆ ಇಷ್ಟವಾಗಲಿಲ್ಲ. ನಾವು ಸ್ಕ್ರಿಪ್ಟ್ ಬಗ್ಗೆ ಚರ್ಚಿಸುತ್ತಿರುವಾಗ ಅವರು ಅನುಚಿತವಾಗಿ ವರ್ತಿಸಿದರು” ಎಂದು ಶ್ರೀಲೇಖಾ ದೂರಿರುವುದಾಗಿ ಪಿಟಿಐ ವರದಿ ಮಾಡಿದೆ. ಈ ಘಟನೆ ನಂತರ “ನಾನು ಆ ಪ್ರಾಜೆಕ್ಟ್ ನಲ್ಲಿ ಭಾಗಿಯಾಗಲು ನಿರಾಕರಿಸಿ ಕೋಲ್ಕತ್ತಾಗೆ ಮರಳಿದೆ” ಎಂದು ನಟಿ ಹೇಳಿದ್ದಾರೆ.

    ಅವರು ಚಿತ್ರರಂಗದ ಇತರ ನಟಿಯರೊಂದಿಗೆ ಅದೇ ರೀತಿ ನಡೆಸಿಕೊಂಡಿದ್ದಾರೆಯೇ ಎಂದು ನನಗೆ ಗೊತ್ತಿಲ್ಲ. ಅಂತಹ ಪರಿಸ್ಥಿತಿ ಎದುರಾದರೆ ಅದನ್ನು ಬಹಿರಂಗಪಡಿಸುವುದು  ಅವರಿಗೆ ಬಿಟ್ಟದ್ದು. ಬಹುಶಃ  ನಿರ್ದೇಶಕರ ಶಕ್ತಿ ಮತ್ತು ಪ್ರಭಾವವು ಇತರರು ಮಾತನಾಡದಿರುವಂತೆ ತಡೆಯುತ್ತಿದೆ ಎಂದು ಶ್ರೀಲೇಖಾ ಹೇಳಿದ್ದಾರೆ. ಆದಾಗ್ಯೂ, ನಟಿಯ  ಆರೋಪಗಳನ್ನು ತಿರಸ್ಕರಿಸಿದ ರಂಜಿತ್, ಪ್ರಕರಣದಲ್ಲಿ ನಾನೇ “ನಿಜವಾದ ಸಂತ್ರಸ್ತ” ಎಂದು ಹೇಳಿದ್ದಾರೆ.

    Continue Reading

    kerala

    ಕೇರಳದಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ..! ಹವಾಮಾನ ಇಲಾಖೆ ಮುನ್ನೆಚ್ಚರಿಕೆ

    Published

    on

    ಕೇರಳ/ಮಂಗಳೂರು: ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು(ಆ.13) ಕೇರಳದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಪತ್ತನಂತಿಟ್ಟ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಎರ್ನಾಕುಲಂ, ತ್ರಿಶೂರ್ ಜಿಲ್ಲೆಗಳಲ್ಲಿ ಬುಧವಾರ ಹಾಗೂ ಗುರುವಾರ ಇಡುಕ್ಕಿಯಲ್ಲಿ ಭಾರೀ ಮಳೆಯಾಗುವ ಸಾದ್ಯತೆ ಇದೆ ಎಂದು ಐಎಂಡಿ ವರದಿ ನೀಡಿದೆ.

    ಇಂದು(ಆ.13) ತಿರುವನಂತಪುರಂ ಕೊಲ್ಲಂ ಮತ್ತು ಪತ್ತನತಿಟ್ಟಂ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 40 ಕಿ.ಮೀ ನಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗು ಕರಾವಳಿ ಪ್ರದೇಶಗಳಲ್ಲಿನ ಜನರು ಜಾಗರೂಕರಾಗಬೇಕು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

    Continue Reading

    kerala

    ಮಂಜೇಶ್ವರ: ಗುಡ್ಡ ಕುಸಿಯುವ ಭೀತಿಯಲ್ಲಿ ವರ್ಕಾಡಿ ಗ್ರಾಮ ನಿವಾಸಿಗಳು.!!

    Published

    on

    ಮಂಜೇಶ್ವರ: ನಿರಂತರ ಮಳೆಯಿಂದಾಗಿ ಅಲ್ಲಲ್ಲಿ ಭೂ ಕುಸಿತ ಉಂಟಾಗುತ್ತಿದ್ದು, ಈಗಾಗಲೇ ಹಲವಾರು ಕಡೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ವರ್ಕಾಡಿ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಬಾಕ್ರಬೈಲು ಎಂಬಲ್ಲಿನ ಕಜೆ ಪ್ರದೇಶದಲ್ಲಿ ಈ ಬಿರುಕು ಕಂಡು ಬಂದಿದೆ.

    ಬಿರುಕು ಬಿಟ್ಟಿರುವ ಈ ಗುಡ್ಡದ ಕೆಳ ಭಾಗದಲ್ಲಿ ಕೆಲವು ಮನೆಗಳಿದ್ದು, ನಿವಾಸಿಗಳಲ್ಲಿ ಆತಂಕ ಎದುರಾಗಿದೆ. ಸ್ಥಳೀಯರು ಭೂಮಿ ಬಿರುಕು ಬಿಟ್ಟು ಒಂದು ಭಾಗ ಜಾರಿರುವ ಬಗ್ಗೆ ಸ್ಥಳೀಯ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳ ಪರಿಶೀಲನೆ ನಡೆಸಿರುವ ಪಂಚಾಯತ್ ಅಧಿಕಾರಿಗಳು ಉನ್ನತ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳಿಂದ ಮಳೆ ಕೊಂಚ ವಿರಾಮ ನೀಡಿದ್ದು, ಮತ್ತೆ ಮಳೆ ಆರಂಭವಾದಲ್ಲಿ ಈ ಭಾಗದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    Continue Reading

    LATEST NEWS

    Trending