Connect with us

    LATEST NEWS

    ನೇ*ಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶ*ವ ಪತ್ತೆ; ಇದು ಆ*ತ್ಮಹತ್ಯೆನಾ ? ಕೊ*ಲೆನಾ ?

    Published

    on

    ಮಂಗಳೂರು/ಬೆಂಗಳೂರು: ನೇ*ಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮಹಿಳೆ ಶ*ವ ಬೆಂಗಳೂರಿನ ವಿವೇಕನಗರದಲ್ಲಿ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ಮೇಘನಾ ಶೆಟ್ಟಿ(27) ಮೃ*ತ ಮಹಿಳೆ.


    ಮೇಘನಾ ಅವರು ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಎರಡು ವರ್ಷದ ಹಿಂದೆ ತೀರ್ಥಹಳ್ಳಿಯ ಮೂಲದ ಇಂಜಿನಿಯರ್ ಸುದೀಪ್ ಶೆಟ್ಟಿ ಜೊತೆ ವಿವಾಹವಾಗಿತ್ತು. ಜೊತೆಗೆ ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಸಹ ಇದೆ.
    ಮೃ*ತ ದೇಹ ಹೇಗೆ ಪತ್ತೆಯಾಗಿದೆ ಗೊತ್ತಾ ?
    ಎಲ್ಲವೂ ಚೆನ್ನಾಗಿದ್ದ ಕುಟುಂಬದಲ್ಲಿ ಇತ್ತೀಚೆಗೆ ಪದೇಪದೆ ಹಣಕ್ಕಾಗಿ ಪತಿ ಕುಟುಂಬದಿಂದ ಕಿರು*ಕುಳ ನೀಡುತ್ತಿದ್ದು, ನಿನ್ನೆ(ಅ.04) ರಾತ್ರಿ ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದೆ ಎನ್ನಲಾಗಿದೆ. ಇಂದು(ಅ.5) ಬೆಳಗ್ಗೆ ಕಿಟಕಿಗೆ ನೇ*ಣು ಬಿಗಿದುಕೊಂಡ ಸ್ಥಿತಿಯಲ್ಲಿ ಶ*ವ ಪತ್ತೆಯಾಗಿದೆ.
    ಪತ್ನಿಯನ್ನು ಪತಿಯೇ ಕೊ*ಲೆ ಮಾಡಿದ್ದಾ ?
    ಘಟನಾ ಸ್ಥಳಕ್ಕೆ ವಿವೇಕನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃ*ತ ಮೇಘನಾ ಪೋಷಕರು, ಅಳಿಯ ಸುದೀಪ್ ಮೇಲೆ ಕೊ*ಲೆ ಆರೋಪ ಹೇರಿದ್ದು, ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಮೇಘನಾ ಪತಿ ಸುದೀಪ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    LATEST NEWS

    VIRAL VIDEO: ತಾಯಿಯೊಂದಿಗೆ ಎಂಟು ತಿಂಗಳ ಕಂದಮ್ಮನ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ

    Published

    on

    ಮಂಗಳೂರು: ಪುಟ್ಟ ಕಂದಮ್ಮಗಳ ಜೊತೆ ತುಸು ಘಳಿಗೆ ಇದ್ದರೂ ಸಿಗುವ ಖುಷಿಯೇ ಬೇರೆ. ಮುಗ್ಧ ಮನಸ್ಸುಗಳು ನಿಸ್ವಾರ್ಥದಿಂದ ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ತಾಯಿಯೊಂದಿಗೆ ಎಂಟು ತಿಂಗಳ ಮಗುವೊಂದು ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಿಸಿದ್ದು, ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ.

    ಅರ್ಜುನನ ಪುತ್ರ ಅಭಿಮನ್ಯು ತಾಯಿಯ ಗರ್ಭದಲ್ಲಿರುವಾಗಲೇ ಚಕ್ರವ್ಯೂಹವನ್ನು ಭೇದಿಸುವ ಕಲೆಯನ್ನು ತಂದೆಯಿಂದ ಕಲಿತಿರುತ್ತಾನೆ. ಅಂತೆಯೇ ಈ ಮಗು ತಾಯಿಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಅನ್ನು ಕಲಿತಿದೆ ಎನ್ನುವ ಸಾಲುಗಳೊಂದಿಗೆ ಈ ವಿಡಿಯೋವನ್ನು Vaidik Gyaan ಹೆಸರಿನ ಖಾತೆಯಲ್ಲಿ  ಹಂಚಿಕೊಳ್ಳಲಾಗಿದೆ. ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಪಠಿಸುತ್ತಿರುವಾಗ ಅದರ ಕೊನೆಯ ಪದವನ್ನು ಮಗುವು ಮುದ್ದಾಗಿ ಉಚ್ಚರಿಸುತ್ತಿದೆ.
    ಸಮಾಜಿಕ ಜಾಲತಾಣದಲ್ಲಿ ಅಧಿಕ ವೀಕ್ಷಣೆ ಕಂಡಿದ್ದು. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಮಗುವಿನ ಈ ಆಧ್ಯಾತ್ಮಕ ಸಾಧನೆಯನ್ನು ಒಬ್ಬರು ಹೊಗಳಿದ್ದಾರೆ. ಮತ್ತೊಬ್ಬರು, ಜೈ ಸನಾತನ ಧರ್ಮ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಮಗುವಿನ ಬಾಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ ಕೇಳುವುದೇ ಕಿವಿಗೆ ಇಂಪು’ ಎಂದಿದ್ದಾರೆ.

     

    watch this video : 

    Continue Reading

    LATEST NEWS

    ಪ್ರೀತಿಸಿ ಮಂಗಳಮುಖಿಯನ್ನು ಮದುವೆಯಾದ ಯುವಕ

    Published

    on

    ಆಂಧ್ರಪ್ರದೇಶ: ಯುವಕನೊಬ್ಬ ಮಂಗಳಮುಖಿಯನ್ನು ಮೂರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿರುವ ಘಟನೆ ಆಂಧ್ರಪ್ರದೇಶದ ಎನ್.ಟಿಆರ್ ಜಿಲ್ಲೆಯಲ್ಲಿ ನಡೆದಿದೆ.

    ವಿಸ್ಸನ್ನಪೇಟೆ ನಿವಾಸಿ ನಂದು ಮತ್ತು ಎಂಕೂರಿನ ತೃತೀಯಲಿಂಗಿ ನಕ್ಷತ್ರಾ ಮದುವೆಯಾದ ನವ ಜೋಡಿ. ಸದ್ಯ ಇವರಿಬ್ಬರ ಮದುವೆಯ ಫೋಟೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

    ತೃತೀಯಲಿಂಗಿ ಸಮುದಾಯದ ಪ್ರತಿನಿಧಿಗಳ ಸಮ್ಮುಖದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇತ್ತೀಚಿಗಷ್ಟೇ ಮದುವೆ ನಡೆದಿದೆ.  ನಾನು ಮಂಗಳಮುಖಿಯನ್ನು ಮದುವೆಯಾಗುವುದು ನನ್ನ ಕುಟುಂಬದವರಿಗೆ ಇಷ್ಟವಿಲ್ಲ. ಆದರೆ ನಾವಿಬ್ಬರು ಸುದೀರ್ಘ ಚರ್ಚೆ ನಡೆಸಿ ಮದುವೆಯಾಗಲು ನಿರ್ಧರಿಸಿದೆವು.

    Continue Reading

    LATEST NEWS

    ವಯನಾಡ್ ಭೂಕುಸಿತ: ಪರಿಹಾರ ಧನ ಏಕೆ ವಿತರಿಸಿಲ್ಲ; ಕೇಂದ್ರಕ್ಕೆ ಕೇರಳ ಹೈಕೋರ್ಟ್ ಪ್ರಶ್ನೆ

    Published

    on

    ವಯನಾಡ್ ಭೂಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮತ್ತು ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಹಣ ವಿತರಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಕೇರಳ ಹೈಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿದೆ.

    ಕರ್ನಾಟಕ ಮತ್ತು ತಮಿಳುನಾಡಿನಂತಹ ನೆರೆಯ ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಧನ ಒದಗಿಸಲಾಗಿದೆ ಎಂಬ ವಿಚಾರವನ್ನು ನ್ಯಾಯಮೂರ್ತಿ ಎ ಕೆ ಜಯಶಂಕರನ್ ನಂಬಿಯಾರ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಕುಮಾರ್ ವಿ ಎಂ ಅವರಿದ್ದ ವಿಭಾಗೀಯ ಪೀಠ ಗಮನಿಸಿತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ನಿಧಿ ವಿತರಿಸುವುದನ್ನು ಪರಿಗಣಿಸಬೇಕು ಎಂದು ಅದು ಸೂಚಿಸಿತು.

    ಭೂಕುಸಿತದಿಂದ ತೀವ್ರ ಹಾನಿ ಮತ್ತು ನಷ್ಟ ಅನುಭವಿಸಿದ್ದರೂ ಕೇರಳಕ್ಕೆ ಇನ್ನೂ ಯಾವುದೇ ಪರಿಹಾರ ಧನ ಒದಗಿಸಿಲ್ಲ ಎಂದು ಅಮಿಕಸ್ ಕ್ಯೂರಿ (ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡುವ ವಕೀಲ) ರಂಜಿತ್ ಥಂಪನ್ ಗಮನ ಸೆಳೆದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ವಿಚಾರ ತಿಳಿಸಿತು.

    ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್, ಅಮಿಕಸ್ ನೀಡಿದ ಸಲಹೆಗಳಿಗೆ ಪ್ರತಿಕ್ರಿಯಿಸಲು ಸಮಯಾವಕಾಶ ಕೋರಿದರು. ಹೀಗಾಗಿ ಅಕ್ಟೋಬರ್ 18ರೊಳಗೆ ವಿವರವಾದ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಮತ್ತು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

    ವಯನಾಡ್ ಭೂಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಪತ್ತು ನಿರ್ವಹಣೆ ಮತ್ತುನಿಯಂತ್ರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿತ್ತು.

    Continue Reading

    LATEST NEWS

    Trending