ಸೋಮೇಶ್ವರದ ಮಹಿಳೆಗೆ ಕೊರೊನಾ ಪಾಸಿಟಿವ್: ಕರಾವಳಿಯ ಕೊರೊನಾ ಹಬ್ ಆಯ್ತಾ ಫಸ್ಟ್ ನ್ಯೂರೋ.??
ಸೋಮೇಶ್ವರದ ಮಹಿಳೆಗೆ ಕೊರೊನಾ ಪಾಸಿಟಿವ್: ಕರಾವಳಿಯ ಕೊರೊನಾ ಹಬ್ ಆಯ್ತಾ ಫಸ್ಟ್ ನ್ಯೂರೋ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಾಲ್ಕನೇ ಹಂತದ ಲಾಕ್ ಡೌನ್ ಪ್ರಕ್ರಿಯೆಯಲ್ಲಿದ್ದರೆ, ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದೆ.
ಅದ್ರಲ್ಲೂ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆ ಕಂಟಕವಾಗಿ ಪರಿಣಮಿಸಿದ್ದು, ಇಂದು ಮಂಗಳೂರಿನ ಉಳ್ಳಾಲದ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಫಸ್ಟ್ ನ್ಯೂರೋ ಆಸ್ಪತ್ರೆ ಸಂಪರ್ಕದಿಂದ ಉಡುಪಿ ಜಿಲ್ಲೆಯಲ್ಲೂ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು,
ಇದೀಗ ಅದೇ ಆಸ್ಪತ್ರೆಯ ಸಂಪರ್ಕದಿಂದ ಇಂದು ಮಂಗಳೂರಿನ ಉಳ್ಳಾಲದ ಸೋಮೇಶ್ವರ ಗ್ರಾಮದ ಪಿಲಾರಿನ ಮಹಿಳೆಗೂ ಕೊರೊನಾ ಪಾಸಿಟಿವ್ ಬಂದಿದೆ.
ಸದ್ಯ ಪಾಸಿಟಿವ್ ಬಂದ ಹಿನ್ನಲೆ ಉಳ್ಳಾಲದ ಸೋಮೇಶ್ವರ ಗ್ರಾಮದ ಪಿಲಾರು ಒಂದು ಕಿ.ಮೀ ಕಂಟೈನ್ ಮೆಂಟ್ ಹಾಗೂ ಸುತ್ತಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ಸೀಲ್ ಡೌನ್ ಗೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇದೀಗ ಪಾಸಿಟಿವ್ ಬಂದ ಮಹಿಳೆಯ ಮಗಳಿಗೆ ನ್ಯುಮೋನಿಯಾ ಇದ್ದ ಹಿನ್ನಲೆಯಲ್ಲಿ ಎ.12 ರಂದು ಆಕೆಯನ್ನು ಫಸ್ಟ್ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿ ಬಂಟ್ವಾಳದ ಮಹಿಳೆಯಿದ್ದ ಕೊಠಡಿಯಲ್ಲೇ ಯುವತಿಯನ್ನು ದಾಖಲಿಸಲಾಗಿತ್ತು. ಇದೇ ವೇಳೆ ಆಕೆಯ ತಾಯಿ ಕೂಡ ಜೊತೆಗಿದ್ದರು.
ಇದರಿಂದ ಸೋಂಕು ತಗಲಿರುವ ಸಾಧ್ಯತೆಗಳಿವೆ. ಈ ಮೂಲಕ ಆಸ್ಪತ್ರೆಯ ಒಂದೇ ಕೊಠಡಿಯಲ್ಲಿದ್ದ ನಾಲ್ಕು ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ.
ಫಸ್ಟ್ ನ್ಯೂರೋದಲ್ಲಿ ಕೊರೊನಾ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಚಿಕಿತ್ಸೆ ಪಡೆದಿದ್ದ ಯುವತಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಆದರೆ ಸೆಕೆಂಡರಿ ಕಾಂಟ್ಯಾಕ್ಟ್ ಅನ್ನುವ ನೆಲೆಯಲ್ಲಿ ತಾಯಿಯನ್ನು ವಾರದ ಹಿಂದೆಯಷ್ಟೇ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಯುವತಿಯ ತಾಯಿ ಕೂಡಾ ಕ್ಷಯ ರೋಗ ಇದ್ದವರೆಂದು ತಿಳಿದು ಬಂದಿದೆ.
32 ಗಂಟೆ ಮಾತ್ರ ಆಸ್ಪತ್ರೆಯಲ್ಲಿದ್ದ ತಾಯಿ-ಮಗಳು:
ತನ್ನ ಮಗಳ ಚಿಕಿತ್ಸೆಗೆ ಲಕ್ಷಾಂತರ ಹಣ ಬೇಕೆಂದು ಆರ್ಥಿಕವಾಗಿ ಹಿಂದುಳಿದ ತಾಯಿ, ಆಕೆಯನ್ನು ಬೇರೆ ಆಸ್ಪತ್ರೆಗೆ ಕೊಂಡೊಯ್ಯುವ ಉದ್ದೇಶದಿಂದ ಎರಡೇ ದಿನದಲ್ಲಿ ಫಸ್ಟ್ ನ್ಯೂರೋದಿಂದ ಡಿಸ್ಚಾರ್ಜ್ ನಡೆಸಿದ್ದರು.
ಆದ್ರೆ ಬೇರೆ ಆಸ್ಪತ್ರೆಗೂ ಕೊಂಡೊಯ್ಯಲು ಸಾಧ್ಯವಾಗದೆ ನೇರ ಮನೆಗೆ ಹೋಗಿದ್ದರು.
ಬಳಿಕ ಅಲ್ಲಿಂದ ಕೋವಿಡ್ ಪರೀಕ್ಷೆಗೆ ಮಗಳನ್ನು ಕೊಂಡೊಯ್ದ ನಂತರ ವರದಿ ನೆಗೆಟಿವ್ ಆದ ಹಿನ್ನಲೆಯಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ಐಸೊಲೇಷನ್ ಸೆಂಟರ್ ನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ಅಲ್ಲಿಂದಲೂ ಡಿಸ್ಚಾರ್ಜ್ ಆದ ನಂತರ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
LATEST NEWS
ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು
ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ
ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.