LATEST NEWS
ಎಂಟು ಯುವತಿಯರ ಜೊತೆ ಓರ್ವ ಯುವಕ; ದೃಶ್ಯ ಕಂಡು ಪೊಲೀಸರಿಗೆ ಶಾ*ಕ್ !!
Published
2 weeks agoon
ಮಂಗಳೂರು/ರಾಜಸ್ಥಾನ: ಎರಡು ಸ್ಪಾ ಕೇಂದ್ರಗಳ ಮೇಲೆ ಪೊಲೀಸರು ದಾಳಿ ನಡೆಸಿ 9 ಜನರನ್ನು ಬಂಧಿಸಿರುವ ಘಟನೆ ಸಿರೋಹಿ ಜಿಲ್ಲೆಯ ಅಬು ರೋಡ್ ಪಟ್ಟಣದಲ್ಲಿ ನಡೆದಿದೆ. ಈ ವೇಳೆ ಎಂಟು ಯುವತಿಯರು ಹಾಗೂ ಓರ್ವ ಯುವಕನನ್ನು ಬಂಧಿಸಲಾಗಿದೆ.
ನದಿಯ ತಪ್ಪಲಿನಲ್ಲಿರುವ ಎರಡು ಸ್ಪಾ ಕೇಂದ್ರಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇದರಲ್ಲಿ ಒಂದು ಸ್ಪಾದಿಂದ ಹುಡುಗರು ಮತ್ತು ಹುಡುಗಿಯರನ್ನು ಬಂಧಿಸಲಾಯಿತು.
ಬಂಧಿತ ಆರೋಪಿಗಳು ಗಾಜಿಯಾಬಾದ್, ಪಂಜಾಬ್, ಜೈಪುರ, ಯುಪಿ, ಮುಂಬೈ, ಛತ್ತೀಸ್‌ಗಢ ಮತ್ತು ಕೋಲ್ಕತ್ತಾ ನಿವಾಸಿಗಳು ಎಂದು ಹೇಳಲಾಗಿದೆ. ದಾಳಿ ವೇಳೆ ಒಬ್ಬ ಹುಡುಗನೊಂದಿಗೆ ಎಂಟು ಹುಡುಗಿಯರು ಕೋಣೆಯಲ್ಲಿದ್ದು, ಪೊಲೀಸರು ಬಂದಾಗ ಒಳಗಿದ್ದ ದೃಶ್ಯ ಮುಜುಗರ ಹುಟ್ಟಿಸುವಂತಿತ್ತು.
ಸಿರೋಹಿ ರಾಜಸ್ಥಾನದ ಅತ್ಯಂತ ಚಿಕ್ಕ ಜಿಲ್ಲೆ ಎಂಬುದು ಗಮನಾರ್ಹ. ಆದರೆ ಈಗ ಅಲ್ಲಿಯೂ ವೇಶ್ಯಾವಾಟಿಕೆ ನಡೆಸುವ ಸ್ಪಾ ಸೆಂಟರ್‌ಗಳು ತೆರೆದಿವೆ. ಎರಡ್ಮೂರು ತಿಂಗಳ ಪ್ಯಾಕೇಜ್ ಹೆಸರಲ್ಲಿ ಆರೋಪಿಗಳು, ಹುಡುಗಿಯರನ್ನು ಸ್ಪಾ ಸೆಂಟರ್ ಗೆ ಕರೆಯುತ್ತಾರೆ. ಈ ಹುಡುಗಿಯರು ಬೇರೆ ಬೇರೆ ರಾಜ್ಯದವರು ಮಾತ್ರವಲ್ಲದೇ ಥಾಯ್ಲೆಂಡ್, ನೇಪಾಳದಂತಹ ದೇಶಗಳಿಂದ ಸಹ ಹುಡುಗಿಯರನ್ನು ಕರೆ ತಂದು ಅವರಿಗೆ ಹೆಚ್ಚಿನ ಹಣವನ್ನು ನೀಡುವುದರ ಜೊತೆಗೆ ಗ್ರಾಹಕರಿಂದ ಹೆಚ್ಚಿನ ಹಣವನ್ನು ಸಹ ತೆಗೆದುಕೊಳ್ಳುತ್ತಿದ್ದಾರೆ.
ಬಂಧಿತ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Baindooru
ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ
Published
38 minutes agoon
23/11/2024By
NEWS DESK2ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.
ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ
ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
DAKSHINA KANNADA
ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !
Published
2 hours agoon
23/11/2024By
NEWS DESK3ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.
ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.
LATEST NEWS
Viral Video: ಮಿಂಚಿನ ವೇಗದಲ್ಲಿ ಊಟ ಬಡಿಸಿದ ನಾಲ್ವರು ಯುವಕರು
Published
4 hours agoon
23/11/2024By
NEWS DESK2ಭಂಡಾರ ಔತಣದಲ್ಲಿ ನಾಲ್ವರು ಯುವಕರ ಗುಂಪು ಮಿಂಚಿನ ವೇಗದಲ್ಲಿ ಆಹಾರ ಬಡಿಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಗಮನ ಸಳೆದಿದೆ.
X ನಲ್ಲಿ ಹಂಚಿಕೊಳ್ಳಲಾದ ಕ್ಲಿಪ್ ನಲ್ಲಿ, ಕೆಂಪು ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿರುವ ನಾಲ್ವರು ಯುವಕರು ಜನರ ಸಾಲಿನಲ್ಲಿ ವೇಗವಾಗಿ ಚಲಿಸುತ್ತ ಪೇಪರ್ ಪ್ಲೇಟ್, ಕಪ್ ಮತ್ತು ಬೌಲ್‌ಗಳನ್ನು ಹಾಕುವುದನ್ನು ನೋಡಬಹುದಾಗಿದೆ.
ನಿಖರತೆಯೊಂದಿಗೆ ಏಕಕಾಲದಲ್ಲಿ ಇವರುಗಳು ಆಹಾರ ಬಡಿಸುವುದನ್ನು ವಿಡಿಯೋ ಒಳಗೊಂಡಿದೆ. ಮೊದಲ ಗುಂಪು ಕಾರ್ಯನಿರ್ವಹಿಸುತ್ತಿದ್ದಂತೆ, ಎರಡನೇ ಗುಂಪು ಅದೇ ವೇಗದ ಚಲನೆಯನ್ನು ಕಾಯ್ದುಕೊಳ್ಳುವ ಮೂಲಕ ಗಮನ ಸೆಳೆಯುತ್ತದೆ. “MBBS (ಮಾಸ್ಟರ್ ಇನ್ ಭಂಡಾರ ಮತ್ತು ಬ್ಯಾಚುಲರ್ ಆಫ್ ಸರ್ವಿಂಗ್)” ಎಂಬ ಶೀರ್ಷಿಕೆಯ ಈ ವೀಡಿಯೋ ಬಳಕೆದಾರರು ಬಡಿಸುವ ಅವರ ವೇಗ ಮತ್ತು ಕೌಶಲ್ಯದ ಬಗ್ಗೆ ವಿಸ್ಮಯ ವ್ಯಕ್ತಪಡಿಸಿದ್ದಾರೆ.
Watch Video:
LATEST NEWS
ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ
ಜಾರ್ಖಂಡ್ನಲ್ಲಿ ಬಿಗ್ ಟ್ವಿಸ್ಟ್; ಜೆಎಂಎಂ ಮುನ್ನಡೆ – ಎನ್ಡಿಎ ಹಿಂದಿಕ್ಕಿದ ಇಂಡಿಯಾ ಒಕ್ಕೂಟ
ಕರ್ನಾಟಕ ಉಪಚುನಾವಣೆ : ‘ಕೈ’ ಹಿಡಿದ ಮತದಾರ…ಕಮಲಕ್ಕೆ ಶಾಕ್
ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ
ಬಾಗಲಕೋಟೆ ಹೇರ್ ಡ್ರೈಯರ್ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಪ್ರಕರಣದ ಹಿಂದಿದೆ ಪ್ರೇಮ ಪುರಾಣ
ಪತಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನು ಕೊಂ*ದ ಪಾಪಿ ತಾಯಿ!
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- Baindooru1 day ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!