Connect with us

    LATEST NEWS

    ಬೆಟ್ಟಿಂಗ್‌ನಿಂದಾಗಿ 96 ಲಕ್ಷ ಕಳೆದುಕೊಂಡ ಯುವಕ..! ಕಣ್ಣೀರಿಟ್ಟು ಯುವಕನ ಗೋಳಾಟ

    Published

    on

    ಮುಂಬೈ/ಮಂಗಳೂರು:  ಸುಲಭವಾಗಿ ದುಡ್ಡು ಮಾಡಬೇಕು ಅನ್ನೋ ನಿಟ್ಟಿನಲ್ಲಿ ಯುವಕರು ಅದೆಷ್ಟೋ ಅಡ್ಡ ದಾರಿಗಳನ್ನು ಹಿಡಿಯುತ್ತಾರೆ. ಅದರಲ್ಲೂ ಈ ಬೆಟ್ಟಿಂಗ್ ದಂಧೆಗಳು, ಆನಲೈನ್‌ ಬೆಟ್ಟಿಂಗ್‌ ಗೆ ಜನರು ಮಾರು ಹೋಗುತ್ತಾರೆ. ಒಮ್ಮೆ ಬೆಟ್ಟಿಂಗ್ ಚಟ ಹಿಡೀತು ಅಂದ್ರೆ ಸಾಕು ನಿಮ್ಮ ಜೀವನವನ್ನೇ ನಾಶ ಮಾಡಿ ಬಿಡುತ್ತದೆ. ಇನ್ನು ಇದರಲ್ಲಿ ಸಕ್ಸಸ್‌ನ್ನು ಪಡೆಯುವವರ ಸಂಖ್ಯೆ ಬಹಳ ವಿರಳ. ಇದರಲ್ಲಿ ನಿಮ್ಮ ಜೇಬು ತುಂಬುವುದಕ್ಕಿಂತ ಜೇಬು ಖಾಲಿಯಾಗುವುದೇ ಜಾಸ್ತಿ. ಈ ಬೆಟ್ಟಿಂಗ್‌ ಗೆ ಮಾರುಹೋದವರು ಸಂಕಷ್ಟಕ್ಕೆ ಸಿಲುಕುವುದಂತೂ ಅಕ್ಷರಶಃ ನಿಜ. ಹೀಗೆ ಇಲ್ಲೊಬ್ಬ ಯುವಕ ಆನ್ಲೈನ್‌ ಬೆಟ್ಟಿಂಗ್ ಆಡಲು ಹೋಗಿ ಬರೋಬ್ಬರಿ 96 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾನೆ. ಬಿಟೆಕ್‌ ಮಾಡಲೆಂದು ಕೂಡಿಟ್ಟಿದ್ದ ಹಣವನ್ನು ಬೆಟ್ಟಿಂಗ್‌ಗೆ ಸುರಿದಿದ್ದಾನೆ. ಬೆಟ್ಟಿಂಗ್‌ ನಲ್ಲಿ 96 ಲಕ್ಷ ಹಣವನ್ನು ಕಳೆದುಕೊಂಡ ಈತ ಇದೀಗ ಖಿನ್ನತೆಗೆ ಜಾರಿದ್ದಾನೆ.

    ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಯುವಕ ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಆ್ಯಪ್‌ನಲ್ಲಿ ಹಣ ಹಾಕಿ 96 ಲಕ್ಷ ರೂಪಾಯಿಯನ್ನು ಕಳೆದುಕೊಂಡಿದ್ದಾಗಿ ಕಣ್ಣೀರಿಟ್ಟಿದ್ದಾನೆ. ಇದರಿಂದಾಗಿ ಮನೆಯವರೂ ಕೂಡಾ ಆತನ ಮುಖವನ್ನು ನೋಡಲು ಬಯುಸುತ್ತಿಲ್ಲವಂತೆ. ಇತ್ತ ವಿದ್ಯಾಭ್ಯಾಸವೂ ಮೊಟಕುಗೊಂಡು, ಕಟುಂಬದವರ ಜೊತೆ ಮಾತೂ ಕಳೆದುಕೊಂಡ ಯುವಕನ ಪರಿಸ್ಥಿತಿ ಹೇಳತೀರದು. ಇದರಿಂದ ಬೇಸೊತ್ತ ಯುವಕ ಆತ್ಮಹತ್ಯೆ ಯತ್ನಿಸಿದ್ದಾನೆ.

    ಜೈಲಿನಲ್ಲೇ ಮೊಬೈಲ್‌ ಬಳಕೆ !

    ಟಿವಿಯಲ್ಲಿ ಬಂದ ಬೆಟ್ಟಿಂಗ್ ಜಾಹೀರಾತನ್ನು ನೋಡಿದ ಬಳಿಕ ತಾನು ಬಿಟೆಕ್‌ ಮಾಡಲು ಇಟ್ಟಿದ್ದ ಹಣವನ್ನು ಜೂಜಾಟಕ್ಕೆ ಉಪಯೋಗ ಮಾಡಿದ್ದಾನಂತೆ. ಈ ಬೆಟ್ಟಿಂಗ್ ಚಟ ಹೆಚ್ಚಾದಂತೆ ಆತನ ಸಾಲ ಕೂಡಾ ಮಿತಿ ಮೀರಿ ಹೋಗಿದೆ. ಎಲ್ಲವನ್ನೂ ಕಳೆದುಕೊಂಡು ನಿರ್ಗತಿಕನಂತೆ ಆಗಿಬಿಟ್ಟಿದ್ದಾನೆ.

    ಟ್ವಿಟ್ಟರ್‌ನಲ್ಲಿ ಈ ವೀಡಿಯೋವನ್ನು @khurpenchh ಎಂಬ ಪೇಜ್‌ನಿಂದ ಪೋಸ್ಟ್‌ ಮಾಡಲಾಗಿದ್ದು, ಈ ವೀಡಿಯೋ ಕೆಲವೇ ಕ್ಷಣಗಳಲ್ಲಿ ಲಕ್ಷಾಂತರ ಜನರಿಂದ ವೀಕ್ಷಿಸಲ್ಪಟ್ಟಿದ್ದು ಜನರು ಬೆಟ್ಟಿಂಗ್ ಆ್ಯಪ್‌ ಬ್ಗಗೆ ಆಕ್ರೋಶ ಹೊರಹಾಕಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending