ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ದರ್ಶಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಆಧಾರ್ ಕಾರ್ಡು ತರಬೇಕೆಂದು ದೇವಳದ ಆಡಳಿತ ಮಂಡಳಿ ಫರ್ಮಾನು ಹೊರಡಿಸಿದೆ.
ಕೇರಳ ಭಕ್ತರು ಕೊಲ್ಲೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನಲೆ ಇದೀಗ ಶ್ರೀ ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಾರ್ಡ್ ನ್ನು ತರಬೇಕೆಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟಂಬರ್ 4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ.
ದೇವಾಲಯ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ.
ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು ದೇವಸ್ಥಾನ ಪ್ರವೇಶಿಸುವ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್- 19 ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿಯನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
ಅಲ್ಲದೆ ಮೂಕಾಂಬಿಕಾ ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.