Thursday, August 11, 2022

ಪಂಜಾಬ್‌ ನಂತರ ಮತ್ತೆರಡು ರಾಜ್ಯಗಳ ಮೇಲೆ ಕಣ್ಣಿಟ್ಟ AAP

ನವದೆಹಲಿ: ಪಂಜಾಬ್‌ನಲ್ಲಿ ಗೆದ್ದು ಬೀಗಿದ ಆಪ್‌ ಪಕ್ಷ ಮತ್ತೆರಡು ರಾಜ್ಯಗಳ ಮೇಲೆ ಕಣ್ಣಿಟ್ಟಿದ್ದು, ಮುಂದಿನ ದಿನಗಳಲ್ಲಿ ಅಲ್ಲಿಯೂ ಅಧಿಕಾರಕ್ಕೆ ಬರುತ್ತೇವೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಆಪ್​ ಮುಖಂಡ ಅಕ್ಷಯ್ ಮರಾಠೆ, ನಮ್ಮ ಪಕ್ಷ ಪಂಜಾಬ್​​ನಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಈಗ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲೂ ನಾವು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ.

ಗುಜರಾತ್​ನಲ್ಲಿ 2022ರ ಡಿಸೆಂಬರ್​ನಲ್ಲಿ ಚುನಾವಣೆ ನಡೆಯಲಿದ್ದು, ಹಿಮಾಚಲ ಪ್ರದೇಶದಲ್ಲಿ ನವೆಂಬರ್ ಅಷ್ಟೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಅಲ್ಲಿಗೆ ನಮ್ಮ ಕಾರ್ಯಕರ್ತರನ್ನು ಕಳಿಸುವ ಸಿದ್ಧತೆಗಳು ನಡೆಯುತ್ತಿವೆ.

ಅದೆಷ್ಟೋ ದಶಕಗಳಿಂದ ಭಾರತದ ಜನರು ಬಿಜೆಪಿ ಮತ್ತು ಕಾಂಗ್ರೆಸ್ ಎರಡೇ ಪಕ್ಷಗಳನ್ನು ಆಯ್ಕೆ ಮಾಡುತ್ತ ಬಂದರು. ಆದರೆ ಇವೆರಡೂ ಪಕ್ಷಗಳು ಸಾಮಾನ್ಯ ಜನರಿಗಾಗಿ ಏನೇನೂ ಕೆಲಸ ಮಾಡಲಿಲ್ಲ.

ಇದೇ ಮೊದಲ ಬಾರಿಗೆ ಜನರು ಪರ್ಯಾಯ ಪಕ್ಷದತ್ತ ಒಲವು ತೋರುತ್ತಿದ್ದಾರೆ. ಅದಕ್ಕೆ ಸಾಕ್ಷಿ ಪಂಜಾಬ್​​ನಲ್ಲಿ ಆಪ್​ ಗೆಲುವು ಎಂದು ವಿಶ್ಲೇಷಣೆ ಮಾಡಿದರು.

LEAVE A REPLY

Please enter your comment!
Please enter your name here

Hot Topics

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...

ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ರಕ್ಷಾಬಂಧನ

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು...

ಪಿ.ಯು.ಸಿ ಪೂರಕ ಪರೀಕ್ಷೆ: ಆ.12ರಿಂದ ಆ.25ರವರೆಗೆ ನಿಷೇಧಾಜ್ಞೆ

ಮಂಗಳೂರು: ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ಹಿನ್ನೆಲೆ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯ 4 ಪರೀಕ್ಷಾ ಕೇಂದ್ರಗಳಲ್ಲಿ ಆ.12ರಿಂದ ಆ.25ರ ವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ.ಪರೀಕ್ಷೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ...