Connect with us

    DAKSHINA KANNADA

    ಬಹುನಿರೀಕ್ಷಿತ “ಆರಾಟ” ಕನ್ನಡ ಚಿತ್ರ ಜೂನ್ 21ರಂದು ತೆರೆಗೆ

    Published

    on

    ಮಂಗಳೂರು: “ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ “ಆರಾಟ” ಕನ್ನಡ ಸಿನಿಮಾ ಜೂನ್ 21ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ” ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    “ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದ್ದು ಚಿತ್ರದ ಟೀಸರ್, ಟ್ರೈಲರ್ ಹಾಗೂ 2 ಹಾಡುಗಳನ್ನು ಕನ್ನಡದ ಹೆಸರಾಂತ ಯೂಟ್ಯೂಬ್ ಚಾನೆಲ್ ಆನಂದ್ ಆಡಿಯೋ ಮೂಲಕ ಬಿಡುಗಡೆಗೊಳಿಸಲಾಗಿದ್ದು ಈಗಾಗಲೇ ಜನಮನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ” ಎಂದರು.

    “ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ.‌ ಸುಮಾರು 20 ದಿನಗಳ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದ್ದು ಪಿ.ಎನ್.ಆರ್ ಬ್ಯಾನರ್ ನ ಅಡಿಯಲ್ಲಿ ರಾಘವೇಂದ್ರ ಹೊಳ್ಳ ಟಿ, ರಾಂಪ್ರಸಾದ್ ಕೆ, ನಿತೇಶ್ ಮಾಡಮ್ಮೆ ಹಾಗೂ ಸ್ನೇಹಿತರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ” ಎಂದು ನಟ ಜ್ಯೋತಿಷ್ ಶೆಟ್ಟಿ ಹೇಳಿದರು.

    ನಾಯಕನಟ ರಂಜನ್ ಕಾಸರಗೋಡು ಮಾತನಾಡಿ, “ಚಿತ್ರದಲ್ಲಿ ಕರಾವಳಿಯ ಸೊಗಡನ್ನು ತುಂಬ ಚೆನ್ನಾಗಿ ಚಿತ್ರಿಸಲಾಗಿದೆ. ದೇವರ ಜಾತ್ರೆಯ ಸಂದರ್ಭದಲ್ಲಿ ನಡೆಯುವ ಜಳಕದ ಸನ್ನಿವೇಶಕ್ಕೆ ಆರಾಟ ಎಂದು ಕರೆಯಲಾಗುತ್ತಿದ್ದು ಇಡೀ ಸಿನಿಮಾ ತುಳುನಾಡಿನಲ್ಲಿ ಚಿತ್ರಿಸಲಾಗಿದೆ. ಎಲ್ಲರೂ ಚಿತ್ರಮಂದಿರದಲ್ಲಿ ಸಿನಿಮಾ ನೋಡಿ” ಎಂದರು.

    ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ರಾಘವೇಂದ್ರ ಹೊಳ್ಳ, ಸಂಗೀತ ನಿರ್ದೇಶಕ ಸಮೀರ್ ಮುಡಿಪು, ಸುನಿಲ್ ನೆಲ್ಲಿಗುಡ್ಡೆ, ರಂಜನ್ ಕಾಸರಗೋಡು, ಯೋಗೀಶ್ ಕೆ.ಎನ್., ಜ್ಯೋತಿಷ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ ಕುರಿತು:

    ಸಿನಿಮಾದ ಮೂಲಕಥೆ ರಾಘವೇಂದ್ರ ಹೊಳ್ಳ ಅವರದ್ದಾಗಿದ್ದು ಚಿತ್ರಕಥೆ, ಸಂಭಾಷಣೆ, ನಿರ್ದೇಶನದ ಜವಾಬ್ದಾರಿಯನ್ನು ಪುಷ್ಪರಾಜ್ ರೈ ಮಲಾರಬೀಡು ವಹಿಸಿದ್ದಾರೆ.

    ನಿರ್ದೇಶನ ತಂಡದಲ್ಲಿ ಜಯರಾಜ್ ಹೆಜಮಾಡಿ, ರೋಷನ್ ಆರ್ ಆಳ್ವ, ಹರ್ಷರಾಜ್ ಬಂಟ್ವಾಳ, ಅಭಿ ಬೋಳ್ಯಾರ್, ಸುಶಿನ್ ದುಡಿದಿದ್ದಾರೆ. ಛಾಯಾಗ್ರಹಣ ರವಿ ಸುವರ್ಣ, ಸಂಕಲನ ದಾಮು ಕನ್ಸೂರ್ , ಸಂಗೀತ ರಾಘವೇಂದ್ರ ಬೀಜಾಡಿ ಹಾಗೂ ಶಮೀರ್ ಮುಡಿಪು, ಸಾಹಿತ್ಯ ಹೆಚ್ ಎಸ್ ವೆಂಕಟೇಶ್ ಮೂರ್ತಿ ಹಾಗೂ ಯೋಗೀಶ್ An, ಗಾಯಕರು ಶಮೀರ್ ಮುಡಿಪು ಹಾಗೂ ಶಾಲಿನಿ ಎಸ್ ಆರ್, ವಸ್ತ್ರ ವಿನ್ಯಾಸ ಶರತ್ ಪೂಜಾರಿ ಮಂಗಳೂರು, ಪ್ರಸಾಧನ ಚರಣ್ ರಾಜ್ ಪಚ್ಚಿನಡ್ಕ, ಕಲಾ ವಿನ್ಯಾಸ ಹರೀಶ್ ಆಚಾರ್ಯ, ಸ್ಥಿರ ಚಿತ್ರಣ ನವನೀತ್ ವಿಠ್ಠಲ್, ಪ್ರಚಾರ ಕಲೆ ಯಶ್ವಿನ್ ಕೆ ಶೆಟ್ಟಿಗಾರ್ ಹಾಗೂ ನಿರ್ಮಾಣ ಮೇಲ್ವಿಚಾರಣೆಯನ್ನು ಭಾಗ್ಯರಾಜ್ ನಾವೂರು ನಿರ್ವಹಿಸಿದ್ದಾರೆ.

    ತಾರಾಗಣದಲ್ಲಿ ಸರಕಾರಿ ಹಿ.ಪ್ರಾ ಶಾಲೆ ಖ್ಯಾತಿಯ ದಡ್ಡ ಪ್ರವೀಣ ರಂಜನ್ ಕಾಸರಗೋಡು, ವೆನ್ಯ ರೈ, ಜ್ಯೋತಿಶ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ರಾಜ್ ಉಪ್ಪಳ, ಚೇತನ್ ರೈ ಮಾಣಿ, ರವಿ ರಾಮಕುಂಜ, ಸುರೇಶ್ ಮಂಜೇಶ್ವರ, ಪ್ರಭಾಕರ್ ಕಾಸರಗೋಡು , ತೇಜಸ್ವಿನಿ ಕಿಶೋರ್, ಸಂದೀಪ್ ಭಕ್ತ, ಆಶಾ ಮಾರ್ನಾಡ್, ನಯನ ಸಾಲ್ಯಾನ್, ದೀಕ್ಷಾ ಭಾಗ್ಯರಾಜ್ ನಾವೂರು, ವಿನೋದ್ ಶೆಟ್ಟಿ ಸಂಕೇತ್, ಉದಯ ಶೆಟ್ಟಿ ಇಡ್ಯಾ, ಉತ್ಸವ್ ವಾಮಂಜೂರ್, ತುಳಸೀಧರನ್, ಶಶಿ ಗುಜರನ್ ಪಡುಬಿದ್ರಿ ನಟಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಜಪೆ: ಅದ್ಯಪಾಡಿ ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಜಲಾವೃತ

    Published

    on

    ಬಜಪೆ ಸಮೀಪದ ಅದ್ಯಪಾಡಿ ಗ್ರಾಮದ ಸುಮಾರು 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದು, 80 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಲ್ಗುಣಿ ನದಿಗೆ ಮರವೂರಿನಲ್ಲಿ ನಿರ್ಮಸಿದ ಕಿಂಡಿ ಅಣೆಕಟ್ಟು ಈ ನೆರೆಗೆ ಕಾರಣವಾಗಿದೆ ಎಂದು ಜನರು ಆರೋಪಿಸಿದ್ದಾರೆ.

    ಕಳೆದ ಹತ್ತು ವರ್ಷದಿಂದ ಈ ಗ್ರಾಮದ ಜನರು ಮಳೆಗಾಲದಲ್ಲಿ ಸಂಕಷ್ಟಕ್ಕೆ ಗುರಿಯಾಗುತ್ತಿದ್ದು, ಸಮಸ್ಯೆಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅವೈಜ್ಞಾನಿಕವಾಗಿ ನಿರ್ಮಿಸಿದ ಕಿಂಡಿ ಅಣೆಕಟ್ಟಿನಿಂದ ಇಲ್ಲಿನ ರೈತರು ಈಗಾಗಲೇ ತಮ್ಮ ಕೃಷಿ ಕಳೆದುಕೊಂಡಿದ್ದಾರೆ. ಪ್ರತಿ ವರ್ಷ ಉಂಟಾಗುವ ನೆರೆಯಿಂದ ಮನೆಗಳೂ ಕುಸಿಯುವ ಭೀತಿ ಎದುರಾಗಿದೆ.

    ಈ ಗ್ರಾಮಕ್ಕೆ ಇಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿ ಜನರ ಸಂಕಷ್ಟ ಕೇಳಿದ್ದಾರೆ. ದೋಣಿಯ ಮೂಲಕ ಇಲ್ಲಿನ ಮನೆಗಳಿಗೆ ತೆರಳಿದ ಜಿಲ್ಲಾದಿಕಾರಿ ಮನೆಯಲ್ಲಿದ್ದ ವೃದ್ಧರಿಗೆ ಸಾಂತ್ವಾನ ಹೇಳಿದ್ದಾರೆ. ಸುಮಾರು 80 ಜನರು ಇಲ್ಲಿ ವಾಸವಾಗಿದ್ದು, ಜನರನ್ನು ಸ್ಥಳಾಂತರ ಮಾಡಿ ಸುರಕ್ಷಿತ ಜಾಗಕ್ಕೆ ಕಳುಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

    ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸ್ಥಳೀಯ ಜನರ ಬಳಿ ಮಾತನಾಡಿದ್ದು, ಅವರು ಪ್ರಮುಖ ಸಮಸ್ಯೆಯ ಬಗ್ಗೆ ಗಮನಕ್ಕೆ ತಂದಿದ್ದಾರೆ. ಆ ಬಗ್ಗೆ ಗಮನ ಹರಿಸಲಾಗುವುದು ಆದ್ರೆ ಅದಕ್ಕೂ ಮೊದಲು ಈಗ ಇವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ಹೇಳಿದ್ದಾರೆ.

    Continue Reading

    BANTWAL

    ವಿಟ್ಲದಲ್ಲಿ ಕುಸಿದು ಬಿದ್ದ ಕೋಳಿ ಶೆಡ್; 1500ಕ್ಕೂ ಅಧಿಕ ಕೋಳಿ ಸಾ*ವು

    Published

    on

    ವಿಟ್ಲ: ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2200 ಕೋಳಿಗಳನ್ನು ಅವರು ಸಾಕಾಣೆ ಮಾಡುತ್ತಿದ್ದರು.

    ಶೆಡ್ಡಿನ ಮೇಲ್ಚಾವಣಿ ಒಮ್ಮೆಲೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಮಾರು 1500 ಕೋಳಿಗಳು ಅದರಡಿಗೆ ಬಿದ್ದು ಸತ್ತುಹೋಗಿವೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾ*ಶವಾಗಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.

    Continue Reading

    DAKSHINA KANNADA

    ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ

    Published

    on

    ಮಂಗಳೂರು: ರೈಲ್ವೇ ಇಲಾಖೆಗೆ ಹೆಚ್ಚುವರಿ ರೈಲು ಓಡಿಸುವಂತೆ ಸಂಸದ ಬ್ರಿಜೇಶ್ ಚೌಟ ಮಾಡಿದ ಮನವಿಗೆ ನೈರುತ್ಯ ರೈಲ್ವೇ ಇಲಾಖೆ ಸ್ಪಂಧಿಸಿದೆ.

    ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದೆ. ಶುಕ್ರವಾರ ಹಾಗೂ ಶನಿವಾರದಂದು ತಲಾ ಒಂದು ಹಾಗೂ ಶನಿವಾರ ಹಾಗೂ ಭಾನುವಾರದಂದು ತಲಾ ಎರಡು ಹೆಚ್ಚುವರಿ ರೈಲು ಓಡಿಸುವ ಬಗ್ಗೆ ರೈಲ್ವೇ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

    ಮಂಗಳೂರು ಬೆಂಗಳೂರು ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಓಡಾಡುತ್ತಿದ್ದು, ಮಳೆಯ ಕಾರಣ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಶಿರಾಡಿ ಘಾಟ್, ಸಂಪಾಜೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಭಂದ ವಿಧಿಸಲಾಗಿದೆ. ಹೀಗಾಗಿ ಜನರ ಅಗತ್ಯತೆ ಪೂರೈಸಲು ಹೆಚ್ಚುವರಿ ರೈಲು ಓಡಿಸುವಂತೆ ಸಂಸದರು ರೈಲ್ವೇ ಇಲಾಖೆಗೆ ಪತ್ರ ಬರೆದಿದ್ದರು.

    ಸಂಸದರ ಪತ್ರ ಕೈ ಸೇರಿದ ಒಂದೇ ಘಂಟೆಯಲ್ಲಿ ನೈರುತ್ಯ ರೈಲ್ವೇ ಇಲಾಖೆ ಹೆಚ್ಚುವರಿ ರೈಲು ಓಡಿಸುವ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಹೆಚ್ಚುವರಿ ರೈಲು ಓಡಾಟದ ಸಮಯವನ್ನು ನಿಗಧಿ ಪಡಿಸಿದೆ. ಈ ಕಾರಣದಿಂದ ಮಾಮೂಲ ರೈಲಿನಲ್ಲಿ ಪ್ರಯಾಣಿಕರಿಗೆ ಸೀಟು ಸಿಗದ ಪರದಾಡುವುದು ಕೂಡಾ ತಪ್ಪಿದಂತಾಗಿದೆ.

    Continue Reading

    LATEST NEWS

    Trending