Connect with us

BELTHANGADY

ಬೆಳ್ತಂಗಡಿ: ಬಿಲ್ಲವ ಸಂಘಗಳ ಆಶ್ರಯದಲ್ಲಿ ‘ಆಟಿದ ಅಟಿಲ್ದ ಕೂಟ’ ಕಾರ್ಯಕ್ರಮ

Published

on

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ, ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಆಟಿದ ಅಟಿಲ್ದ ಕೂಟ ನಿನ್ನೆ ಬೆಳ್ತಂಗಡಿಯ ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ಜರಗಿತು.


ಸಂಘದ ಮಾಜಿ ಅಧ್ಯಕ್ಷ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಚಿದಾನಂದ ಪೂಜಾರಿ ಎಲ್ದಾಕ ಅಧ್ಯಕ್ಷತೆ ವಹಿಸಿದ್ದರು.


ಪಟ್ಟಣ ಪಂಚಾಯತು ಮುಖ್ಯ ಅಧಿಕಾರಿ ರಾಜೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧನಾರ್ತಿ ಶೃತಿ ಅಮೀನ್ ನಾಳ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಆಟಿ ಆಚರಣೆ ಮತ್ತು ವಿಶಿಷ್ಟತೆಯ ಬಗ್ಗೆ ಮಾತನಾಡಿದರು.

ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಜೀತಾ ವಿ. ಬಂಗೇರ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಸಂಘದ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು, ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶಾಂಭವಿ ಪಿ. ಬಂಗೇರ,

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು,ಬಿಲ್ಲವ ಮಹಿಳಾ ವೇದಿಕೆಯ ಪದಾಧಿಕಾರಿಗಳು ಸದಸ್ಯರು,ಯುವ ಬಿಲ್ಲವ ವೇದಿಕೆಯ ಸದಸ್ಯರು , ಮಹಿಳಾ ಬಿಲ್ಲವ ವೇದಿಕೆಯ ವಿವಿಧ ಗ್ರಾಮ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending