Thursday, October 21, 2021

ನೈತಿಕ ಪೊಲೀಸ್‌ಗಿರಿಗೆ ಹಾಲಿ ಶಾಸಕರ ನೇರ ಬೆಂಬಲ: ಮಾಜಿ ಶಾಸಕ ಅಭಯಚಂದ್ರ ಜೈನ್‌ ಆರೋಪ

ಮೂಡಬಿದ್ರೆ: ಹಿಂದೂ ಮಹಿಳೆಯರಿಬ್ಬರು ಮುಸ್ಲಿಂ ದಂಪತಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾರೆಂದು ಮಹಿಳೆಯರಿಗೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಆರೋಪಿಗಳನ್ನು ಸ್ವತಃ ಸ್ಥಳೀಯ ಹಾಲಿ ಶಾಸಕರು ಠಾಣೆಗೆ ತೆರಳಿ ತನ್ನ ಪ್ರಭಾವ ಬಳಸಿ ಬಿಡುಗಡೆಗೊಳಿಸಿದ್ದಾರೆ ಎಂದು ಮೂಲ್ಕಿ-ಮೂಡಬಿದ್ರೆಯ ಮಾಜಿ ಶಾಸಕ ಕೆ.ಅಭಯಚಂದ್ರ ಜೈನ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಈ ಮೂಲಕ ನೈತಿಕ ಪೊಲೀಸ್‌ಗಿರಿ ಬೆಂಬಲ ನೀಡಿದ್ದಾರೆ. ಈ ಘಟನೆಯನ್ನು ಆರೋಪಿ ತನ್ನ ಸ್ಟೇಟಸ್‌ನಲ್ಲಿ ಹಾಕಿ ಸಂಭ್ರಮಿಸಿ ಕಾನೂನಿಗೆ ಸವಾಲೊಡ್ಡಿದ್ದಾರೆ ಎಂದು ದೂರಿದರು. ಈಗಿನ ಶಾಸಕರು ಬೆಂಬಲ ನೀಡುತ್ತಿರುವುದರಿಂದ ಜನರಲ್ಲಿ ಭಯದ ವಾತಾವರಣ ಉಂಟಾಗಿದೆ ಎಂದರು.

ಈ ಬಗ್ಗೆ ಜಿಲ್ಲಾ ಪೊಲೀಸ್ ಕಮಿಷನರ್‌ಗೆ ದೂರು ನೀಡಲಾಗುವುದು. ಅಲ್ಲದೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯರ ಮೂಲಕ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಪುರಂದರ ದೇವಾಡಿಗ, ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಸುದ್ದಿಗೋಷ್ಠಿಯಲ್ಲಿ ಇದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...