Connect with us

DAKSHINA KANNADA

ಶಿರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಅಪ್ರಾಪ್ತನ ನೇಮಕ ವಿಚಾರ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

Published

on

ಉಡುಪಿ: ಉಡುಪಿಯ ಶಿರೂರು ಮಠದ ಪೀಠಾಧಿಪತಿಯಾಗಿ ಅಪ್ರಾಪ್ತರನ್ನು ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ ಪೀಠ, ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಮಠಗಳಲ್ಲಿ ಅಪ್ರಾಪ್ತರನ್ನು ಒತ್ತಾಯಪೂರ್ವಕವಾಗಿ ಸನ್ಯಾಸಿಗಳನ್ನಾಗಿ  ಮಾಡಲಾಗುತ್ತಿದೆಯಾದರೂ ಸರ್ಕಾರ ಮೂಕ ಪ್ರೇಕ್ಷಕನಂತೆ ಕೂರುವಂತಿಲ್ಲ.ಈ ಕುರಿತು ಪರಿಶೀಲನೆ ನಡೆಸಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.ಅರ್ಜಿದಾರರ ಪರ ವಕೀಲ ಡಿ.ಆರ್. ರವಿಶಂಕರ್ ವಾದ ಮಂಡಿಸಿ,16 ವರ್ಷದ ಬಾಲಕನನ್ನು ಪೀಠಾಧಿಪತಿಯಾಗಿ ನೇಮಕ ಮಾಡಲಾಗಿದ್ದು, ಬಲವಂತವಾಗಿ ಸನ್ಯಾಸಿಯನ್ನಾಗಿ  ಮಾಡಲಾಗಿದೆ. 18 ವರ್ಷ ತುಂಬದವರು ನೀಡುವ ಸಮ್ಮತಿಗೂ ಮಾನ್ಯತೆ ಇಲ್ಲ.

ಪ್ರಕರಣದಲ್ಲಿ ಅಪ್ರಾಪ್ತರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯಕ್ಕೆ ವಿವರಿಸಿದರು. ಅಲ್ಲದೆ, ಅರ್ಜಿಯಲ್ಲಿರುವ ಮನವಿಗಳನ್ನು ತಿದ್ದುಪಡಿ ಮಾಡಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.ಶಿರೂರು ಮಠದ ಆಡಳಿತಾತ್ಮಕ, ಆರ್ಥಿಕ, ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ನಿಯಂತ್ರಣ ಸಾಧಿಸಲು ಸೋದೆ ಮಠಕ್ಕೆ ಅವಕಾಶವಿಲ್ಲ.

ಹೀಗಿದ್ದರೂ, ಪೀಠಾಧಿಪತಿ ನೇಮಕ ವಿಚಾರದಲ್ಲಿ ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಧ್ಯಪ್ರವೇಶಿಸಿರುವುದು ಕಾನೂನು ಬಾಹಿರ.

ಶಿರೂರು ಮಠದ ಪೀಠಾಧಿಪತಿ ಸ್ಥಾನಕ್ಕೆ ಯಾವುದೇ ವ್ಯಕ್ತಿಯನ್ನು ನೇಮಕ ಮಾಡಲು ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ಘೋಷಿಸಬೇಕು.

ಜೊತೆಗೆ, ಅಪ್ರಾಪ್ತರನ್ನು ಶಿರೂರು ಮಠದ ಪೀಠಾಧಿಪತಿಯಾಗಿ ನೇಮಕ ಮಾಡಿರುವುದು ಕಾನೂನುಬಾಹಿರ ಎಂಬುದಾಗಿ ಘೋಷಣೆ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.ಈ ವೇಳೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ಅರ್ಜಿಯಲ್ಲಿ ಅಪ್ರಾಪ್ತರ ಹಕ್ಕುಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಸರ್ಕಾರ ಈ ವಿಚಾರದಲ್ಲಿ ಮೂಕ ಪ್ರೇಕ್ಷಕನಂತೆ ವರ್ತಿಸಬಾರದು ಎಂದು ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು. ಅಲ್ಲದೆ, ತಿದ್ದುಪಡಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ನೀಡಿ, ವಿಚಾರಣೆಯನ್ನು ಜೂ.2ಕ್ಕೆ ಮುಂದೂಡಿದೆ…

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending