Monday, January 24, 2022

ಮದುವೆ ಮನೆಯಿಂದ 4 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ

ಹಾಸನ: ಮದುವೆಯ ಮನೆಯಲ್ಲಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನದಲ್ಲಿ ನಡೆದಿದೆ.


ಹಾಸನದ ರಿಂಗ್ ರಸ್ತೆಯಲ್ಲಿರುವ ಉದ್ಯಮಿ ರಘು ಎಂಬುವರ ಮನೆಯಲ್ಲಿ ಮುಂದಿನ ತಿಂಗಳು 1 ಮತ್ತು 2 ರಂದು, ಮದುವೆ ಸಮಾರಂಭ ನಡೆಯಲಿದೆ.

ಇದಕ್ಕೆಂದು ಬ್ಯಾಂಕಿನಲ್ಲಿ ಇಟ್ಟಿದ್ದ ಒಡವೆಗಳನ್ನು ಬಿಡಿಸಿಕೊಂಡು ಮನೆಗೆ ತಂದಿದ್ದರು.

ಮದುವೆ ಕಾರ್ಯಕ್ಕೆ ಕುಟುಂಬಸ್ಥರು ಓಡಾಡುತ್ತಿದ್ದರು. ಜೊತೆಗೆ ಗ್ರಾನೈಟ್‌ ಉದ್ಯಮಿಯಾಗಿರುವ ರಘು ಅವರು ತಮ್ಮ ಉದ್ದಿಮೆಯಲ್ಲಿ ಬಂದಂತ ಹಣವನ್ನು ಕೂಡ ಮದುವೆ ಖರ್ಚಿಗೆಂದು ಮನೆಯಲ್ಲಿ ತಂದಿಟ್ಟಿದ್ದರು.

ಆದರೆ ನಿನ್ನೆ ರಾತ್ರಿ ಮನೆಯ ಮುಂಭಾಗ ಮತ್ತು ಹಿಂಭಾಗದ ಬಾಗಿಲನ್ನು ಕಬ್ಬಿಣದ ಹಾರೆಯಿಂದ ಮೀಟಿ ಮನೆಯಲ್ಲಿದ್ದ ಸುಮಾರು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ.
ಪರಿಚಯಸ್ಥರಿಂದಲೇ ಕೃತ್ಯದ ಶಂಕೆ
ಮೇಲ್ನೋಟಕ್ಕೆ ಚಿನ್ನಾಭರಣ ಬಿಡಿಸಿಕೊಂಡು ಬಂದಿರುವುದು ಹಾಗೂ ಉದ್ದಿಮೆಯಿಂದ ಬಂದ ಲಾಭದ ಹಣವನ್ನು ಮನೆಯಲ್ಲಿ ಇಟ್ಟಿರುವುದನ್ನು ಕೆಲವರು ಗಮನಿಸಿರಬಹುದು.

ಮನೆಯಲ್ಲಿ ಹಣ ಮತ್ತು ಒಡವೆ ಇಟ್ಟಿರುವ ವಿಚಾರ ತಿಳಿದು ಪರಿಚಯಸ್ಥರೋ ಅಥವಾ ಕುಟುಂಬದವರಿಗೆ ವಿಚಾರ ಗೊತ್ತಿರುವವರೇ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

Hot Topics

ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1ಕೆ.ಜಿ, 300ಗ್ರಾಂ ಚಿನ್ನ ವಶಕ್ಕೆ

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ...

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...