Connect with us

LATEST NEWS

ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜ್ ವಿಡಿಯೋ ಸಂತ್ರಸ್ಥೆ ವಿದ್ಯಾರ್ಥಿನಿಯ ನ್ಯಾಯಕ್ಕಾಗಿ ABVP ಪ್ರತಿಭಟನೆ..!

Published

on

ವಿವಿಧ ಸಂಘಟನೆಗಳು ಘಟನೆಯ ಕುರಿತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದು  ಘಟನೆಯನ್ನು ಖಂಡಿಸಿ  ಇಂದು  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವತಿಯಿಂದ ನಗರದ ಹುತಾತ್ಮರ ಸ್ಮಾರಕದ ಬಳಿ  ಪ್ರತಿಭಟನೆ ನಡೆಯಿತು.

ಉಡುಪಿ : ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ವಿವಾದ ಎಲ್ಲೆಡೆ  ಭಾರೀ ಸದ್ದು ಮಾಡ್ತ ಇದೆ. ಈ ಮಧ್ಯೆ ರಾಷ್ಡ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಸಹಿತ, ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಕಾಲೇಜ್ ಗೆ ಭೇಟಿ ನೀಡಿ  ಆಡಳಿತ ಮಂಡಳಿ  ಹಾಗು ಪೊಲೀಸ್ ರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ವಿವಿಧ ಸಂಘಟನೆಗಳು ಘಟನೆಯ ಕುರಿತು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿವೆ. ಇವೆಲ್ಲದರ ಮಧ್ಯೆ ಘಟನೆಯನ್ನು ಖಂಡಿಸಿ  ಇಂದು  ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವತಿಯಿಂದ ನಗರದ ಹುತಾತ್ಮರ ಸ್ಮಾರಕದ ಬಳಿ  ಪ್ರತಿಭಟನೆ ನಡೆಯಿತು.

ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದ  ವಿದ್ಯಾರ್ಥಿಗಳು ಪ್ರಕರಣದ ವಿಚಾರವಾಗಿ ಸೂಕ್ತ ತನಿಖೆ ನಡೆಯಬೇಕು.

ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದರು, ಎಸ್ ಪಿ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದರು.

ಎಸ್‌ಪಿ ಹಾಕೆ ಮಚೀಂದ್ರ ಅವರು ಅಗಮಿಸಿ ಮನವಿ ಸ್ವೀಕರಿಸಿದರು. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಎಸ್‌ಪಿ ತಿಳಿಸಿದರು.

ಇದೇ ವೇಳೆ ಮಾಧ್ಯಮದವರ ಜತೆ ಮಾತನಾಡಿದ ವಿದ್ಯಾರ್ಥಿಗಳು ತನಿಖಾ ತಂಡವನ್ನು ಬದಲಾಯಿಸ ಬೇಕು ಹಾಗೂ ಪ್ರತೀ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆಪ್ತ ಸಹಾಯವಾಣಿಯನ್ನು ತೆರೆಯ ಬೇಕೆಂದು ಒತ್ತಾಯಿಸಿದರು.

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದಾರೆ. ಜೊತೆಗೆ ಬಗೆ ಬಗೆಯ ಕಾಮೆಂಟ್​ ಬರೆಯುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Published

on

ಕುಂದಾಪುರ: ಇನೋವಾ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಡೆದಿದೆ. ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ 25 ವರ್ಷದ ಕೀರ್ತಿ ಮೃತ ಯುವತಿ. ಘಟನೆಯಲ್ಲಿ ಬೆಂಗಳೂರು ಮೂಲದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ..; ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

ಧರ್ಮಸ್ಥಳದಿಂದ ಮುರುಡೇಶ್ವರಕ್ಕೆ ಹೊರಟಿದ್ದ ಇನೋವಾ ಕಾರು ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಟ್ಟಾಗಿ ಮುರ್ಡೇಶ್ವರ, ಗೋಕರ್ಣಕ್ಕೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

accident

Continue Reading

LATEST NEWS

Trending