Connect with us

LATEST NEWS

ಕುಂದಾಪುರ: ಸರ್ಕಾರಿ ಬಸ್‌ಗಾಗಿ ABVP ವಿದ್ಯಾರ್ಥಿಗಳ ಪ್ರತಿಭಟನೆ

Published

on

ಕುಂದಾಪುರ: ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಕೊಲ್ಲೂರಿನಲ್ಲಿ ಇದುವರೆಗೂ ಕೂಡ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಇಲ್ಲದಿದ್ದುದರಿಂದ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಕುಂದಾಪುರದಲ್ಲಿ ಸುರಿಯುವ ಮಳೆಯನ್ನು ಲೆಕ್ಕಿಸದೇ ಇಂದು ಪ್ರತಿಭಟನೆ ನಡೆಸಿದರು.


ದೂರದ ಕೊಲ್ಲೂರಿನಿಂದ ಕುಂದಾಪುರಕ್ಕೆ ಸಾವಿರಾರು ವಿದ್ಯಾರ್ಥಿಗಳು ದಿನನಿತ್ಯ ಶಾಲೆ-ಕಾಲೇಜಿಗೆ ತೆರಳಲು ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಇಲ್ಲ.

ಸಾವಿರಾರು ವರ್ಷದ ಇತಿಹಾಸವಿರುವ ಕೊಲ್ಲೂರಿಗೆ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಇಲ್ಲದಿರುವುದು ಅತ್ಯಂತ ದುಃಖದ ವಿಷಯ ಹಾಗೂ ಸರಕಾರವು ಈ ಪ್ರಸಿದ್ಧ ಸ್ಥಳಕ್ಕೆ ಇಂದಿಗೂ ಯಾವುದೇ ಸರಕಾರಿ ಬಸ್ಸಿನ ವ್ಯವಸ್ಥೆ ಮಾಡದೇ ಇರುವುದು ಒಂದು ಅತ್ಯಂತ ಗಂಭೀರವಾದ ಹಾಗೂ ಮುಜುಗರದ ವಿಷಯವಾಗಿದೆ.

ಇದೇ ರೀತಿ ಕೆರಾಡಿ – ಮಾರಣಕಟ್ಟೆ ಕುಂದಾಪುರ ಮಾರ್ಗದಲ್ಲಿ 500 ಮತ್ತು ಕೆರಾಡಿ-ಬೆಳ್ಳಾಲ-ಕುಂದಾಪುರ ಮಾರ್ಗದಲ್ಲಿ 400 ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆಯಿಂದ ವಂಚಿತರಾಗಿದ್ದಾರೆ.

ಈಗಾಗಲೇ ಈ ಮಾರ್ಗದಲ್ಲಿ ಪರವಾನಗಿ ಇದ್ದರೂ ಸಹ ಯಾವುದೇ ಕೆ.ಎಸ್.ಆರ್.ಟಿ.ಸಿ ಬಸ್ ಗಳು ಇದುವರೆಗೂ ಸಂಚರಿಸುತ್ತಿಲ್ಲ.

ಈ ಸಮಸ್ಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು, ಶಾಸಕರು, ಮಂತ್ರಿಗಳು ಹಾಗೂ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದು ಯಾವುದೇ ಪ್ರಯೋಜನವಾಗಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಬೈಂದೂರು ಶಾಸಕರು ಕೂಡ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದರು.

ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಈ ಸಮಸ್ಯೆಯನ್ನು ಬಗೆಹರಿಸದ್ದಿದ್ದಲ್ಲಿ ತಾಲೂಕು ಮಟ್ಟದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ 5000ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ಡಿಪೋ ಮುಂದೆ ಧರಣಿ ಮಾಡಿ ಕೆ.ಎಸ್.ಆರ್.ಟಿ.ಸಿ ಎಲ್ಲಾ ಮಾರ್ಗದ ಬಸ್ ಗಳನ್ನು ತಡೆಹಿಡಿಯಲಿದೆ.

ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುವ ಸಮಸ್ಯೆಗಳಿಗೆ ಅಧಿಕಾರಿಗಳೇ ನೇರ ಹೊಣೆ ಎಂದು‌ ವಿದ್ಯಾರ್ಥಿಗಳು ಆಕ್ಷೋಷ ವ್ಯಕ್ತಪಡಿಸಿದರು. ಸಮಸ್ಯೆ ಪರಿಹಾರಕ್ಕೆ ವಾರಗಳ ಗಡುವು ನೀಡಲಾಯಿತು.

ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ವತಿಯಿಂದ ಕುಂದಾಪುರ ತಹಶಿಲ್ದಾರ್ ಕಿರಣ್ ಗೌರಯ್ಯ‌‌ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿ ಮಾತನಾಡಿದ ಅವರು, ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇನೆ. ಕೆ.ಎಸ್.ಆರ್.ಟಿ.ಸಿ‌ ಅಧಿಕಾರಿಗಳ ಬಳಿ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದರು.

ಪ್ರತಿಭಟನೆಯಲ್ಲಿ ಎಬಿವಿಪಿ ಕುಂದಾಪುರ ತಾಲೂಕು ಸಂಚಾಲಕ ಜಯಸೂರ್ಯ ಶೆಟ್ಟಿ, ತಾಲೂಕು ವಿದ್ಯಾರ್ಥಿನಿ ಪ್ರಮುಖ್ ಧ್ವನಿ, ಭಂಡರ್‌ಕಾರ್ಸ್‌ ಕಾಲೇಜಿನ ವಿದ್ಯಾರ್ಥಿಗಳಾದ ನಾಗೇಶ್, ಶ್ರೀನಿಧಿ, ಬಿ.ಬಿ. ಹೆಗ್ಡೆ ಕಾಲೇಜಿನ ಅನುಷಾ, ಪ್ರಥ್ವಿ, ಕಿಶನ್, ಬಸ್ರೂರು ಶಾರದಾ ಕಾಲೇಜಿನ ದೀಪಾ, ರಂಜಿತ್, ಕೋಟೇಶ್ವರ ಕಾಲೇಜಿನ‌ ಅಭಿ, ಆರ್.ಎನ್ ಶೆಟ್ಟಿ ಕಾಲೇಜಿನ ನಿತಿನ್, ಸುಜನ್ ಮೊದಲಾದವರಿದ್ದರು.

Click to comment

Leave a Reply

Your email address will not be published. Required fields are marked *

bengaluru

ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು

Published

on

ಬೆಂಗಳೂರು : ಬಿಗ್​ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಇದರಿಂದಾಗಿ ವಿನಯ್‌ ತೀರಾ ಡಲ್‌ ಆಗ್ಬಿಟ್ಟರು. ಬಾತ್‌ರೂಮ್‌ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್‌’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.

Continue Reading

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

bangalore

ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..


ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ  ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..

Continue Reading

LATEST NEWS

Trending