Sunday, May 16, 2021

ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಎ.ಸಿ ಸ್ಪೋಟ: 16 ರೋಗಿಗಳು ಗಂಭೀರ..!

ಗುಜರಾತ್ : ಕಳೆದ 3 ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯೊಂದರಲ್ಲಿ  ಬೆಂಕಿ ಅವಘಡ ಸಂಭವಿಸಿ, 13 ಕೊರೊನಾ ರೋಗಿಗಳು ಸಜೀವ ದಹನವಾಗಿದ್ದರು.ಇದರ ಬೆನ್ನಲ್ಲೇ ಗುಜರಾತ್ ನಲ್ಲಿ ಕೂಡ ಅದೇ ರೀತಿಯ ಘಟನೆ ಭಾನುವಾರ ರಾತ್ರಿ ನಡೆದಿದೆ. ಗುಜರಾತ್‍ನ ಸೂರತ್‍ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ  ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು 10 ಮಂದಿಯನ್ನು ರಕ್ಷಿಸಲಾಗಿದ್ದು, 16 ಮಂದಿ ಕೊರೊನಾ ರೋಗಿಗಳ ಪರಿಸ್ಥಿತಿ ಗಂಭೀರವಾಗಿದೆ.  ಅನಾಹುತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೂರತ್ ನ ಆಯುಷ್ ಆಸ್ಪತ್ರೆಯ 5ನೇ ಮಹಡಿಯ ತೀವ್ರ ನಿಗಾ ಘಟಕದಲ್ಲಿ ಹವಾ ನಿಯಂತ್ರಿತ ಘಟಕದಲ್ಲಿ ಸ್ಫೋಟ ಸಂಭವಿಸಿ ಈ ದುರ್ಘಟನೆ ನಡೆದಿದೆ.  ಭಾನುವಾರ ರಾತ್ರಿ 11.45ರ ಸುಮಾರಿಗೆ ಬೆಂಕಿ ಅವಘಡ ನಡೆದಿದ್ದು, ತಕ್ಷಣ ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಇಲ್ಲಿ ಐಸಿಯುನಲ್ಲಿ 16 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಅವರೆಲ್ಲರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬೆಂಕಿ ಹತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಐಸಿಯುನಲ್ಲಿದ್ದ ಕೊರೊನಾ ರೋಗಿಗಳನ್ನು ರಕ್ಷಿಸಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ..

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...