Connect with us

    LATEST NEWS

    ಆಭರಣ ಮಳಿಗೆಯಲ್ಲಿ ಎಸಿ ಸ್ಫೋಟ; ಮೂವರಿಗೆ ಗಂ*ಭೀರ ಗಾಯ

    Published

    on

    ಬಳ್ಳಾರಿ :ಎಸಿ ಸ್ಫೋ*ಟಗೊಂಡ ಪರಿಣಾಮ ಮೂವರು ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್‍ನಲ್ಲಿ ನಡೆದಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

    ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘ*ಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾ*ಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

    ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!

    ಸ್ಫೋ*ಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಘಟನೆಯಿಂದಾಗಿ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋ*ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

    LATEST NEWS

    ಜಮೀನಿನಲ್ಲಿ ರಸ್ತೆ ವಿಚಾರವಾಗಿ ಅಣ್ಣ-ತಮ್ಮಂದಿರ ಗಲಾಟೆ; ಕೊ*ಲೆಯಲ್ಲಿ ಅಂತ್ಯ

    Published

    on

    ಮಂಗಳೂರು/ಚಿಕ್ಕೋಡಿ : ಜಮೀನಿನಲ್ಲಿ ರಸ್ತೆ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು, ಓರ್ವನ ಕೊ*ಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದೆ. ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಹೊರವಲಯದ ನೇಜ – ಶಮನೇವಾಡಿ ರಸ್ತೆ ಬಳಿ ನಡೆದಿದೆ. ಸುನೀಲ್ ಖೋತ್ (45) ಕೊ*ಲೆಯಾದವನು.

    ಸುನೀಲ್ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ರಸ್ತೆ ವಿಚಾರವಾಗಿ ಕಲಹ ಇತ್ತು. ಇಂದು(ಅ.6) ದೂರು ನೀಡಲು ಪೊಲೀಸ್ ಠಾಣೆಗೆ ಅಣ್ಣ- ತಮ್ಮಂದಿರು ತೆರಳಿದ್ದರು. ಸಂಜೆ ರಾಜಿ ಪಂಚಾಯ್ತಿ ಮಾಡೋಣ ಎಂದ್ಹೇಳಿ ಪೊಲೀಸರು ಕಳುಹಿಸಿದ್ದರು.

    ಇದನ್ನೂ ಓದಿ : ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಗೆ ಮತ್ತೊಂದು ಆಘಾ*ತ!

    ಸಂಜೆ ಮತ್ತೆ ಗಲಾಟೆ‌ ಪ್ರಾರಂಭವಾಗಿದೆ. ಈ ವೇಳೆ ಸುನೀಲ್ ಖೋತ್ ಕೊ*ಲೆಗೀಡಾಗಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾದ ವಿದ್ಯಾರ್ಥಿ

    Published

    on

    ಮುರುಡೇಶ್ವರ: ಸಮುದ್ರಕ್ಕೆ ಈಜಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ನೀರು ಪಾಲಾಗಿದ್ದು, ಮತ್ತೋರ್ವನನ್ನು ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಈ ಘಟನೆ ನಡೆದಿದ್ದು, ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ. ವಿದ್ಯಾರ್ಥಿಗಳು ಬೆಂಗಳೂರು ಮೂಲದವರಾಗಿದ್ದು ಪ್ರವಾಸಕ್ಕೆ ಮುರುಡೇಶ್ವರಕ್ಕೆ ಬಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ.


    ಇತ್ತೀಚಿನ ದಿನಗಳಲ್ಲಿ ಪ್ರವಾಸಕ್ಕೆ ಬಂದ ಯುವಕರು ಸಮುದ್ರದಲ್ಲಿ ಹುಚ್ಚಾಟ ಆಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಸಮುದ್ರದ ಅಲೆಗಳ ಹೊಡೆತದ ವಿಚಾರ ತಿಳಿಯದೆ ಸಮುದ್ರಕ್ಕೆ ಇಳಿದು ಅಲೆಗಳ ಜೊತೆ ಸಮುದ್ರ ಪಾಲಾದ ಸಾಕಷ್ಟು ಘಟನೆಗಳು ಕೂಡಾ ನಡೆದಿದೆ. ಸೂಚನಾ ಫಲಕಗಳು ಇದ್ದರೂ ಲೆಕ್ಕಿಸಿದೆ ಅಪಾಯಕಾರಿ ಸ್ಥಳದಲ್ಲಿ ಸಮುದ್ರದಲ್ಲಿ ಈಜಲು ಹೋಗಿ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ.
    ಮುರುಡೇಶ್ವರದ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ವಿದ್ಯಾಸೌಧ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕೂಡಾ ಇದೇ ರೀತಿಯಾಗಿ ಹುಚ್ಚಾಟ ಆಡಲು ಹೋಗಿ ಸಮುದ್ರ ಪಾಲಾಗಿದ್ದಾರೆ. 220 ವಿದ್ಯಾರ್ಥಿಗಳಿದ್ದ ತಂಡದಲ್ಲಿ ಗೌತಮ್‌ ಮತ್ತು ಧನುಷ್ ಎಂಬಿಬ್ಬರು ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಇಬ್ಬರೂ ನೀರು ಪಾಲಾಗಿದ್ದು ಧನುಷ್‌ನನ್ನು ಸ್ಥಳೀಯ ರಕ್ಷಣಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆದ್ರೆ 17 ವರ್ಷದ ಗೌತಮ್‌ ಮೃತ ಪಟ್ಟಿದ್ದಾನೆ. ಸಮುದ್ರದ ಅಲೆಯಲ್ಲಿ ಮೋಜು ಮಸ್ತಿ ಮಾಡುವ ಸಂದರ್ಭದಲ್ಲಿ ಅಲೆಯ ರಭಸಕ್ಕೆ ಕೊಚ್ಚಿ ಹೋಗಿರುವ ಪರಿಣಾಮ ಈ ಘಟನೆ ನಡೆದಿದೆ. ಸ್ಥಳಕ್ಕೆ ಮುರುಡೇಶ್ವರ ಪೋಲಿಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

    Continue Reading

    LATEST NEWS

    ಬೃಹತ್ ಮಟ್ಟದ ಅಗ್ನಿ ಅವಘಡ; ಮೂವರು ಮಕ್ಕಳ ಸಹಿತ ಒಂದೇ ಕುಟುಂಬದ ಏಳು ಜನ ಸಜೀವ ದಹನ ..!!

    Published

    on

    ಮಂಗಳೂರು/ಮುಂಬೈ: ಒಂದೇ ಅಂತಸ್ತಿನ ಕಟ್ಟಡದಲ್ಲಿ  ಅಗ್ನಿ ಅವಘಡ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ (ಅಕ್ಟೋಬರ್ 6, 2024) ಮುಂಬೈನ ಸಿದ್ಧಾರ್ಥ್ ಕಾಲೋನಿ, ಕೆಎನ್ ಗಾಯಕ್ವಾಡ್ ಮಾರ್ಗ್, ಚೆಂಬೂರ್ ಪೂರ್ವದಲ್ಲಿ ನಡೆದಿದೆ.

    ಪ್ರೆಸಿ ಪ್ರೇಮ್ ಗುಪ್ತಾ (6), ಮಂಜು ಪ್ರೇಮ್ ಗುಪ್ತಾ (30), ಅನಿತಾ ಧರ್ಮದೇವ್ ಗುಪ್ತಾ (39), ಪ್ರೇಮ್ ಚೇದಿರಾಮ್ ಗುಪ್ತಾ (30), ನರೇಂದ್ರ ಗುಪ್ತಾ (10), ವಿಧಿ ಚೇದಿರಾಮ್ ಗುಪ್ತಾ (15), ಮತ್ತು ಗೀತಾದೇವಿ ಧರ್ಮದೇವ್ ಗುಪ್ತಾ (60) ಮೃತಪಟ್ಟವರು.


    “ಭಾನುವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಈ ಅನಾಹುತ ಸಂಭವಿಸಿದೆ. ಆರಂಭದಲ್ಲಿ ನೆಲಮಹಡಿಯಲ್ಲಿರುವ ವಿದ್ಯುತ್ ವಸ್ತುಗಳನ್ನು ಹೊಂದಿರುವ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಬಳಿಕ ಕುಟುಂಬ ವಾಸಿಸುತ್ತಿದ್ದ ಮೇಲಿನ ಮಹಡಿಗೆ ಹರಡಿತು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ನ ಅಧಿಕಾರಿಗಳಿಂದ ಪಡೆದ ಪ್ರಾಥಮಿಕ ಮಾಹಿತಿಯ ಪ್ರಕಾರ, ಮುಂಜಾನೆ 5.20 ರ ಸುಮಾರಿಗೆ ಈ ಘಟನೆ ನಡೆದಿದೆ. ಎಲೆಕ್ಟ್ರಿಕ್ ವೈರಿಂಗ್ ಮತ್ತು ಎಲೆಕ್ಟ್ರಿಕಲ್ ವಸ್ತುಗಳನ್ನು ಹೊಂದಿದ್ದ ನೆಲ ಮಹಡಿಯಲ್ಲಿರುವ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡು ನಂತರ ಆ ಬೆಂಕಿ ಇತರ ಗೃಹೋಪಯೋಗಿ ಉಪಕರಣಗಳಿಗೆ ವ್ಯಾಪಿಸಿದೆ. ಅದಾದ ಬಳಿಕ ಮೇಲಿನ ಮಹಡಿಗೆ ಬೆಂಕಿ ವ್ಯಾಪಿಸಿದ್ದು, ಒಂದು ಮನೆಯಲ್ಲಿ ಏಳು ಮಂದಿ ಕುಟುಂಬ ಸದಸ್ಯರು ವಾಸಿಸುತ್ತಿದ್ದರು. ಆ ಮನೆಯ ಒಳಗೂ ಬೆಂಕಿ ತಗುಲಿ ಅವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ಬಿಎಂಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಎರಡು ಜಂಬೂ ಟ್ಯಾಂಕರ್‌ಗಳು. ಒಂದು ಸುಧಾರಿತ ನೀರಿನ ಟ್ಯಾಂಕರ್ ಟೆಂಡರ್ ಸಹ ಸ್ಥಳದಲ್ಲಿದ್ದು, ಸಹಾಯಕ ಕಮಿಷನರ್, ಸಹಾಯಕ ಇಂಜಿನಿಯರ್ ಮತ್ತು ಹತ್ತು ಕಾರ್ಮಿಕರು ಸೇರಿದಂತೆ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದರು.

     

    Continue Reading

    LATEST NEWS

    Trending