Saturday, February 4, 2023

 ರೈತರ ಮನೆ ನಂಬ್ರಕ್ಕಾಗಿ ಲಂಚ; ಎಸಿಬಿ ಅಧಿಕಾರಿಗಳ ಬಲೆಗೆ ಪಿಡಿಒ..! 

 ರೈತರ ಮನೆ ನಂಬ್ರಕ್ಕಾಗಿ ಲಂಚ;ಎಸಿಬಿ ಅಧಿಕಾರಿಗಳ ಬಲೆಗೆ ಪಿಡಿಒ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕುಕ್ರಿ ಗ್ರಾಮದ ರೈತರರೊಬ್ಬರಿಂದ ಮನೆ ಸಂಖ್ಯೆ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಒಬ್ಬರು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.

ಜಾನ್ಮನೆ ಗ್ರಾಮ ಪಂಚಾಯ್ತಿ ಪಿಡಿಓ ಕೃಷ್ಣಪ್ಪ ಯಲಗಲಿ ಎಸಿಬಿ ಬಲೆಗೆ ಬಿದ್ದ ವ್ಯಕ್ತಿಯಾಗಿದ್ದಾನೆ. ಸುಧೀಂದ್ರ ಹೆಗಡೆ ಎಂಬುವವರು 2014ರಲ್ಲಿ ಹೊಸ ಮನೆ ಕಟ್ಟಿಸಿದ್ದರು.

ಅದಕ್ಕೆ ಸಂಖ್ಯೆ ನೀಡಲು ಪಿಡಿಓ 15 ಸಾವಿರ ಹಣದ ಬೇಡಿಕೆ ಇಟ್ಟಿದ್ದಾಗಿ ಸುಧೀಂದ್ರ ಎಸಿಬಿಗೆ ದೂರು ನೀಡಿದ್ದರು.

ಶನಿವಾರ ಸುಧೀಂದ್ರ ಅವರು ಲಂಚ ನೀಡುವಾಗ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಪಿಡಿಓ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆಯಿತು. ಪಿಡಿಓ ಮೇಲೆ ಈ ಹಿಂದೆಯೂ ಕೆಲ ದೂರು ಬಂದಿತ್ತು. ಈಗ ಸಾಕ್ಷಿ ಸಮೇತ ವಶಕ್ಕೆ ಪಡೆಯಲಾಯಿತು ಎಂದು ಶ್ರೀಕಾಂತ್ ತಿಳಿಸಿದ್ದಾರೆ..

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಅಮೇರಿಕದಲ್ಲಿ ಭಾರಿ ಬೆಂಕಿ ದುರಂತ : ಕಾಡ್ಗಿಚ್ಚಿಗೆ 13 ಬಲಿ – ಸಾವಿರಾರು ಎಕರೆ ಅರಣ್ಯ ಬೆಂಕಿಗೆ ಆಹುತಿ..!

ಚಿಲಿ : ದಕ್ಷಿಣ ಅಮೇರಿಕದ ಚಿಲಿ ರಾಜಧಾನಿಯ ಸ್ಯಾಂಟಿಯಾಗೋ ಸಮೀಪ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು, ಕಾಡ್ಗಿಚ್ಚಿನ ಕಾರಣದಿಂದ ಸಾವಿರಾರು ಎಕರೆ ಅರಣ್ಯ ಹೊತ್ತಿ ಉರಿದು, 13ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 35,000 ಎಕರೆ ಪ್ರದೇಶ...

ಮಂಗಳೂರು : ಸುರತ್ಕಲಿನಿಂದ ಕೆಲಸಕ್ಕೆ ತೆರಳಿದ್ದ ಯುವತಿ ಕಾವೇರಿ ಮಿಸ್ಸಿಂಗ್..!

ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ತಡಂಬೈಲ್‌ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು ತಿಳಿದು ಬಂದಿದೆ.ಜ.27ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು...

ಮುಲ್ಕಿ : ಇಬ್ಬರ ಸಾವಿಗೆ ಕಾರಣರಾದ ತುಳು ಕಾಮಿಡಿಯನ್ ಅರ್ಪಿತ್ ಅರೆಸ್ಟ್..!

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರುಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ...