Saturday, July 2, 2022

ಬೆಳ್ತಂಗಡಿ: ಪಿಡಿಓ ಲಂಚ ಸ್ವೀಕರಿಸುತ್ತಿದ್ದಾಗ ACB ರೈಡ್‌-ವಶಕ್ಕೆ

ಬೆಳ್ತಂಗಡಿ: ತಾಲೂಕಿನ ಮಲಾಡಿ ಗ್ರಾಪಂ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.


ಮಲಾಡಿ ಗ್ರಾಮ ಪಂಚಾಯತ್ ಕಚೇರಿಯೊಳಗೆ ಪಿಡಿಓ ರವಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳು ಅವರನ್ನು ಸೆರೆ ಹಿಡಿದಿದ್ದಾರೆ.

ಜಾಗದ 9/11 ಫಾರ್ಮ್‌ ಮಾಡಲು 15,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದ‌.ಕ‌.ಭ್ರಷ್ಟಾಚಾರ ನಿಗ್ರಹ ದಳ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಪಿಡಿಒ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಭರತ್‌ ಶೆಟ್ಟಿ

ಸುರತ್ಕಲ್‌: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಪರಿಶೀಲಿಸಲು ಶಾಸಕರಾದ ಡಾ.ಭರತ್ ಶೆಟ್ಟಿ ನಿನ್ನೆ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ...

ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಕೊನೆಯುಸಿರು

ಪುತ್ತೂರು: ವಿದ್ಯುತ್ ಶಾಕ್ ಹೊಡೆದು 4 ವರ್ಷದ ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇಂದು ನಡೆದಿದೆ.ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಎಂಬವರ ನಾಲ್ಕು ವರ್ಷದ ಮಗು ವಿದ್ಯುತ್ ಶಾಕ್‌ನಿಂದ...

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತ: ವಾಹನ ಸವಾರರ ಪರದಾಟ

ಸುಳ್ಯ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಇದರಿಂದ ಹೆದ್ದಾರಿಯಲ್ಲಿ ಸ್ವಲ್ಪ ಪ್ರಮಾಣದ ಟ್ರಾಫಿಕ್‌ ಜಾಂ ಉಂಟಾಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಮಡಿಕೇರಿ ತಾಲೂಕಿನ ಮದೆನಾಡು-ಜೋಡುಪಾಲ ನಡುವೆ ರಸ್ತೆಗೆ ಮಣ್ಣು ಕುಸಿದಿದೆ.ಚರಂಡಿಗೆ ಮಣ್ಣು ಬಿದ್ದಿದ್ದರಿಂದ...