Home ಕರ್ನಾಟಕ ವಾರ್ತೆ ಬೆಳ್ಳಂ-ಬೆಳಗ್ಗೆ ಭ್ರಷ್ಟ ಪೊಲೀಸ್ ಅಧಿಕಾರಿಗಳ ಮನೆಗೆ ನುಗ್ಗಿ ಧಾಳಿ ಮಾಡಿದ ಎಸಿಬಿ…

ಬೆಳ್ಳಂ-ಬೆಳಗ್ಗೆ ಭ್ರಷ್ಟ ಪೊಲೀಸ್ ಅಧಿಕಾರಿಗಳ ಮನೆಗೆ ನುಗ್ಗಿ ಧಾಳಿ ಮಾಡಿದ ಎಸಿಬಿ…

ಬೆಳ್ಳಂ-ಬೆಳಗ್ಗೆ ಭ್ರಷ್ಟ ಪೊಲೀಸ್ ಅಧಿಕಾರಿಗಳ ಮನೆಗೆ ನುಗ್ಗಿ ಧಾಳಿ ಮಾಡಿದ ಎಸಿಬಿ

ಬೆಂಗಳೂರು: ಪೊಲೀಸ್ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದ್ದ ಸಿಗರೇಟ್ ವಿತರಕರಿಂದ ಹಾಗೂ ಮಾಸ್ಕ್ ತಯಾರಿಕ ಕಂಪನಿ ಮಾಲೀಕರಿಂದ,

ಕೋಟಿ ಕೋಟಿ ಡೀಲ್ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಸಿಪಿ ಮತ್ತು ಇಬ್ಬರು ಇನ್ಸ್‍ಪೆಕ್ಟರ್‍ಗಳ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು (ಮೇ 22) ದಾಳಿ ನಡೆಸಿದ್ದಾರೆ.

ಇಂದು ಬೆಳ್ಳಂ-ಬೆಳಗ್ಗೆ ಭ್ರಷ್ಟ ಆರೋಪಿ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಎಸಿಪಿ ಪ್ರಭುಶಂಕರ್, ಇನ್ಸ್ ಪೆಕ್ಟರ್ ಅಜಯ್, ನಿರಂಜನ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಸಿಗರೇಟ್ ಡೀಲರ್ಸ್ ಮತ್ತು ತಂಬಾಕು ಡೀಲರ್ಸ್ ಗಳಿಂದ ಕೊಟ್ಯಂತರ ಲಂಚ ಪಡೆದ ಪ್ರಕರಣ ಇವರ ಮಲೆ ಇತ್ತು. ಹಾಗಾಗಿ ಈ ದಾಳಿ ನಡೆದಿದೆ.

ಸಹಕಾರ ನಗರದ ಎಸಿಪಿ ಪ್ರಭುಶಂಕರ್ ಮನೆ ಸೇರಿದಂತೆ ಒಟ್ಟು ನಗರದ ಏಳು ಕಡೆ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

ಆದರೆ ಎಸಿಬಿ ಅಧಿಕಾರಿಗಳ ಕೈಗೆ ಸಿಗದೆ ಎಸಿಪಿ ಪ್ರಭುಶಂಕರ್ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ.

ಹಾಗಾಗಿ ಪ್ರಭುಶಂಕರ್ ಅವರ ಪತ್ನಿಯನ್ನು ಕರೆಸಿ ಮನೆ ಬೀಗ ತೆಗೆಸಿರುವ ಅಸಿಬಿ ಅಧಿಕಾರಿಗಳು ಸಹಕಾರ ನಗರದಲ್ಲಿರುವ ಮನೆಯಲ್ಲಿ ಹಾಗೂ ಇತರೆಡೆ ಪರಿಶೀಲನೆ ನಡೆಸಿದ್ದಾರೆ.

ನಿನ್ನೆಯಷ್ಟೆ ಮೂರು ಜನ ಭ್ರಷ್ಟ ಅಧಿಕಾರಿಗಳ ಮೇಲೆ ಎಫ್.ಐ.ಆರ್ ದಾಖಲಾಗಿತ್ತು.

ಲಾಕ್ ಡೌನ್ ವೇಳೆ ಸಿಗರೇಟ್ ಮತ್ತು ತಂಬಾಕು ಡೀಲರ್​​ಗಳಿಂದ ಹಾಗೂ ನಕಲಿ ಮಾಸ್ಕ್ ಮಾರಾಟಗಾರರಿಂದ ಹಣ ಪಡೆದ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಎಸಿಪಿ ಮತ್ತು ಇಬ್ಬರು ಇನ್ಸ್‌ಪಕ್ಟರ್​​ ಮೇಲೆ ಎಸಿಬಿಯಲ್ಲಿ ಪ್ರತ್ಯೇಕ ಎಫ್.ಐ.ಆರ್ ದಾಖಲಾಗಿ ಅಮಾನತುಗೊಂಡಿದ್ದರು.

2 ಕೋಟಿ ರೂಪಾಯಿ ಲಂಚ, ಅಕ್ರಮ ಹಣ ಸುಲಿಗೆ ಆರೋಪ ಇವರ ಮೇಲಿತ್ತು. ಅಮಾನತುಗೊಂಡಿರುವ ಸಿಸಿಬಿ ಎಸಿಪಿ ಪ್ರಭುಶಂಕರ್, ಇನ್ಸ್‌ಪೆಕ್ಟರ್‌ಗಳಾದ ನಿರಂಜನ್ ಅಜಯ್ ವಿರುದ್ಧ ಎಸಿಬಿಯಲ್ಲಿ ಒಟ್ಟು ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸುವಂತೆ ಡಿಜಿ ಅಂಡ್ ಐಜಿಪಿ ಎಸಿಬಿಗೆ ವರ್ಗಾವಣೆ ಮಾಡಿದ್ದರು.

- Advertisment -

RECENT NEWS

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ ಬೆಳ್ತಂಗಡಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನಲ್ಲಿ ನಿರ್ಮಿಸಲಾದ ಮನೆಯ ಕೀಲಿ ಕೈ ಹಸ್ತಾಂತರ...

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ ಬೆಂಗಳೂರು: ಹಲವಾರು ದಿಟ್ಟ ಕ್ರಮಗಳಿಂದ ಸರಕಾರವನ್ನು ಹಲವು ಬಾರಿ ಎದುರು ಹಾಕಿಕೊಂಡಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು...