DAKSHINA KANNADA
ಬೈಕ್ ಕಾರು ನಡುವೆ ಭೀಕರ ಅಪಘಾತ ಉಳ್ಳಾಲ ಎಎಸ್ಐ ಶೇಖರ್ ಗಟ್ಟಿ ಗಂಭೀರ..!
Published
4 years agoon
By
Admin
ಕೊಲ್ಯ;ಬೈಕ್ ಕಾರು ನಡುವೆ ಭೀಕರ ಅಪಘಾತ; ಉಳ್ಳಾಲ ಎಎಸ್ಐ ಶೇಖರ್ ತ ಗಂಭೀರ..!
Accident Between Bike and Car; Ullala ASI Shekhar gatti is serious
ಮಂಗಳೂರು: ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಉಳ್ಳಾಲ ಪೊಲೀಸ್ ಠಾಣಾ ಎ.ಎಸ್.ಐ ಕಾಲಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು ಹೊರವಲಯದ ಕೊಲ್ಯ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.
ಘಟನೆಯಲ್ಲಿ ಮಕ್ಕಳಿಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಕೊಲ್ಯ ಮಲಯಾಳಕೋಡಿ ನಿವಾಸಿ ಶೇಖರ್ ಗಟ್ಟಿ (40) ಗಾಯಗೊಂಡವರು.ಮಂಗಳೂರು ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಕಾರು, ಶೇಖರ್ ಗಟ್ಟಿ ಹಾಗೂ ಮಕ್ಕಳಿಬ್ಬರು ತೆರಳುತ್ತಿದ್ದ ಬುಲೆಟ್ ಬೈಕಿಗೆ ಢಿಕ್ಕಿ ಹೊಡೆದಿದೆ.
ಕಾರು ಅವರ ಕಾಲಿನ ಮೇಲೆ ಚಲಿಸಿದ ಪರಿಣಾಮ ಕಾಲಿಗೆ ಗಂಭೀರ ಗಾಯಗಳಾಗಿವೆ. ಉಳ್ಳಾಲ ಪೊಲೀಸರು , ಸ್ಥಳೀಯರ ಸಹಕಾರದೊಂದಿಗೆ ಶೇಖರ್ ಗಟ್ಟಿಯವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಶೇಖರ್ ಗಟ್ಟಿ ಕಳೆದ ಎರಡು ವರ್ಷಗಳಿಂದ ಉಳ್ಳಾಲ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಧ್ಯ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
DAKSHINA KANNADA
ಅತ್ಯಂತ ಉದ್ದದ ಮಾನವ ಸರಪಳಿ: ದ.ಕ.ಜಿಲ್ಲೆಗೆ ದ್ವಿತೀಯ ಸ್ಥಾನ
Published
21 hours agoon
24/11/2024By
NEWS DESK2ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಜಿಲ್ಲೆಗಳಿಗೆ ಒಟ್ಟು ಐದು ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿತ್ತು. ಈ ವಿಭಾಗಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.
ನ.26ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
BIG BOSS
ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
Published
2 days agoon
23/11/2024ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.
‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು
DAKSHINA KANNADA
ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !
Published
2 days agoon
23/11/2024By
NEWS DESK3ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.
ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.
LATEST NEWS
ಪತ್ನಿಗೆ ಬೆಂ*ಕಿ ಹಚ್ಚಿ ತಲೆಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಅರೆಸ್ಟ್
ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ
ಬಿಗ್ಬಾಸ್ ಮನೆಯಲ್ಲಿನ ಸ್ಪರ್ಧಿಗಳ ವಯಸ್ಸೆಷ್ಟು ಗೊತ್ತಾ..?
ಮಂಗಳೂರಲ್ಲಿ ಸಮುದ್ರಕ್ಕೆ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಯತ್ನ
ಚಲಿಸುತ್ತಿರುವ ಬಸ್ಸಿನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟ ಯುವಕ
ನಿದ್ದೆಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ: ನಿಮಗೆ ಗೊತ್ತಾ!
Trending
- LATEST NEWS5 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru3 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION4 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS7 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!