ಸುಳ್ಯ: ಓವರ್‌ಟೇಕ್ ಮಾಡುವ ಭರದಲ್ಲಿ ಕಾರೊಂದು ಲಾರಿಗೆ ಢಿಕ್ಕಿ ಹೊಡೆದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಸುಳ್ಯದ ಕೌಡಿಚಾರಿನಲ್ಲಿ ನಡೆದಿದೆ.
ಅಪಘಾತಗೊಂಡ ಕಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಬ್ರೇಕ್ ಹಾಕಿದ ಇನ್ನೋವಾ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.
ಯಾವುದೇ ಹೆಚ್ಚಿನ ಅಪಾಯಗಳಿಲ್ಲದೆ ಪ್ರಯಾಣಿಕರು ಪವಾಡಸದೃಶ ಪಾರಾಗಿದ್ದಾರೆ.