ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿಹಳ್ಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
ಪುಂಜಾಲಕಟ್ಟೆಯಿಂದ ಬರುತ್ತಿದ್ದ ಕಾರು ಬಂಟ್ವಾಳ ಕಡೆಯಿಂದ ಬರುತ್ತಿದ್ದ ಮೆಸ್ಕಾಂ ಇಲಾಖೆಗೆ ಸೇರಿದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯಿಂದ ತಪ್ಪಿ ಸಲು ಪಿಕಪ್ ವಾಹನ ದ ಚಾಲಕ ಪ್ರಯತ್ನಿಸಿದಾಗ ಪಿಕಪ್ ರಸ್ತೆ ಬದಿಯಲ್ಲಿ ದ್ದ ಮನೆಗೆ ನುಗ್ಗಿ ಮನೆಯ ಗೋಡೆ ಜರಿದು ಬಿದ್ದಿದೆ.
ಮಣಿಹಳ್ಳ ನಿವಾಸಿ ಲಕ್ಷಣ್ ಎಂಬವರ ಮನೆಗೆ ಅಪಾರ ನಷ್ಟ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ.
ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.