Wednesday, October 5, 2022

ಬಂಟ್ವಾಳ: ರಸ್ತೆ ಮಧ್ಯೆ ಮಲಗಿದ್ದ ವ್ಯಕ್ತಿಯ ಮೇಲೆ ಹರಿದ ಬೈಕ್‌: ಓರ್ವ ಸಾವು, ಮತ್ತೋರ್ವ ಗಂಭೀರ

ಬಂಟ್ವಾಳ: ರಾತ್ರಿ ವೇಳೆ ರಸ್ತೆಯ ಮಧ್ಯೆ ಮಲಗಿದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಹರಿದ ಪರಿಣಾಮ ಆ ವ್ಯಕ್ತಿ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದ್ದು, ಅಪಘಾತ ದ ದೃಶ್ಯ ಸಿ‌ಸಿ.ಟಿ.ವಿಯಲ್ಲಿ ಸೆರೆಯಾಗಿದೆ.


ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50)ಮೃತಪಟ್ಟ ವ್ಯಕ್ತಿ.

ಮೆಲ್ಕಾರ್ ಸಮೀಪದ ಪೆಟ್ರೋಲ್ ಪಂಪ್ ಒಂದರ ಸಮೀಪ ವ್ಯಕ್ತಿಯೋರ್ವರು ನಡೆದುಕೊಂಡು ಬಂದು ಅ ಬಳಿಕ ರಸ್ತೆಯಲ್ಲಿ ಮಲಗುವ ದೃಶ್ಯ ಹಾಗೂ ಅ ಬಳಿಕ ಕೆಲವೇ ಹೊತ್ತಿನಲ್ಲಿ ದ್ವಿಚಕ್ರ ವಾಹನ ಮಲಗಿದ್ದ ವ್ಯಕ್ತಿಯ ಮೇಲೆ ಹರಿದು ಹೋಗಿ ಸ್ಕೂಟರ್ ಸವಾರ ಕೂಡ ರಸ್ತೆಗೆ ಎಸೆಯಲ್ಪಡುವ ದೃಶ್ಯ ಸೆರೆಯಾಗಿದೆ.

ಅಪಘಾತ ನಡೆದ ಕೂಡಲೇ ಇಬ್ಬರನ್ನು ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಆದರೆ ಕೃಷ್ಣ ಮೂರ್ತಿ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾನೆ.

ಸ್ಕೂಟರ್ ಸವಾರನಿಗೆ ಗಾಯವಾಗಿದ್ದು ಆತ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...