Monday, July 4, 2022

ಸರಣಿ ಅಪಘಾತ: ಇಬ್ಬರ ದುರ್ಮರಣ

ಬೆಳಗಾವಿ: ಟಿಪ್ಪರ್ ಹಾಗೂ ಎರಡು ಬೈಕುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಹಾಗೂ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ಬಳಿ ನಡೆದಿದೆ.


ಸರಣಿ ಅಪಘಾತದಲ್ಲಿ ಎರಡು ಬೈಕಗಳು ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೊಪೆಡ್ ಚಲಾಯಿಸುತ್ತಿದ್ದ ಪೂನಂ ಬಲಿರಾಮ ತಲವಾರೆ(25) ಸ್ಥಳದಲ್ಲೇ ಸಾವನ್ನಪ್ಪಿದರೆ, ಬೈಕ್ ಮೇಲಿದ್ದ ಬಾಳಪ್ಪ ಕುಮಾರ್ ಕಾಂಬ್ಳೆ(21) ಆಸ್ಪತ್ರೆಗೆ ದಾಖಲಿಸಿದ ಬಳಿಕ ಸಾವನ್ನಪ್ಪಿದ್ದಾರೆ.
ಅಪಘಾತದ ರಭಸಕ್ಕೆ ಲಾರಿ ಅಡಿ ಸಿಲುಕಿ ಮೊಪೆಡ್ ನೆಲಕ್ಕೆ ಉಜ್ಜಿ ಬೆಂಕಿ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಲ್ಲದೆ ಟಿಪ್ಪರ್ ಸಹ ಭಾಗಶಃ ಸುಟ್ಟು ಹೋಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿ ಸಿಬ್ಬಂಧಿ ಬೆಂಕಿ ಆರಿಸಿದ್ದಾರೆ. ರಾಯಭಾಗ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಲ್ಲಿದ್ದ ಡೆಡ್‌ ಬಾಡಿ ಎರಡು ದಿನಗಳ ಬಳಿಕ ಪತ್ತೆ

ಉಡುಪಿ: ಎರಡು ದಿನಗಳ ಹಿಂದೆ ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಿಂದ ನಾಪತ್ತೆಯಾದ ಓರ್ವನ ಶವ ಇಂದು ಬೈಂದೂರಿನ ಕಂಚುಗೋಡು ಎಂಬಲ್ಲಿ ಪತ್ತೆಯಾಗಿದೆ.ಮೃತನನ್ನು ರೋಶನ್ ಆಚಾರ್ಯ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ...

ಸುಳ್ಯ: ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿ-ಸಹಸವಾರೆಗೆ ಗಾಯ

ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ವಾಹನಗಳ ಸವಾರರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಎಂಬಲ್ಲಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸುಳ್ಯದ ಮಾಧ್ಯಮವೊಂದರ...

ಮಂಗಳೂರು: ಬೆಂಗ್ರೆ ವಾರ್ಡಿನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್

ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ...