ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಮೂಲದ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪುತ್ತೂರು ಮೂಲದ ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್ ಮೃತ ಯುವಕ.
ಸೋಮವಾರ ಪುತ್ತೂರಿನಿಂದ ಬೆಂಗಳೂರಿಗೆ ಸ್ಕೂಟರ್‌ನಲ್ಲಿ ತೆರಳಿದ್ದ ಈತ ಸ್ಕೂಟರ್ ಮೈಸೂರು ರಸ್ತೆ ಬಳಿ ಡಿವೈಡರ್ ಗೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಈತ ಪುತ್ತೂರು ಬಸ್ ಸ್ಟಾಂಡ್ ನಲ್ಲಿ ಬ್ಯಾಗ್ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದೀಗ ಆಶಿಕ್ ನಿಧನದಿಂದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.