Saturday, November 27, 2021

ಭೀಕರ ರಸ್ತೆ ಅಪಘಾತ: ಕಂದಮ್ಮ ಸೇರಿ ಒಂದೇ ಕುಟುಂಬದ 8 ಮಂದಿ ಸಾವು

ಹರಿಯಾಣ: ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ನಡೆದಿದೆ.


ಕೆಎಂಪಿ ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್​ ನಡುವೆ ದುರಂತ ಘಟಿಸಿದೆ. ಉತ್ತರ ಪ್ರದೇಶದ ಕಡೆ ಪ್ರಯಾಣ ಬೆಳೆಸುತ್ತಿದ್ದ ಕಾರೊಂದರಲ್ಲಿ ಒಟ್ಟು 11 ಮಂದಿ ಇದ್ದು, 8 ಮಂದಿ ಬಲಿಯಾಗಿದ್ದಾರೆ.

ಸ್ಥಳಕ್ಕೆ ಬಹದ್ದೂರ್​ಗಢ್ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಂದು ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರ ಗುರುತು ಪತ್ತೆ ಹಚ್ಚಲಾಗಿಲ್ಲ. ಘಟನೆ ಬಳಿಕ ಟ್ರಕ್​ ಚಾಲಕ ಪರಾರಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...