KADABA
ಬೆಳ್ಳಂಬೆಳಗ್ಗೆ ಕಡಬದಲ್ಲಿ ಭೀಕರ ಅಪಘಾತ-ಇಬ್ಬರಿಗೆ ಗಂಭೀರ ಗಾಯ
ಕಡಬ: ಕಾರು ಹಾಗೂ ಜೀಪ್ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿ ಬಿಳಿನೆಲೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಆಗಮಿಸುತ್ತಿದ್ದ ಜೀಪ್ ನಡುವೆ ಬಿಳಿನೆಲೆ ಸೇತುವೆಯ ಬಳಿ ಮುಖಾಮುಖಿ ಢಿಕ್ಕಿ ಹೊಡೆದಿದೆ.
ಘಟನೆಯಿಂದಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ
ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
- FILM6 days ago
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
- DAKSHINA KANNADA6 days ago
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
- FILM6 days ago
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!