Connect with us

LATEST NEWS

ಬೆಳ್ಳಂ ಬೆಳಗ್ಗೆ ಓವರ್‌ಸ್ಪೀಡ್‌ ಚಾಲನೆ- ಫುಟ್‌ಪಾತ್‌ಗೆ ತಲೆ ಬಡಿದು ಸವಾರ ಗಂಭೀರ

Published

on

ಮಂಗಳೂರು: ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸುತ್ತಿದ್ದ ಸ್ಕೂಟರ್‌ ನಿಯಂತ್ರಣ ತಪ್ಪಿದ ಪರಿಣಾಮ ಸವಾರ ಬಿದ್ದು ಗಂಭೀರ ಗಾಯಗೊಂಡ ಘಟನೆ ನಗರದ ಬಲ್ಮಠದ ನ್ಯೂ ಸ್ವಾಗತ್‌ ಹೊಟೇಲ್‌ ಬಳಿ ಇಂದು ಮುಂಜಾನೆ ನಡೆದಿದೆ.


ಗಾಯಗೊಂಡ ವ್ಯಕ್ತಿಯನ್ನು ಗೌಶಿಕ್ ಎಂದು ಗುರುತಿಸಲಾಗಿದೆ.
ಘಟನೆ ಹಿನ್ನೆಲೆ
ಇಂದು ಬೆಳಗ್ಗೆ 6.25ರ ಸುಮಾರಿಗೆ ನಗರದ ಬಲ್ಮಠ ಕಡೆಯಿಂದ ಬೆಂದೂರ್ ವೆಲ್ ಕಡೆಗೆ ಅತೀ ವೇಗದಿಂದ ತನ್ನ ಸ್ಕೂಟರ್‌ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ನ್ಯೂ ಸ್ವಾಗತ ಹೊಟೇಲ್ ಮುಂಭಾಗ ಕಾಂಕ್ರೀಟ್‌ ರಸ್ತೆಗೆ ಬಿದ್ದಿದ್ದಾರೆ.

ವೇಗದ ರಭಸಕ್ಕೆ ಸ್ಕೂಟರ್ ಸಮೇತ ಸವಾರನನ್ನು ಸುಮಾರು 20 ಅಡಿ ದೂರದವರೆಗೆ ಎಳೆದುಕೊಂಡು ಹೋಗಿದೆ. ಈ ವೇಳೆ ಸವಾರ ಫುಟ್‌ಪಾತ್‌ಗೆ ಬಿದ್ದ ಪರಿಣಾಮ ಸವಾರನ ತಲೆಗೆ ಹಾಗೂ ಮುಖಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದೆ.

ಈ ಬಗ್ಗೆ ಮಂಗಳೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ವೀಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.

DAKSHINA KANNADA

ಕಡಬ: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Published

on

ಕಡಬ: ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ(ಮೇ.11) ಸಂಜೆ ನಡೆದಿದೆ.

rail dikki

ಮುಂದೆ ಓದಿ..; ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ.  ಈ ಬಗ್ಗೆ ಕಡಬ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

LATEST NEWS

ಮಾಜಿ ಸಿಎಂ ಎಸ್.ಎಂ. ಕೃಷ್ಣರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ!

Published

on

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ(91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಏಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚೇತರಿಸಿಕೊಂಡಿದ್ದ ಅವರು ಡಿಸ್ಚಾರ್ಜ್ ಆಗಿದ್ದರು.
ಮತ್ತೆ ಎಸ್‌.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನು ಓದಿ:ಪ್ರತಿ ಮಹಿಳೆಗೆ ಸಿಗುತ್ತೆ 3 ಲಕ್ಷ ರೂಪಾಯಿ..! ಈ ಹಣ ಸಿಗಲು ಹೀಗೆ ಮಾಡಿ ಸಾಕು!

ಆಸ್ಪತ್ರೆ ಪ್ರಕಟಣೆ :

ಎಸ್ ಎಂ ಕೃಷ್ಣ ಅವರು ಐಸಿಯುನಲ್ಲಿದ್ದಾರೆ . ವಿಶೇಷ ನಿಗಾ ವಹಿಸಲಾಗುತ್ತಿದೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

Continue Reading

BANTWAL

ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

Published

on

ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.

ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 

ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ

ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :

ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending