Monday, January 24, 2022

ಉಡುಪಿ: ಅಪಘಾತಕ್ಕೀಡಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಉಡುಪಿ: ಎರಡು ದಿನಗಳ ಹಿಂದೆ ಸಂಜೆ ಕಾರು ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್‌ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಇಂದು ನಡೆದಿದೆ.
ಮಂಚಿಕೆರೆಯ ನಿವಾಸಿ ಉಮೇಶ್ ಮಡಿವಾಳ ಮೃತ ವ್ಯಕ್ತಿ


ಶುಕ್ರವಾರ(ಅ.29)ರಂದು ಸಂಜೆ ಅಲೆವೂರು ಕಡೆಯಿಂದ ಮಣಿಪಾಲ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಉಮೇಶ್ ಮಡಿವಾಳಗೆ ಎದುರಿನಿಂದ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದೆ.

ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಉಮೇಶ್ ಅವರ ಕೈ, ಕಾಲು ಹಾಗೂ ತಲೆಗೆ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಅವರು ಮೃತಪಟ್ಟಿದ್ದಾರೆ.
ಕುಡಿತದ ಅಮಲಿನಲ್ಲಿದ್ದ ಕಾರು ಚಾಲಕ
ಕೇರಳ ನೋಂದಣಿಯ ಕಾರು ಚಾಲಕನು ವಿಪರೀತ ಮದ್ಯಪಾನ ಮಾಡಿದ್ದನು ಎನ್ನಲಾಗಿದೆ. ಮದ್ಯದ ಅಮಾಲಿನಲ್ಲಿ ಅತೀ ವೇಗವಾಗಿ ಕಾರು ಚಾಲಾಯಿಸಿಕೊಂಡು ಬಂದು ಉಮೇಶ್ ಅವರ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ.

ಘಟನೆ ನಡೆದ ಬಳಿಕ ಕಾರು ಚಾಲಕ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಕೂಡಲೇ ಸ್ಥಳೀಯರು ಚಾಲಕನನ್ನು ಸೆರೆಹಿಡಿದಿದ್ದರು.

Hot Topics

ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಧನ ಸಹಾಯ ಹಾಗೂ ಅಕ್ಕಿ ವಿತರಣೆ

ಕಾರ್ಕಳ: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರು ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ಟ್ರಸ್ಟ್ ವತಿಯಿಂದ ಮಿತ್ತಬೈಲ್...

ಕಾರ್ಕಳದಲ್ಲಿ ಕೊರೋನಾದಂತೆ ಹರಡುತ್ತಿದೆ ಕಾಲು ಬಾಯಿ ರೋಗ

ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ.ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.ಕಾರ್ಕಳ ನಗರ, ತೆಳ್ಳಾರು, ಮಿಯಾರು,...

ಮಂಗಳೂರು: ಮಾಲೀಕನ ಎದುರೇ ಸ್ಕೂಟರ್‌ ಕದ್ದೊಯ್ದ ಕಳ್ಳ

ಮಂಗಳೂರು: ಮಾಲೀಕನ ಎದುರಿನಲ್ಲಿಯೇ ಕಳ್ಳನೊಬ್ಬ ಸ್ಕೂಟರ್‌ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.ರಿನ್ಸ್‌ ಮೋನ್‌ ಕ್ಸೇವಿಯರ್‌ ಅವರು ಜ.7ರಂದು ಬೆಳಗ್ಗೆ 11.30ರ ವೇಳೆಗೆ ಪಾರ್ಸಲ್‌ ಬಸ್‌ಗೆ ನೀಡಲು ಜ್ಯೋತಿ ವೃತ್ತದ ಬಳಿ ಸ್ಕೂಟರ್‌...